ಹೊಸ ಹೋಂಡಾ ಯೂನಿಕಾರ್ನ್ ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಆಯ್ದ ಸ್ಕೂಟರ್ ಮತ್ತು ಬೈಕ್ ಮಾದರಿಗಳ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್ ಅನ್ನು ಮತ್ತಷ್ಟು ವಿಸ್ತರಿಸಿದೆ. ಇದೀಗ ಹೋಂಡಾ ಕಂಪನಿಯು ತನ್ನ ಯೂನಿಕಾರ್ನ್ ಬೈಕಿನ ಮೇಲೆ ಕ್ಯಾಶ್‌ಬ್ಯಾಕ್ ಆಫರ್ ಅನ್ನು ಘೊಷಿಸಿದೆ.

ಹೊಸ ಹೋಂಡಾ ಯೂನಿಕಾರ್ನ್ ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೊಸ ಹೋಂಡಾ ಯೂನಿಕಾರ್ನ್ ಬೈಕ್ ಖರೀದಿಸುವಾಗ ರೂ.3500 ವರೆಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ಅನ್ನು ಗ್ರಾಹಕರು ಪಡೆಯಬಹುದಾಗಿದೆ. ಆದರೆ ಇದಕ್ಕೆ ತನ್ನದೇ ಆದ ಕೆಲವು ನಿಯಮಗಳು ಮತ್ತು ಕೆಲವು ಷರತ್ತುಗಳನ್ನು ಒಳಗೊಂಡಿವೆ. ಈ ಕೊಡುಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಇಎಂಐ ವಹಿವಾಟಿನಲ್ಲಿ ಮಾತ್ರ ಮಾನ್ಯವಾಗಿರುತ್ತದೆ ಮತ್ತು ಕನಿಷ್ಠ ವಹಿವಾಟು ಮೌಲ್ಯವು ರೂ.40,000 ರೂಪಾಯಿಗಳಾಗಿರಬೇಕು ಎಂದು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಹೇಳಿದೆ.

ಹೊಸ ಹೋಂಡಾ ಯೂನಿಕಾರ್ನ್ ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಕ್ಯಾಶ್‌ಬ್ಯಾಕ್ ಆಫರ್ ಜೂನ್ 30ರವರೆಗೂ ಲಭ್ಯವಿರುತ್ತದೆ. ಈ ಹೊಸ ಹೋಂಡಾ ಯೂನಿಕಾರ್ನ್ ಬೈಕ್ ಮೇಲೆ ನೀಡಿರುವ ಕ್ಯಾಶ್‌ಬ್ಯಾಕ್ ಆಫರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಹತ್ತಿರದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯ ಡೀಲರ್‌ಶಿಪ್‌ಗೆ ಭೇಟಿ ನೀಡಿ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ಹೋಂಡಾ ಯೂನಿಕಾರ್ನ್ ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಬಿಎಸ್-6 ಹೋಂಡಾ ಯೂನಿಕಾರ್ನ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ, ಈ ಹೊಸ ಬೈಕಿನಲ್ಲಿ 162.7 ಸಿಸಿ, ಸಿಂಗಲ್ ಸಿಲಿಂಡರ್, ಫ್ಯೂಯಲ್-ಇಂಜೆಕ್ಟ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಹೊಸ ಹೋಂಡಾ ಯೂನಿಕಾರ್ನ್ ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಎಂಜಿನ್ 7,500 ಆರ್‌ಪಿಎಂನಲ್ಲಿ 12.5 ಬಿಹೆಚ್‍ಪಿ ಪವರ್ ಮತ್ತು 5,500 ಆರ್‌ಪಿಎಂನಲ್ಲಿ 14 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಹೊಸ ಹೋಂಡಾ ಯೂನಿಕಾರ್ನ್ ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಹೋಂಡಾ ಯೂನಿಕಾರ್ನ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಇಂಪೀರಿಯಲ್ ರೆಡ್ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ.

ಹೊಸ ಹೋಂಡಾ ಯೂನಿಕಾರ್ನ್ ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಇನ್ನು ಹೊಸ ಹೋಂಡಾ ಯೂನಿಕಾರ್ನ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಅಳವಡಿಸಲಾಗಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಹೊಸ ಹೋಂಡಾ ಯೂನಿಕಾರ್ನ್ ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಇನ್ನು ಪ್ರಮುಖವಾಗಿ ಸುರಕ್ಷತಾ ವಿಭಾಗದಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ನೀಡಲಾಗಿದೆ.

ಹೊಸ ಹೋಂಡಾ ಯೂನಿಕಾರ್ನ್ ಬೈಕ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಆಯ್ದ ಸ್ಕೂಟರ್ ಮತ್ತು ಬೈಕ್ ಮಾದರಿಗಳ ಮೇಲೆ ಕ್ಯಾಶ್‌ಬ್ಯಾಕ್ ಆಫರ್ ಅನ್ನು ನೀಡಲಾಗುತ್ತದೆ. ಈ ಕ್ಯಾಶ್‌ಬ್ಯಾಕ್ ಆಫರ್ ಗಳು ಮಾರಾಟವನ್ನು ಹೆಚ್ಚಿಸಲು ಸಹಾಯವಾಗಬಹುದು.

Article Published On: Monday, May 31, 2021, 17:25 [IST]
English summary
Honda Unicorn Available With Five Percent Cashback Offer. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+