ಮೇ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು 2021ರ ಮೇ ತಿಂಗಳಿನ ತನ್ನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ವರದಿಯ ಪ್ರಕಾರ ಕಳೆದ ತಿಂಗಳು, ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ಒಟ್ಟು 58,168 ದ್ವಿಚಕ್ರ ವಾಹನಗಳ ಮಾರಾಟಗೊಳಿಸಿವೆ.

ಮೇ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದ ಹೋಂಡಾ ಮೋಟಾರ್‌ಸೈಕಲ್

ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ 2,83,045 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.79 ರಷ್ಟು ಕುಸಿದಿದೆ.ಇನ್ನು ದೇಶದಲ್ಲಿ ಕರೋನಾ ಮಹಾಮಾರಿ ಆರ್ಭಟ ಇಳಿಕೆಯಾಗುತ್ತಿದೆ. ಆದರೆ ಕಳೆದ ತಿಂಗಳಿನಲ್ಲಿ ಕರೋನಾ ದಾಖಲೆಯ ಮಟ್ಟದಲ್ಲಿ ಕರೋನಾ ಪ್ರಕರಣಗಳು ದಾಖಲಾಗುತ್ತಿತ್ತು. ಇಂತಹ ಸಂದರ್ಭದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ 38,763 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ.

ಮೇ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದ ಹೋಂಡಾ ಮೋಟಾರ್‌ಸೈಕಲ್

ಕಳೆದ ತಿಂಗಳಿನಲ್ಲಿ ಮೇ ತಿಂಗಳಿನಲ್ಲಿ ಲಾಕ್‌ಡೌನ್‌ಗಳಿಂದಾಗಿ ಶೇಕಡಾ ಶೇ.80 ರಷ್ಟು ಕುಸಿದಿದೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಹೊಸ ಮಾರ್ಗಸೂಚಿಗಳ ಪ್ರಕಾರ ಸಿಟಿಗಳಲ್ಲಿ ಕಂಡುಬರುವ ಆರ್ಥಿಕ ಚಟುವಟಿಕೆಗಳಲ್ಲಿ ಸ್ವಲ್ಪ ವಿಶ್ರಾಂತಿ, ನಮ್ಮ ಡೀಲರುಗಳ ಕಾರ್ಯಾಚರಣೆಗಳಲ್ಲಿ ಕ್ರಮೇಣ ಪುನರಾರಂಭಿಸುವುದರ ಬಗ್ಗೆ ನಾವು ಆಶಾವಾದಿಗಳಾಗಿದ್ದೇವೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಮೇ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದ ಹೋಂಡಾ ಮೋಟಾರ್‌ಸೈಕಲ್

ಅದೇ ಸಮಯದಲ್ಲಿ ನಮ್ಮ ಗ್ರಾಹಕರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಕಾಳಜಿ ವಹಿಸುತ್ತೇವೆ. ಮುಂದೆ ಸಾಗುತ್ತಿರುವಾಗ, ನಾವು ನಮ್ಮ ಉತ್ಪಾದನೆಯನ್ನು ಸರಿಹೊಂದಿಸುತ್ತೇವೆ ಅದಕ್ಕೆ ತಕ್ಕಂತೆ ಮಾರುಕಟ್ಟೆ ಬೇಡಿಕೆ ಇದೆ ಎಂದು ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾದ ಮಾರಾಟ ಮತ್ತು ಮಾರುಕಟ್ಟೆ ನಿರ್ದೇಶಕ ಯದ್ವಿಂದರ್ ಸಿಂಗ್ ಗುಲೇರಿಯಾ ಹೇಳಿದ್ದಾರೆ.

ಮೇ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ಸಹ ಕೋವಿಡ್ ಪರಿಣಾಮ ಸುಮಾರು ಹತ್ತು ದಿನಗಳಿಂದ ಬೈಕ್ ಉತ್ಪಾದನೆಯನ್ನು ಸ್ಥಗಿತಗೊಳಿಸಿತ್ತು. ಇತ್ತಿಚೆಗೆ ಕಂಪನಿಯು ದೇಶದ ವಿವಿಧ ರಾಜ್ಯಗಳಲ್ಲಿರುವ ತನ್ನ ಪ್ರಮುಖ ಮೂರು ಘಟಕಗಳಲ್ಲೂ ಉತ್ಪಾದನೆ ಪ್ರಾರಂಭಿಸಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಮೇ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದ ಹೋಂಡಾ ಮೋಟಾರ್‌ಸೈಕಲ್

ಕೇಂದ್ರ ಮತ್ತು ರಾಜ್ಯ ಸರ್ಕಾರ ಗೈಡ್‌ಲೈನ್ಸ್ ಪ್ರಕಾರವೇ ವಾಹನ ಉತ್ಪಾದನೆಯನ್ನು ಕನಿಷ್ಠ ಸಂಖ್ಯೆಯ ಉದ್ಯೋಗಿಗಳೊಂದಿಗೆ ಆರಂಭಿಸಿದ್ದು, ಉದ್ಯೋಗಿಗಳ ಆರೋಗ್ಯ ಕಾಳಜಿಗೆ ಹಲವಾರು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕಂಪನಿ ಹೇಳಿದೆ.

ಮೇ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದ ಹೋಂಡಾ ಮೋಟಾರ್‌ಸೈಕಲ್

ಹರಿಯಾಣದ ಮನೇಸರ್, ಕರ್ನಾಟಕದ ನರಸಾಪುರ ಹಾಗೂ ಗುಜರಾತ್'ನ ವಿಠಾಪುರಗಳಲ್ಲಿನ ಘಟಕಗಳಲ್ಲಿ ವಾಹನ ಉತ್ಪಾದನೆಗೆ ಪುನಾರಂಭಿಸಲಾಗಿದ್ದು, ಉದ್ಯೋಗಿಗಳಿಗೆ ಹ್ಯಾಂಡ್ ಗ್ಲೌಸ್, ಸ್ಯಾನಿಟೈಜರ್, ಮಾಸ್ಕ್ ಮತ್ತು ನಿಗದಿತ ಅವಧಿಯೊಳಗೆ ಪರೀಕ್ಷೆಗಳನ್ನು ಕೈಗೊಳ್ಳಲು ಹೋಂಡಾ ಮೋಟಾರ್‌ಸೈಕಲ್ ಕಂಪನಿ ನಿರ್ಧರಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಮೇ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದ ಹೋಂಡಾ ಮೋಟಾರ್‌ಸೈಕಲ್

ಇನ್ನು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಇತ್ತೀಚೆಗೆ ಭಾರತದಲ್ಲಿ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಪೇಟೆಂಟ್ ನೋಂದಣಿಯನ್ನು ಸಲ್ಲಿಸಿದೆ. ಹೋಂಡಾ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯ ಬಗ್ಗೆ ವದಂತಿಗಳಿವೆ.

ಮೇ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದ ಹೋಂಡಾ ಮೋಟಾರ್‌ಸೈಕಲ್

ಇನ್ನು ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ತನ್ನ ಹಲವಾರು ಮಾದರಿಗಳ ಮೇಲೆ ಕ್ಯಾಶ್ ಬ್ಯಾಕ್ ಆಫರ್ ಗಳನ್ನು ಕೂಡ ನೀಡುತ್ತಿದ್ದಾರೆ. ಇನ್ನು ದೇಶದಲ್ಲಿ ಕೊರೋನಾ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿರುವುದರಿಂದ ಮುಂದಿನ ದಿನಗಳನ್ನು ಹೋಂಡಾ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಸುಧಾರಣೆಯಾಗಬಹುದು.

Most Read Articles

Kannada
English summary
Honda Two-Wheeler Sales Drop Below 60,000. Read In Kannada.
Story first published: Wednesday, June 2, 2021, 21:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X