Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- News
Breaking: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
23,000ಕ್ಕೂ ಹೆಚ್ಚು ಸ್ವಯಂಸೇವಕರಿಗೆ ರಸ್ತೆ ಸುರಕ್ಷತೆ ಬಗ್ಗೆ ತರಬೇತಿ ನೀಡಿದ ಹೋಂಡಾ ಮೋಟಾರ್‌ಸೈಕಲ್
ಕರೋನಾ ಸಾಂಕ್ರಾಮಿಕದ ಅವಧಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಅಡಿಯಲ್ಲಿ ಕಾರ್ಯ ನಿರ್ವಹಿಸುವ 23,000ಕ್ಕೂ ಹೆಚ್ಚು ಸ್ವಯಂಸೇವಕರಿಗೆ ಬೈಕ್ ಚಾಲನೆಯ ಬಗ್ಗೆ ತರಬೇತಿ ನೀಡಲಾಗಿದೆ ಎಂದು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತಿಳಿಸಿದೆ.

ಕಂಪನಿಯು 2020ರ ಜೂನ್ ತಿಂಗಳಿನಿಂದ ಹೋಂಡಾ ರೋಡ್ ಸೇಫ್ಟಿ ಇ-ಗುರುಕುಲ್ ರಸ್ತೆ ಸುರಕ್ಷತಾ ಅಭಿಯಾನವನ್ನು ನಡೆಸುತ್ತಿದೆ. ಇದರಲ್ಲಿ 23,000ಕ್ಕೂ ಹೆಚ್ಚು ಎನ್ಎಸ್ಎಸ್ ಸ್ವಯಂಸೇವಕರು ರಸ್ತೆ ಸುರಕ್ಷತೆ ಹಾಗೂ ಸುರಕ್ಷಿತ ಸವಾರಿಯ ಬಗ್ಗೆ ಆನ್‌ಲೈನ್ ತರಬೇತಿ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಆನ್‌ಲೈನ್ ತರಬೇತಿ ಅಭಿಯಾನದಲ್ಲಿ 16 ವರ್ಷಕ್ಕಿಂತ ಮೇಲ್ಪಟ್ಟ ಎನ್‌ಎಸ್‌ಎಸ್ ಸ್ವಯಂಸೇವಕರು ಭಾಗಿಯಾಗಿದ್ದಾರೆ ಎಂದು ಹೋಂಡಾ ಕಂಪನಿಯು ವರದಿ ಮಾಡಿದೆ. ತರಬೇತಿ ಅಭಿಯಾನದಲ್ಲಿ 200 ಕಾಲೇಜುಗಳ ಹಾಗೂ 13 ವಿಶ್ವವಿದ್ಯಾಲಯಗಳ ಸ್ವಯಂಸೇವಕರು ಭಾಗವಹಿಸಿದ್ದರು.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಇದರಲ್ಲಿ 30ಕ್ಕೂ ಹೆಚ್ಚು ನಗರಗಳ ಹಾಗೂ ಪ್ರದೇಶಗಳ ಎನ್‌ಎಸ್‌ಎಸ್ ಸ್ವಯಂಸೇವಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹೋಂಡಾ ದ್ವಿಚಕ್ರ ವಾಹನಗಳ ಹಿರಿಯ ಉಪಾಧ್ಯಕ್ಷ ಪ್ರಭು ನಾಗರಾಜ್, ಕಂಪನಿಯು ದೇಶದಲ್ಲಿ 20ಕ್ಕೂ ಹೆಚ್ಚು ವರ್ಷಗಳಿಂದ ರಸ್ತೆ ಸುರಕ್ಷತಾ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅವರು ಎನ್ಎಸ್ಎಸ್ ಸ್ವಯಂಸೇವಕರಿಗೆ ಧನ್ಯವಾದವನ್ನು ಸಲ್ಲಿಸಿದರು. ಕರೋನಾ ಸಾಂಕ್ರಾಮಿಕದ ಕಷ್ಟದ ಸಮಯದಲ್ಲಿ ಎನ್ಎಸ್ಎಸ್ ಸ್ವಯಂಸೇವಕರು ನೀಡಿದ ಕೊಡುಗೆ ಅಮೂಲ್ಯವಾದುದು ಎಂದು ಅವರು ಹೇಳಿದರು.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಈ ತರಬೇತಿಯಲ್ಲಿ ಸ್ವಯಂಸೇವಕರಿಗೆ ರಸ್ತೆ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲು ಹಾಗೂ ರಸ್ತೆಯಲ್ಲಿ ಕಂಡುಬರುವ ಚಿಹ್ನೆ ಫಲಕಗಳು ಮತ್ತು ಚಿಹ್ನೆಗಳನ್ನು ಪಾಲಿಸುವ ಬಗ್ಗೆ ತರಬೇತಿ ನೀಡಲಾಯಿತು.

ಇದರ ಜೊತೆಗೆ ಟ್ರಾಫಿಕ್ ದೀಪಗಳು ಹಾಗೂ ವಾಹನಗಳಿಗೆ ಸಂಬಂಧಿಸಿದ ವಿಭಿನ್ನ ಸಂಕೇತಗಳ ಬಗ್ಗೆಯೂ ಅವರಿಗೆ ತಿಳಿಸಲಾಯಿತು. ರಸ್ತೆ ಅಪಘಾತಗಳನ್ನು ತಪ್ಪಿಸುವ ಬಗ್ಗೆ ಹಾಗೂ ಅಪಘಾತದ ಸಂದರ್ಭದಲ್ಲಿ ನೆರವನ್ನು ನೀಡುವುದರ ಬಗ್ಗೆ ಸ್ವಯಂಸೇವಕರಿಗೆ ತರಬೇತಿ ನೀಡಲಾಯಿತು.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ದ್ವಿಚಕ್ರ ವಾಹನ ಚಾಲನೆ ವೇಳೆಯಲ್ಲಿ ಹೆಲ್ಮೆಟ್ ಧರಿಸಲು ಹಾಗೂ ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಧರಿಸಲು ಸಹ ತಿಳಿಸಲಾಯಿತು. ಹೋಂಡಾ ಮೋಟಾರ್‌ಸೈಕಲ್ ಕಂಪನಿಯು 2021ರ ಜನವರಿ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ 4,16,716 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.

ಈ ಪ್ರಮಾಣವು 2020ರ ಜನವರಿ ತಿಂಗಳಿಗಿಂತ 11%ನಷ್ಟು ಹೆಚ್ಚಾಗಿದೆ. ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಜನವರಿ ತಿಂಗಳಿನಲ್ಲಿ ಒಟ್ಟಾರೆಯಾಗಿ4,37,183 ವಾಹನಗಳನ್ನು ಮಾರಾಟ ಮಾಡಿದ್ದು, ಮಾರಾಟವು 8%ನಷ್ಟು ಹೆಚ್ಚಳವಾಗಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಸತತ 6 ತಿಂಗಳಿನಿಂದ ಕಂಪನಿಯು ಮಾಸಿಕ ಮಾರಾಟದಲ್ಲಿ ಹೆಚ್ಚು ಬೆಳವಣಿಗೆಯನ್ನು ದಾಖಲಿಸುತ್ತಿದೆ ಎಂದು ಹೋಂಡಾ ಕಂಪನಿಯು ವರದಿ ಮಾಡಿದೆ. ಸ್ಕೂಟರ್ ಮಾರಾಟದಲ್ಲಿ ಹೋಂಡಾ ಮೋಟಾರ್‌ಸೈಕಲ್ ಅತಿದೊಡ್ಡ ಕಂಪನಿಯಾಗಿ ಹೊರಹೊಮ್ಮಿದೆ.

ಈವರೆಗೆ 2. 5 ಕೋಟಿಗೂ ಹೆಚ್ಚು ಹೋಂಡಾ ಆಕ್ಟಿವಾ ಸ್ಕೂಟರ್'ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿ ಅಂಶದ ಮೂಲಕ ಹೋಂಡಾ ಆಕ್ಟಿವಾ ಭಾರತದಲ್ಲಿ ಮಾತ್ರವಲ್ಲದೆ ವಿಶ್ವದಲ್ಲೇ ಹೆಚ್ಚು ಮಾರಾಟವಾದ ಸ್ಕೂಟರ್ ಆಗಿ ಹೊರ ಹೊಮ್ಮಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಫೆಬ್ರವರಿ ತಿಂಗಳಿನಲ್ಲಿ ತನ್ನ ಜನಪ್ರಿಯ ಆಕ್ಟಿವಾ 6 ಜಿ ಸ್ಕೂಟರಿನ ಮೇಲೆ ವಿವಿಧ ಕೊಡುಗೆಗಳನ್ನು ನೀಡುತ್ತಿದೆ.

ಕಂಪನಿಯು ಆಕ್ಟಿವಾ 6 ಜಿ ಸ್ಕೂಟರ್ ಖರೀದಿಸಲು 100%ನಷ್ಟು ಹಣಕಾಸು ಆಯ್ಕೆಯನ್ನು ನೀಡುತ್ತಿದೆ. ಈ ಸ್ಕೂಟರ್ ಅನ್ನು ರೂ.2,499 ಡೌನ್ ಪೇಮೆಂಟ್ ಮಾಡಿ ಖರೀದಿಸಬಹುದು.