ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಆಯ್ದ ಸ್ಖೂಟರ್ ಮತ್ತು ಬೈಕ್ ಮಾದರಿಗಳ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್ ಅನ್ನು ನೀಡುತ್ತಿದೆ. ಇದೀಗ ಹೋಂಡಾ ಕಂಪನಿಯು ತನ್ನ ಹಾರ್ನೆಟ್ 2.0 ಬೈಕಿನ ಮೇಲೆ ಕ್ಯಾಶ್‌ಬ್ಯಾಕ್ ಆಫರ್ ಅನ್ನು ಘೊಷಿಸಿದೆ.

ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಖರೀದಿಸುವಾಗ ರೂ.3500 ವರೆಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ಅನ್ನು ಗ್ರಾಹಕರು ಪಡೆಯಬಹುದು. ಆದರೆ ಇದಕ್ಕೆ ತನ್ನದೇ ಆದ ಕೆಲವು ನಿಯಮಗಳು ಮತ್ತು ಕೆಲವು ಷರತ್ತುಗಳನ್ನು ಒಳಗೊಂಡಿವೆ. ಈ ಕೊಡುಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಇಎಂಐ ವಹಿವಾಟಿನಲ್ಲಿ ಮಾತ್ರ ಮಾನ್ಯವಾಗಿರುತ್ತದೆ ಮತ್ತು ಕನಿಷ್ಠ ವಹಿವಾಟು ಮೌಲ್ಯವು ರೂ.40,000 ರೂಪಾಯಿಗಳಾಗಿರಬೇಕು ಎಂದು ಹೋಂಡಾ ಕಂಪನಿ ಹೇಳಿದೆ.

ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಕ್ಯಾಶ್‌ಬ್ಯಾಕ್ ಆಫರ್ ಜೂನ್ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ. ಈ ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಮೇಲೆ ನೀಡಿರುವ ಕ್ಯಾಶ್‌ಬ್ಯಾಕ್ ಆಫರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಹತ್ತಿರದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯ ಡೀಲರ್‌ಶಿಪ್‌ಗೆ ಭೇಟಿ ನೀಡಿ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಸರಣಿಯಲ್ಲಿ ಹಾರ್ನೆಟ್ 2.0 ಮಾದರಿಯು ಪ್ರೀಮಿಯಂ ಬೈಕ್ ಆಗಿದೆ. ಈ ಹೋಂಡಾ ಹಾರ್ನೆಟ್ 2.0 ಬೈಕ್ ಪಿಜಿಎಂ-ಫೈ ತಂತ್ರಜ್ಞಾನದೊಂದಿಗೆ ಬ್ರಾಂಡ್‌ನ ಹೊಸ ಬಿಎಸ್-6 ಪ್ರೇರಿತ 184 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 17 ಬಿಹೆಚ್‌ಪಿ ಮತ್ತು 6000 ಆರ್‌ಪಿಎಂನಲ್ಲಿ 16.1 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಇನ್ನು ಈ ಹೊಸ ಹೋಂಡಾ ಹಾರ್ನೆಟ್ 2.0 ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಗೋಲ್ಡನ್ ಯುಎಸ್ಡಿ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಹೊಂದಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಇನ್ನು ಪ್ರಮುಖವಾಗಿ ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 276 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಅನ್ನು ಒಳಗೊಂಡಿದೆ. ಇದರೊಂದಿಗೆ ಸ್ಟ್ಯಾಂಡರ್ಡ್ ಆಗಿ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ನೀಡಿದೆ.

ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಬೈಕಿನಲ್ಲಿ 17 ಇಂಚಿನ ವ್ಹೀಲ್ ಗಳಲ್ಲಿ ಮುಂಭಾಗದಲ್ಲಿ 110/70 ಮತ್ತು ಹಿಂಭಾಗದಲ್ಲಿ 140/70 ಪ್ರೊಫೈಲ್‌ಗಳನ್ನು ಒಳಗೊಂಡಿದೆ.ಇನ್ನು ಈ ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಬೈಕಿನಲ್ಲಿ ಅಗ್ರೇಸಿವ್ ಕ್ರೀಸ್‌ಗಳು, ಬಾಡಿ ಲೈನ್ಸ್ ಮತ್ತು ಗ್ರಾಫಿಕ್ಸ್‌ನೊಂದಿಗೆ ಸ್ಪೋರ್ಟಿ ವಿನ್ಯಾಸವನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಹೊಸ ಬೈಕಿನಲ್ಲಿ ಅಲಾಯ್ ವ್ಹೀಲ್, ಅಲಾಯ್ ಫುಟ್‌ಪೆಗ್ಸ್, ಎಂಜಿನ್ ಸ್ಟಾಪ್ ಸ್ವಿಚ್, ಹಝರ್ಡ್ ಲೈಟ್, ಎಲ್ಇಡಿ ಹೆಡ್‌ಲ್ಯಾಂಪ್, ಎಕ್ಸ್ ಆಕಾರದ ಎಲ್ಇಡಿ ಟೈಲ್‌ಲೈಟ್, ಎಲ್ಇಡಿ ಇಂಡಿಕೇಟರ್ ಮತ್ತು ಸಂಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ.

ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಸಾಂಗ್ರಿಯಾ ರೆಡ್ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಮತ್ತು ಮ್ಯಾಟ್ ಮಾರ್ವೆಲ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಹಾರ್ನೆಟ್ 2.0 ಭಾರತೀಯ ಮಾರುಕಟ್ಟೆಯ 180-200 ಸಿಸಿ ವಿಭಾಗದಲ್ಲಿ ಹೋಂಡಾ ಕಂಪನಿಯ ಮೊದಲ ಬೈಕ್ ಆಗಿದೆ. ಉತ್ತಮ ಫೀಚರ್ ಗಳೊಂದಿಗೆ ಸ್ಪೋರ್ಟಿ ಲುಕ್ ಹೊಂದಿರುವ ಈ ಹೋಂಡಾ ಹಾರ್ನೆಟ್ 2.0 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಜಾಜ್ ಪಲ್ಸರ್ 180 ಮತ್ತು ಟಿವಿಎಸ್ ಅಪಾಚೆ ಆರ್‌ಟಿಆರ್ 200 ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ.

Article Published On: Wednesday, May 19, 2021, 14:59 [IST]
English summary
New Honda Hornet 2.0 Cashback Offer Announced. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+