ಹೋಂಡಾ ಡಿಯೋ ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ನೀವು ಹೊಚ್ಚ ಹೊಸ ಹೋಂಡಾ ಡಿಯೋವನ್ನು ಖರೀದಿಸಲು ಯೋಜಿಸುತ್ತಿದ್ದರೆ ಉತ್ತಮ ಅವಕಾಶವಿದೆ. ಏಕೆಂದರೆ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ಇದೀಗ ಡಿಯೋ ಸ್ಕೂಟರ್ ಮೇಲೆ ಭರ್ಜರಿ ಆಫರ್ ಅನ್ನು ಘೋಷಿಸಿದೆ.

ಹೋಂಡಾ ಡಿಯೋ ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೊಸ ಡಿಯೋ ಖರೀದಿಯ ಮೇಲೆ ರೂ.3500ಗಳ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಪಡೆಯಬಹುದು. ಹೋಂಡಾ ಡಿಯೋ ಸ್ಕೂಟರ್ ಅನ್ನು ಖರೀದಿಸಿದರೆ ರೂ.3500 ಉಳಿಸಬಹುದು. ಆದರೆ ಇದಕ್ಕೆ ತನ್ನದೇ ಆದ ನಿಯಮಗಳು ಮತ್ತು ಷರತ್ತುಗಳನ್ನು ಹೊಂದಿದೆ. ಈ ಕೊಡುಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಇಎಂಐ ವಹಿವಾಟಿನಲ್ಲಿ ಮಾತ್ರ ಮಾನ್ಯವಾಗಿರುತ್ತದೆ ಮತ್ತು ಕನಿಷ್ಠ ವಹಿವಾಟು ಮೌಲ್ಯವು ರೂ.40,000 ರೂಪಾಯಿಗಳಾಗಿರಬೇಕು ಎಂದು ಹೋಂಡಾ ಕಂಪನಿ ಹೇಳಿದೆ.

ಹೋಂಡಾ ಡಿಯೋ ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಕ್ಯಾಶ್‌ಬ್ಯಾಕ್ ಆಫರ್ ಜೂನ್ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ. ಈ ಹೋಂಡಾ ಡಿಯೋ ಸ್ಕೂಟರ್ ಮೇಲೆ ನೀಡಿರುವ ಕ್ಯಾಶ್‌ಬ್ಯಾಕ್ ಆಫರ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯ ಡೀಲರ್‌ಶಿಪ್‌ಗೆ ಭೇಟಿ ನೀಡಿ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೋಂಡಾ ಡಿಯೋ ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಬಿಎಸ್-6 ಹೋಂಡಾ ಡಿಯೋ ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಸ್ಟ್ಯಾಂಡರ್ಡ್ ಮತ್ತು ಡಿಲಕ್ಸ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಇದರೊಂದಿಗೆ ಹೋಂಡಾ ಡಿಯೋ ಸ್ಕೂಟರ್ ರೆಪ್ಸೋಲ್ ಎಡಿಷನ್ ಮಾದರಿಯಲ್ಲಿಯು ಮರಾಟವಾಗುತ್ತಿವೆ.

ಹೋಂಡಾ ಡಿಯೋ ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಡಿಯೋ ಸ್ಕೂಟರ್ ಅನ್ನು 2002ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಗಿತ್ತು. ಡಿಯೋ ಸ್ಕೂಟರ್‍ ಇಲ್ಲಿಯವರೆಗೆ 33 ಲಕ್ಷ ಹೆಚ್ಚು ಗ್ರಾಹಕರನ್ನು ಹೊಂದಿದೆ. ಹೋಂಡಾ ಡಿಯೋ ಭಾರತದಿಂದ ಅತಿ ಹೆಚ್ಚು ರಫ್ತು ಮಾಡುವ ಸ್ಕೂಟರ್ ಆಗಿದೆ. ದೇಶದಲ್ಲಿ ಮಾರಾಟವಾಗುವ ಟಾಪ್ 10 ಸ್ಕೂಟರ್‍‍ಗಳಲ್ಲಿ ಡಿಯೋ ಕೂಡ ಒಂದಾಗಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಹೋಂಡಾ ಡಿಯೋ ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಬಿಎಸ್-6 ಹೋಂಡಾ ಡಿಯೋ ಸ್ಕೂಟರ್‍‍ನಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದರಲ್ಲಿ ರೇಂಜ್, ಸರಾಸರಿ ಇಂಧನ ದಕ್ಷತೆ ಮತ್ತು ರಿಯಲ್ ಟೈಮ್ ಇಂಧನ ದಕ್ಷತೆಯ ವಿವರದ ಮಾಹಿತಿಯನ್ನು ಪ್ರದರ್ಶಿಸುತ್ತದೆ. ಇದಲ್ಲದೆ ಇದು ಟ್ರಿಪ್ ಮೀಟರ್, ಕ್ಲಾಕ್ ಮತ್ತು ಸರ್ವಿಸ್ ಇಂಡಿಕೇಟರ್ ಅನ್ನು ಕೂಡ ಪ್ರದರ್ಶಿಸುತ್ತದೆ.

ಹೋಂಡಾ ಡಿಯೋ ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಡಿಯೋ ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಡಿಯೋ ಸ್ಕೂಟರ್ ಮುಂಭಾಗ ಆಕ್ಟಿವಾ 6ಜಿ ಸ್ಕೂಟರ್‍‍ನಂತೆ ಫುಲ್ ಎಲ್‍ಇಡಿ ಹೆಡ್‍‍ಲ್ಯಾಂಪ್ ಮತ್ತು ಡಿ‍ಆರ್‍ಎಲ್ ಅನ್ನು ಅಳವಡಿಸಲಾಗಿದೆ. ಬಿಎಸ್-6 ಹೋಂಡಾ ಡಿಯೋ ಸ್ಕೂಟರ್ ಟೆಲಿಸ್ಕೋಪಿಕ್ ಫೋರ್ಕ್ ಅನ್ನು ಹೊಂದಿದೆ. ಹೊಸ ಡಿಯೋ ಅಗ್ರೆಸಿವ್ ವಿನ್ಯಾಸವನ್ನು ಹೊಂದಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಹೋಂಡಾ ಡಿಯೋ ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಆಕ್ಟಿವಾ 6ಜಿಯಂತೆಯೇ ಹೋಂಡಾ ಡಿಯೊ ಕೂಡ ಅದೇ ಪ್ಲಾಟ್‍‍ಫಾರ್ಮ್ ಅನ್ನು ಆಧರಿಸಿದೆ. ಹೊಸ ಡಿಯೋ ಸ್ಕೂಟರ್‍‍ನಲ್ಲಿ ಸ್ಟ್ಯಾಂಡರ್ಡ್ ರೂಪಾಂತರವು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಕ್ಯಾಂಡಿ ಝಾಸಿ ಬ್ಲೂ, ಸ್ಪೋರ್ಟ್ ರೆಡ್ ಮತ್ತು ವೈಬ್ರಂಟ್ ಆರೆಂಜ ಬಣ್ಣಗಳಲ್ಲಿ ಲಭ್ಯವಿದೆ.

ಹೋಂಡಾ ಡಿಯೋ ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೊಸ ಡಿಯೋ ಸ್ಕೂಟರ್‍‍ನ 110 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7.9 ಬಿ‍‍ಹೆಚ್‍‍ಪಿ ಪವರ್ ಮತ್ತು 8.9 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಹಿಂದಿನ ಹೋಂಡಾ ಡಿಯೋ ಬಿಎಸ್-4 ಮಾದರಿಯು 8 ಬಿ‍‍ಹೆಚ್‍‍ಪಿ ಪವರ್ ಮತ್ತು 9 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೋಂಡಾ ಡಿಯೋ ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದಾಗ ಎಂಜಿನ್‍‍ನ ದಕ್ಷತೆಯ ಅಂಕಿ ಅಂಶಗಳಲ್ಲಿ ತುಸು ಕಡಿಮೆಯಾಗಿದೆ. ಹೋಂಡಾ ಡಿಯೋ ಸ್ಕೂಟರ್ ದೇಶಿಯ ಮಾರುಕಟ್ಟೆಯಲ್ಲಿ ಯಮಹಾ ರೇ-ಝಡ್ ಮತ್ತು ಹೀರೋ ಮೆಸ್ಟ್ರೋ ಎಡ್ಜ್ ಸ್ಕೂಟರ್‍‍ಗಳಿಗೆ ಪೈಪೋಟಿ ನೀಡುತ್ತಿದೆ.

Article Published On: Wednesday, May 5, 2021, 20:20 [IST]
English summary
New Honda Dio Cashback Offer. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+