ಹೋಂಡಾ ಗ್ರಾಜಿಯಾ 125 ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್
ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಸ್ಕೂಟರ್‌ಗಳ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್ ಅನ್ನು ಘೋಷಿಸುತ್ತಿದೆ. ಇದೀಗ ಹೋಂಡಾ ಕಂಪನಿಯು ತನ್ನ ಗ್ರಾಜಿಯಾ 125 ಸ್ಕೂಟರ್ ಮೇಲೆ ಕ್ಯಾಶ್‌ಬ್ಯಾಕ್ ಆಫರ್ ಅನ್ನು ನೀಡುತ್ತಿದೆ.

ಗ್ರಾಹಕರು ಹೊಚ್ಚ ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಖರೀದಿಸುವಾಗ ರೂ.3500 ವರೆಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ಲಭಿಸುತ್ತದೆ. ಆದರೆ ಇದಕ್ಕೆ ತನ್ನದೇ ಆದ ನಿಯಮಗಳು ಮತ್ತು ಕೆಲವು ಷರತ್ತುಗಳಿವೆ. ಈ ಕೊಡುಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಇಎಂಐ ವಹಿವಾಟಿನಲ್ಲಿ ಮಾತ್ರ ಮಾನ್ಯವಾಗಿರುತ್ತದೆ ಮತ್ತು ಕನಿಷ್ಠ ವಹಿವಾಟು ಮೌಲ್ಯವು ರೂ.40,000 ರೂಪಾಯಿಗಳಾಗಿರಬೇಕು ಎಂದು ಹೋಂಡಾ ಕಂಪನಿ ಹೇಳಿದೆ.

ಈ ಕ್ಯಾಶ್‌ಬ್ಯಾಕ್ ಆಫರ್ ಜೂನ್ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ. ಈ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಮೇಲೆ ನೀಡಿರುವ ಕ್ಯಾಶ್‌ಬ್ಯಾಕ್ ಆಫರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಹತ್ತಿರದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯ ಡೀಲರ್‌ಶಿಪ್‌ಗೆ ಭೇಟಿ ನೀಡಿ.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಹೋಂಡಾ ಗ್ರಾಜಿಯಾ 125 ಸ್ಕೂಟರ್ ಅನ್ನು ಸ್ಟ್ಯಾಂಡರ್ಡ್ ಮತ್ತು ಡಿಲಕ್ಸ್ ಎಂಬ ಎರಡು ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಮ್ಯಾಟ್ ಸೈಬರ್ ಯೆಲ್ಲೊ, ಪರ್ಲ್ ಸ್ಪಾರ್ಟನ್ ರೆಡ್, ಪರ್ಲ್ ಸೈರನ್ ಬ್ಲೂ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಎಂಬ ನಾಲ್ಕು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹೋಂಡಾ ಗ್ರಾಜಿಯಾ 125 ಸ್ಕೂಟರ್‌ನಲ್ಲಿ 125 ಸಿಸಿ ಹೆಚ್‌ಇಟಿ(ಹೋಂಡಾ ಇಕೋ ಟೆಕ್ನಾಲಜಿ) ಬಿಎಸ್‌ವಿಐ ಪಿಜಿಎಂ-ಎಫ್‌ಐ ಎಂಜಿನ್ ಅನ್ನು ಹೊಂದಿದೆ. ಇದರಲ್ಲಿ ಪೇಟೆಂಟ್ ಪಡೆದ ಎಸಿಜಿ ಸ್ಟಾರ್ಟರ್ ಮೋಟರ್ ಹೊಂದಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಹೋಂಡಾ ಗ್ರಾಜಿಯಾ 125 ಸ್ಕೂಟರ್‌ನಲ್ಲಿ ಪಾಸ್-ಸ್ವಿಚ್, ಹೊಸ ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಸೀಟ್‌ಗಾಗಿ ಮಲ್ಟಿ-ಫಂಕ್ಷನಲ್ ಸ್ವಿಚ್ ಮತ್ತು ಫ್ಯೂಯಲ್ ಲಿಡ್ ನಂತಹ ಫೀಚರ್ಸ್ ಗಳನ್ನು ಒಳಗೊಂಡಿದೆ.

ಈ ಹೋಂಡಾ ಗ್ರಾಜಿಯಾ 125 ಸ್ಕೂಟರ್‌ನಲ್ಲಿ 124 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 6000 ಆರ್‍ಪಿಎಂನಲ್ಲಿ 8 ಬಿಹೆಚ್‍ಪಿ ಪವರ್ ಮತ್ತು 5000 ಆರ್‍ಪಿಎಂನಲ್ಲಿ 10.3 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ವಿ-ಟೈಪ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಈ ಹೋಂಡಾ ಗ್ರಾಜಿಯಾ 125 ಸ್ಕೂಟರ್‌ನಲ್ಲಿ ಸಸ್ಪೆಂಕ್ಷನ್ ಗಾಗಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೂರು-ರೀತಿಯಲ್ಲಿ ಹೊಂದಾಣಿಕೆ ಮಾಡಬಹುದಾದ ಸ್ಪ್ರಿಂಗ್-ಲೋಡೆಡ್ ಸಸ್ಪೆಂಕ್ಷನ್ ಸೆಟಪ್ ಅನ್ನು ನೀಡಿದ್ದಾರೆ.

ಈ ಸ್ಕೂಟರ್‌ನಲ್ಲಿ ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 190 ಎಂಎಂ ಡ್ರಮ್ ಬ್ರೇಕ್ ಮತ್ತು ಹಿಂಭಾಗದಲ್ಲಿ 130 ಎಂಎಂ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಹೋಂಡಾ ಗ್ರಾಜಿಯಾ 125 ಸ್ಕೂಟರ್ ಬ್ರ್ಯಾಂಡ್‌ನ ಪ್ರೀಮಿಯಂ 125 ಸಿಸಿ ವಿಭಾಗದಲ್ಲಿ ಜನಪ್ರಿಯ ಸ್ಕೂಟರ್ ಆಗಿದೆ.

ಹೊಸ ಹೋಂಡಾ ಗ್ರಾಜಿಯಾ 125 ಭಾರತೀಯ ಮಾರುಕಟ್ಟೆಯಲ್ಲಿ ಯಮಹಾ ಫ್ಯಾಸಿನೊ 125, ಟಿವಿಎಸ್ ಎನ್‍ಟಾರ್ಕ್ 125 ಮತ್ತು ಸುಜುಕಿ ಬರ್ಗ್‌ಮ್ಯಾನ್ ಸ್ಟ್ರೀಟ್ 125 ಸ್ಕೂಟರ್ ಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications