ಹೋಂಡಾ ಹೈನೆಸ್ ಸಿಬಿ350 ಬೈಕ್ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ

ಹೋಂಡಾ ನಿರ್ಮಾಣದ ಹೊಚ್ಚ ಹೊಸ ಹೈನೆಸ್ ಸಿಬಿ350 ಕ್ಲಾಸಿಕ್ ಬೈಕ್ ಮಾದರಿಯು ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಹೊಸ ಬೈಕಿಗೆ ಬೇಡಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ಕಂಪನಿಯು ಹೈನೆಸ್ ಸಿಬಿ350 ಬೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ.

ಹೋಂಡಾ ಹೈನೆಸ್ ಸಿಬಿ350 ಬೈಕ್ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ

ಹೈನೆಸ್ ಸಿಬಿ 350 ಬೈಕ್ ಮಾರಾಟ ಆರಂಭಿಸಿದ ನಂತರ ಇದುವರೆಗೆ ಸುಮಾರು 10 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಬೈಕ್ ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ. ಹೊಸ ಬೈಕ್ ಮಾದರಿಯು ಕಳೆದ ಜನವರಿಯಲ್ಲಿ ಸುಮಾರು ರೂ.2,500 ಹೆಚ್ಚುವರಿ ಬೆಲೆ ಪೆಡೆದುಕೊಂಡಿದ್ದು ಹೊಸ ಬೈಕ್ ಮಾದರಿಯು ಇದೀಗ ರೂ. 3,405 ಬೆಲೆ ಹೆಚ್ಚಳದೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಡಿಲಕ್ಸ್ ಮಾದರಿಗೆ ರೂ. 1,89,905 ಮತ್ತು ಡಿಲಕ್ಸ್ ಪ್ರೋ ಮಾದರಿಗೆ ರೂ. 1,95,905 ಹೆಚ್ಚುವರಿ ಬೆಲೆ ಪಡೆದುಕೊಂಡಿದೆ.

ಹೋಂಡಾ ಹೈನೆಸ್ ಸಿಬಿ350 ಬೈಕ್ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ

ಹೊಸ ದರ ಪಟ್ಟಿಯಲ್ಲಿ ಹೈನೆಸ್ ಸಿಬಿ350 ಡಿಲಕ್ಸ್ ಮಾದರಿಯು ರೂ. 3 ಸಾವಿರ ಮತ್ತು ಡಿಲಕ್ಸ್ ಪ್ರೋ ಮಾದರಿಯು ರೂ. 3,405 ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ತಾಂತ್ರಿಕ ಅಂಶಗಳಲ್ಲಿ ಯಾವುದೇ ಬದಲಾವಣೆಗಳನ್ನು ತರಲಾಗಿಲ್ಲ.

ಹೋಂಡಾ ಹೈನೆಸ್ ಸಿಬಿ350 ಬೈಕ್ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ

ಸದ್ಯ ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350, ಜಾವಾ ಮೋಟಾರ್‌ಸೈಕಲ್ ಮತ್ತು ಬೆನೆಲ್ಲಿ ಇಂಪೀರಿಯಲ್ 400 ಬೈಕ್‌ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯು ನಿಧಾನವಾಗಿ ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಹೋಂಡಾ ಹೈನೆಸ್ ಸಿಬಿ350 ಬೈಕ್ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ

ಆಕರ್ಷಕ ಬೆಲೆ ಮತ್ತು ಪ್ರೀಮಿಯಂ ಫೀಚರ್ಸ್ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಹೈನೆಸ್ ಸಿಬಿ 350 ಬೈಕಿನ ವಿನ್ಯಾಸವು ಹಳೆಯ ಕ್ಲಾಸಿಕ್ ಸಿಬಿ ಬೈಕ್ ಸರಣಿಯನ್ನು ನೆನಪಿಸುತ್ತದೆ. ರೌಂಡ್ ಎಲ್ಇಡಿ ಹೆಡ್‌ಲ್ಯಾಂಪ್ ಕ್ರೋಮ್ ಫ್ರಂಟ್ ಫೆಂಡರ್‌ ಹಾಗೂ ಫೋರ್ಕ್‌ಗಳನ್ನು ಪಡೆದುಕೊಂಡಿದ್ದು, 15-ಲೀಟರಿನ ಫ್ಯೂಯಲ್ ಟ್ಯಾಂಕ್ ಜೋಡಣೆಯೊಂದಿಗೆ ಹೊಂಡಾ ಬ್ಯಾಡ್ಜಿಂಗ್ ಅಳವಡಿಸಲಾಗಿದೆ.

ಹೋಂಡಾ ಹೈನೆಸ್ ಸಿಬಿ350 ಬೈಕ್ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ

ಎಂಜಿನ್ ಕವರ್, ಎಕ್ಸಾಸ್ಟ್ ಸೇರಿದಂತೆ ಈ ಬೈಕಿನ ಹಲವು ಭಾಗಗಳಲ್ಲಿ ಕ್ರೋಮ್ ಬಣ್ಣವನ್ನು ನೀಡಲಾಗಿದ್ದು, ಎಕ್ಸಾಸ್ಟ್ ಕ್ಲಾಸಿಕ್ ಲೋ-ಪಿಚ್ ಥಂಪಿ ನೋಟ್ ಹೊಂದಿದೆ. ಬೈಕ್ ವಿನ್ಯಾಸವನ್ನು ಸರಳಗೊಳಿಸಲು ಹಿಂಭಾಗವನ್ನು ಚಿಕ್ಕದು ಮಾಡಲಾಗಿದೆ.

ಹೋಂಡಾ ಹೈನೆಸ್ ಸಿಬಿ350 ಬೈಕ್ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ

ಹೊಸ ಬೈಕ್ ಮಾದರಿಯು 350ಸಿಸಿ ಸೆಗ್ಮೆಂಟಿನಲ್ಲಿ ಮೊದಲ ಬಾರಿಗೆ ರಿಂಗ್-ಟೈಪ್ ವಿಂಕರ್ ಗಳನ್ನು ನೀಡಲಾಗಿದ್ದು, ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೋಂಡಾ ಹೈನೆಸ್ ಸಿಬಿ350 ಬೈಕ್ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ

ಬೇಸ್ ಮಾದರಿಯನ್ನು ಪ್ರೆಷಿಯಸ್ ರೆಡ್ ಮೆಟಾಲಿಕ್, ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಎಂಬ ಮೂರು ಸಿಂಗಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುವುದು.

ಹೋಂಡಾ ಹೈನೆಸ್ ಸಿಬಿ350 ಬೈಕ್ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ

ಟಾಪ್-ಎಂಡ್ ಡಿಎಲ್ಎಕ್ಸ್ ಪ್ರೊ ಮಾದರಿಯನ್ನು ಮ್ಯಾಟ್ ಗ್ರೇ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ವರ್ಚುವಸ್ ವೈಟ್ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಸ್ಪಿಯರ್ ಸಿಲ್ವರ್ ಮೆಟಾಲಿಕ್ ಪರ್ಲ್ ನೈಟ್ ಸ್ಟಾರ್ ಮೆಟಾಲಿಕ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೋಂಡಾ ಹೈನೆಸ್ ಸಿಬಿ350 ಬೈಕ್ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ

ಈ ಬೈಕ್ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್‌ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 20.8-ಬಿಎಚ್‌ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

More from DriveSpark

Article Published On: Friday, May 7, 2021, 14:36 [IST]
English summary
Honda Increased The Prices Of Honda H'Ness CB350.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+