ಹೊಸ ಹೋಂಡಾ ಶೈನ್ ಬೈಕ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್
ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಸ್ಕೂಟರ್‌ಗಳ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್ ಅನ್ನು ಇತ್ತೀಚೆಗೆ ಘೋಷಿಸಿತು. ಇದೀಗ ಹೋಂಡಾ ಕಂಪನಿಯು ತನ್ನ ಶೈನ್ ಬೈಕಿನ ಮೇಲೆ ಕ್ಯಾಶ್‌ಬ್ಯಾಕ್ ಆಫರ್ ಅನ್ನು ಘೊಷಿಸಿದೆ.

ಗ್ರಾಹಕರು ಹೊಸ ಶೈನ್ ಬೈಕ್ ಖರೀದಿಸುವಾಗ ರೂ.3500 ವರೆಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ಲಭಿಸುತ್ತದೆ. ಆದರೆ ಇದಕ್ಕೆ ತನ್ನದೇ ಆದ ಕೆಲವು ನಿಯಮಗಳು ಮತ್ತು ಕೆಲವು ಷರತ್ತುಗಳನ್ನು ಒಳಗೊಂಡಿವೆ. ಈ ಕೊಡುಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಇಎಂಐ ವಹಿವಾಟಿನಲ್ಲಿ ಮಾತ್ರ ಮಾನ್ಯವಾಗಿರುತ್ತದೆ ಮತ್ತು ಕನಿಷ್ಠ ವಹಿವಾಟು ಮೌಲ್ಯವು ರೂ.40,000 ರೂಪಾಯಿಗಳಾಗಿರಬೇಕು ಎಂದು ಹೋಂಡಾ ಕಂಪನಿ ಹೇಳಿದೆ.

ಈ ಕ್ಯಾಶ್‌ಬ್ಯಾಕ್ ಆಫರ್ ಜೂನ್ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ. ಈ ಹೊಸ ಹೋಂಡಾ ಶೈನ್ ಬೈಕ್ ಮೇಲೆ ನೀಡಿರುವ ಕ್ಯಾಶ್‌ಬ್ಯಾಕ್ ಆಫರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಹತ್ತಿರದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯ ಡೀಲರ್‌ಶಿಪ್‌ಗೆ ಭೇಟಿ ನೀಡಿ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹೋಂಡಾ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಕಮ್ಯೂಟರ್ ಬೈಕ್ ಗಳಲ್ಲಿ ಒಂದಾಗಿದೆ. ಈ ಸಿಬಿ ಶೈನ್ ಬೈಕನ್ನು ಭಾರತದಲ್ಲಿ 2006ರಲ್ಲಿ ಮೊಟ್ಟ ಮೊದಲ ಬಾರಿಗೆ ಹೋಂಡಾ ಕಂಪನಿಯು ಬಿಡುಗಡೆಗೊಳಿಸಿತ್ತು.

ಹೋಂಡಾ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದಗಿನಿಂದ ಇಲ್ಲಿಯವರೆಗೂ 90 ಲಕ್ಷಕ್ಕೂ ಹೆಚ್ಚು ಯೂನಿಟ್‌ಗಳು ಮಾರಾಟವಾಗಿವೆ. ಇನ್ನು ಈ ಹೋಂಡಾ ಸಿಬಿ ಶೈನ್ ಡ್ರಮ್ ಮತ್ತು ಡಿಸ್ಕ್ ಎಂಬ ಎರಡು ವಿಭಿನ್ನ ರೂಪಾಂತರಗಳಲ್ಲಿ ಲಭ್ಯವಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇನ್ನು ಬೈಕಿನ ಹೃದಯ ಭಾಗ ಎಂದೇ ಹೇಳಬಹುದಾದ ಎಂಜಿನ್ ಬಗ್ಗೆ ಹೇಳುವುದಾದರೆ, ಈ ಶೈನ್ ಬೈಕಿನಲ್ಲಿ 124 ಸಿಸಿ, ಸಿಂಗಲ್-ಸಿಲಿಂಡರ್, ನಾಲ್ಕು-ಸ್ಟ್ರೋಕ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7500 ಆರ್‌ಪಿಎಂನಲ್ಲಿ 10.7 ಬಿಹೆಚ್‍ಪಿ ಪವರ್ ಮತ್ತು 6000 ಆರ್‌ಪಿಎಂನಲ್ಲಿ 11 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಇನ್ನು ಹೋಂಡಾ ಶೈನ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಯುನಿಟ್ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್‌ಗಳನ್ನು ಹೊಂದಿವೆ. ಇದರೊಂದಿಗೆ ಮುಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಆಯ್ಕೆಯನ್ನು ನೀಡಲಾಗಿದೆ.

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಪ್ರಯತ್ನಿಸುತ್ತದೆ. ಇದಕ್ಕಾಗಿ ಕೆಲವು ಹೊಸ ಮಾದರಿಗಳನ್ನು ಕೂಡ ಪರಿಚಯಿಸುತ್ತಿದೆ. ಇನ್ನು ಹೋಂಡಾ ಕಂಪನಿಯು ತನ್ನ್ನ ಕೆಲವು ಜನಪ್ರಿಯ ಮಾದರಿಗಳ ಮೇಲೆ ಕ್ಯಾಶ್‌ಬ್ಯಾಕ್ ಆಫರ್ ಅನ್ನು ನೀಡುವುದರಿಂದ ಮಾರಾಟವನ್ನು ಹೆಚ್ಚಿಸಲು ನೆರವಾಗುತ್ತದೆ.


Click it and Unblock the Notifications