ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಆಯ್ದ ಸ್ಖೂಟರ್ ಮತ್ತು ಬೈಕ್ ಮಾದರಿಗಳ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್ ಅನ್ನು ನೀಡಲಾಗುತ್ತಿದೆ. ಇದೀಗ ಹೋಂಡಾ ಕಂಪನಿಯು ತನ್ನ ಎಕ್ಸ್-ಬ್ಲೇಡ್ ಬೈಕಿನ ಮೇಲೆ ಕ್ಯಾಶ್‌ಬ್ಯಾಕ್ ಆಫರ್ ಅನ್ನು ಘೊಷಿಸಿದೆ.

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಖರೀದಿಸುವಾಗ ರೂ.3500 ವರೆಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ಅನ್ನು ಗ್ರಾಹಕರು ಪಡೆಯಬಹುದಾಗಿದೆ. ಆದರೆ ಇದಕ್ಕೆ ತನ್ನದೇ ಆದ ಕೆಲವು ನಿಯಮಗಳು ಮತ್ತು ಕೆಲವು ಷರತ್ತುಗಳನ್ನು ಒಳಗೊಂಡಿವೆ. ಈ ಕೊಡುಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಇಎಂಐ ವಹಿವಾಟಿನಲ್ಲಿ ಮಾತ್ರ ಮಾನ್ಯವಾಗಿರುತ್ತದೆ ಮತ್ತು ಕನಿಷ್ಠ ವಹಿವಾಟು ಮೌಲ್ಯವು ರೂ.40,000 ರೂಪಾಯಿಗಳಾಗಿರಬೇಕು ಎಂದು ಹೋಂಡಾ ಕಂಪನಿ ಹೇಳಿದೆ.

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಕ್ಯಾಶ್‌ಬ್ಯಾಕ್ ಆಫರ್ ಜೂನ್ 30ರವರೆಗೂ ಲಭ್ಯವಿರುತ್ತದೆ. ಈ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಮೇಲೆ ನೀಡಿರುವ ಕ್ಯಾಶ್‌ಬ್ಯಾಕ್ ಆಫರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಹತ್ತಿರದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯ ಡೀಲರ್‌ಶಿಪ್‌ಗೆ ಭೇಟಿ ನೀಡಿ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಸಿಂಗಲ್-ಡಿಸ್ಕ್ ಮತ್ತು ಡಬಲ್-ಡಿಸ್ಕ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಇನ್ನು ಈ ಹೋಂಡಾ ಎಕ್ಸ್-ಬ್ಲೇಡ್ ಬೈಕಿನಲ್ಲಿ 160 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ನವೀಕರಿಸಿದ ಎಂಜಿನ್‌ ಅನ್ನು ಅಳವಡಿಸಲಾಗಿದೆ.

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಎಂಜಿನ್ 8000 ಆರ್‌ಪಿಎಂನಲ್ಲಿ 13.67 ಬಿಹೆಚ್‌ಪಿ ಪವರ್ ಮತ್ತು 5500 ಆರ್‌ಪಿಎಂನಲ್ಲಿ 14.7 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಎಕ್ಸ್-ಬ್ಲೇಡ್ ಬೈಕಿನಲ್ಲಿರುವ ಎಂಜಿನ್ ಬ್ರಾಂಡ್‌ನ ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಸಿಸ್ಟಂ ಅನ್ನು ಹೊಂದಿದೆ. ಇದರಿಂದಾಗಿ ಈ ಬೈಕಿಗೆ ಸುಧಾರಿತ ಕಾರ್ಯಕ್ಷಮತೆ ಮತ್ತು ಹೆಚ್ಚಿನ ದಕ್ಷತೆಯನ್ನು ಒದಗಿಸುತ್ತದೆ.

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸಸ್ಪೆಂಕ್ಷನ್ ಸಿಸ್ಟಂ ಅನ್ನು ಹೊಂದಿದೆ. ಇನ್ನು ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ನೋಡುವುದಾದರೆ, ಮುಂಭಾಗದಲ್ಲಿ 276 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಮತ್ತು 130 ಎಂಎಂ ಡ್ರಮ್ ಬ್ರೇಕ್ ಗಳ ಆಯ್ಕೆಯನ್ನು ನೀಡಲಾಗಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಇನ್ನು ಈ ಬೈಕಿನಲ್ಲಿ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಈ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೇಸ್ ಮಾದರಿಯು 146 ಕೆಜಿ ತೂಕವಿದ್ದರೆ, ಟಾಪ್ ಸ್ಪೆಕ್ ಮಾದರಿಯು 147 ಕೆಜಿ ತೂಕವನ್ನು ಹೊಂದಿದೆ.

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಹೊಸ ರೋಬೋಕಾಪ್ ವಿನ್ಯಾಸದ ಎಲ್ಇಡಿ ಹೆಡ್ ಲ್ಯಾಂಪ್, ಟೇಲ್ ಲ್ಯಾಂಪ್, ಡ್ಯುಯಲ್ ಎಕ್ಸಾಸ್ಟ್ ಗಳನ್ನು ಒಳಗೊಂಡಿದೆ. ರಿಫ್ರೆಶ್ ಬಾಡಿ ಗ್ರಾಫಿಕ್ಸ್, ಹೊಸ ಅಲಾಯ್ ವ್ಹೀಲ್ ಮತ್ತು ಸ್ಪ್ಲಿಟ್ ಗ್ರಾಬ್ ರೈಲ್ ಒಳಗೊಂಡಿದೆ.

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಹೊಸ ಹೊಂಡಾ ಎಕ್ಸ್-ಬ್ಲೇಡ್ ಪ್ರೀಮಿಯಂ ಬೈಕ್ ಆಗಿದೆ. ಹೋಂಡಾ ಎಕ್ಸ್-ಬ್ಲೇಡ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಹೀರೋ ಎಕ್ಸ್‌ಟ್ರಿಮ್ 160 ಆರ್, ಟಿವಿಎಸ್ ಅಪಾಚೆ ಆರ್‍‍ಟಿ‍ಆರ್ 160 4 ವಿ, ಸುಜುಕಿ ಜಿಕ್ಸರ್ 155 ಮತ್ತು ಬಜಾಜ್ ಪಲ್ಸರ್ ಎನ್ಎಸ್ 160 ಬೈಕ್ ಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Honda X-Blade Cashback Offer. Read In Kannada.
Story first published: Thursday, May 27, 2021, 15:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X