ಹೊಸ ಹೋಂಡಾ ಎಸ್‌ಪಿ 125 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಆಯ್ದ ಸ್ಕೂಟರ್ ಮತ್ತು ಬೈಕ್ ಮಾದರಿಗಳ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್ ಅನ್ನು ಮತ್ತಷ್ಟು ವಿಸ್ತರಿಸಿದೆ. ಇದೀಗ ಹೋಂಡಾ ಕಂಪನಿಯು ತನ್ನ ಎಸ್‌ಪಿ 125 ಬೈಕಿನ ಮೇಲೆ ಕ್ಯಾಶ್‌ಬ್ಯಾಕ್ ಆಫರ್ ಅನ್ನು ಘೊಷಿಸಿದೆ.

ಹೊಸ ಹೋಂಡಾ ಎಸ್‌ಪಿ 125 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೊಸ ಹೋಂಡಾ ಎಸ್‌ಪಿ 125 ಬೈಕ್ ಖರೀದಿಸುವಾಗ ರೂ.3500 ವರೆಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ಅನ್ನು ಗ್ರಾಹಕರು ಪಡೆಯಬಹುದಾಗಿದೆ. ಆದರೆ ಇದಕ್ಕೆ ತನ್ನದೇ ಆದ ಕೆಲವು ನಿಯಮಗಳು ಮತ್ತು ಷರತ್ತುಗಳಿವೆ. ಈ ಕೊಡುಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಇಎಂಐ ವಹಿವಾಟಿನಲ್ಲಿ ಮಾತ್ರ ಮಾನ್ಯವಾಗಿರುತ್ತದೆ ಮತ್ತು ಕನಿಷ್ಠ ವಹಿವಾಟು ಮೌಲ್ಯವು ರೂ.40,000 ಗಳಾಗಿರಬೇಕು ಎಂದು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಹೇಳಿದೆ.

ಹೊಸ ಹೋಂಡಾ ಎಸ್‌ಪಿ 125 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಕ್ಯಾಶ್‌ಬ್ಯಾಕ್ ಆಫರ್ ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ. ಈ ಹೊಸ ಹೋಂಡಾ ಎಸ್‌ಪಿ 125 ಬೈಕ್ ಮೇಲೆ ನೀಡಿರುವ ಕ್ಯಾಶ್‌ಬ್ಯಾಕ್ ಆಫರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಹತ್ತಿರದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯ ಡೀಲರ್‌ಶಿಪ್‌ಗೆ ಭೇಟಿ ನೀಡಿ.

ಹೊಸ ಹೋಂಡಾ ಎಸ್‌ಪಿ 125 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಎಸ್‌ಪಿ 125 ಬೈಕಿನ ಬಗ್ಗೆ ಹೇಳುವುದಾದರೆ, 124 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 7,500 ಆರ್‌ಪಿಎಂನಲ್ಲಿ 10.7 ಬಿಹೆಚ್‌ಪಿ ಪವರ್ ಹಾಗೂ 9,000 ಆರ್‌ಪಿಎಂನಲ್ಲಿ 10.9 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನಲ್ಲಿ ಐದು ಸ್ಪೀಡಿನ ಗೇರ್‌ಬಾಕ್ಸ್‌ ಅಳವಡಿಸಲಾಗಿದೆ.

ಹೊಸ ಹೋಂಡಾ ಎಸ್‌ಪಿ 125 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಎಸ್‌ಪಿ 125 ಬೈಕಿನಲ್ಲಿ ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದು ಬೈಕಿನ ಸರಾಸರಿ ಮೈಲೇಜ್, ಚಲಿಸಿರುವ ದೂರ, ಗೇರ್ ಪೊಸಿಷನ್ ಇಂಡಿಕೇಟರ್ ಹಾಗೂ ಸರ್ವಿಸ್ ಡ್ಯೂ ಇಂಡಿಕೇಟರ್‍‍ಗಳ ಮಾಹಿತಿಯನ್ನು ಪ್ರದರ್ಶಿಸುತ್ತದೆ.

ಹೊಸ ಹೋಂಡಾ ಎಸ್‌ಪಿ 125 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಬೈಕ್ ಎಲ್‌ಇಡಿ ಹೆಡ್‌ಲ್ಯಾಂಪ್‌, ಎಂಜಿನ್ ಸ್ಟಾರ್ಟ್/ಸ್ಟಾಪ್, ಇಂಟಿಗ್ರೇಟೆಡ್ ಹೆಡ್‌ಲ್ಯಾಂಪ್ ಬೀಮ್, ಪಾಸಿಂಗ್ ಸ್ವಿಚ್, ಸ್ಪೋರ್ಟಿ ಅಲಾಯ್ ವ್ಹೀಲ್ಸ್ ಹಾಗೂ ಕ್ರೋಮ್ ಎಕ್ಸಾಸ್ಟ್ ಮಫ್ಲರ್ ಕವರ್‍‍ಗಳನ್ನು ಸಹ ಹೊಂದಿದೆ.

ಹೊಸ ಹೋಂಡಾ ಎಸ್‌ಪಿ 125 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಎಸ್‍‍ಪಿ 125 ಸ್ಪೋರ್ಟಿ ಬಾಡಿ ಗ್ರಾಫಿಕ್ಸ್ ಹಾಗೂ ಸ್ಪೋರ್ಟಿ ಟ್ಯಾಂಕ್ ವಿನ್ಯಾಸವನ್ನು ಹೊಂದಿದೆ. ಈ ಹೊಸ ಬೈಕ್ ಸ್ಟ್ರೈಕಿಂಗ್ ಗ್ರೀನ್, ಇಂಪೀರಿಯಲ್ ರೆಡ್ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ ಹಾಗೂ ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರುತ್ತದೆ.

ಹೊಸ ಹೋಂಡಾ ಎಸ್‌ಪಿ 125 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಸ್ಟ್ಯಾಂಡರ್ಡ್ ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗದಲ್ಲಿ ಡ್ಯುಯಲ್ ಶಾಕ್ ಅಬ್ಸರ್ವರ್‍‍‍ಗಳಿವೆ. ಈ ಬೈಕಿನಲ್ಲಿ ಡ್ರಮ್ ಮತ್ತು ಡಿಸ್ಕ್ ಬ್ರೇಕ್ ಆಯ್ಕೆಗಳನ್ನು ಹೊಂದಿವೆ.

ಹೊಸ ಹೋಂಡಾ ಎಸ್‌ಪಿ 125 ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಎಸ್‍‍ಪಿ 125 ಬೈಕಿನಲ್ಲಿ 18 ಇಂಚಿನ ವ್ಹೀಲ್‍‍ಗಳಿದ್ದು, ಎರಡೂ ಬದಿಯಲ್ಲಿ 80/100 ಟಯರ್ ಪ್ರೊಫೈಲ್‌ಗಳಿವೆ. ಇನ್ನು ಈ ಬೈಕಿನಲ್ಲಿ ಹೆಚ್‌ಇಟಿ (ಹೋಂಡಾ ಇಕೋ ಟೆಕ್ನಾಲಜಿ) ಯನ್ನು ಹೊಂದಿದೆ. ಇದು ಮೈಲೇಜ್ ಅನ್ನು ಹೆಚ್ಚಿಸಲು ಸಹಕಾರಿಯಾಗಿರುತ್ತದೆ.

Article Published On: Wednesday, June 16, 2021, 19:51 [IST]
English summary
Honda Sp 125 Available With Cashback Offer. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+