ಲಿವೊ ಬೈಕ್ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಆಫರ್ ನೀಡಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಭಾರತದಲ್ಲಿ ದ್ವಿಚಕ್ರ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಹಬ್ಬದ ಋತುಗಳಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯುವ ಉದ್ದೇಶದೊಂದಿಗೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದೆ.

ಲಿವೊ ಬೈಕ್ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಆಫರ್ ನೀಡಿದ ಹೋಂಡಾ

ಕೋವಿಡ್ 19 ಪರಿಣಾಮ ತಗ್ಗಿದ್ದ ಹೊಸ ವಾಹನಗಳ ಮಾರಾಟ ಇದೀಗ ಸಾಕಷ್ಟು ಸುಧಾರಣೆ ಕಂಡಿದ್ದು, ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ಸತತ ಏಳನೇ ತಿಂಗಳು ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಹೊಂಡಾ ಕಂಪನಿಯು ಕಳೆದ ಫೆಬ್ರವರಿಯಲ್ಲಿ ದೇಶಿಯ ಮಾರಾಟಯಲ್ಲಿನ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.31ರಷ್ಟು ಬೆಳವಣಿಗೆಯನ್ನು ಕಂಡಿದ್ದು, ಮುಂಬರುವ ಯುಗಾದಿ ಸಂಭ್ರಮಾಚರಣೆ ವೇಳೆಗೆ ಮತ್ತಷ್ಟು ಹೊಸ ವಾಹನಗಳನ್ನು ಮಾರಾಟ ಮಾಡುವ ಗುರಿಹೊಂದಿದೆ.

ಲಿವೊ ಬೈಕ್ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಆಫರ್ ನೀಡಿದ ಹೋಂಡಾ

2021ರ ಫೆಬ್ರವರಿ ತಿಂಗಳಲ್ಲಿ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು 4,11,578 ದ್ವಿಚಕ್ರ ವಾಹನಗಳ ಮಾರಾಟಗೊಳಿಸುವ ಮೂಲಕ ಕಳೆದ ವರ್ಷದ ಫೆಬ್ರುವರಿ ತಿಂಗಳಿಗಿಂತಲೂ ಶೇ.31ರಷ್ಟು ಬೆಳವಣಿಗೆ ಸಾಧಿಸಿದ್ದು, ಮುಂಬರುವ ದಿನಗಳಲ್ಲಿ ಹೊಸ ಆಫರ್‌ಗಳ ಮೂಲಕ ಮತ್ತಷ್ಟು ಗ್ರಾಹಕರನ್ನು ಸೆಳೆಯುತ್ತಿದೆ.

ಲಿವೊ ಬೈಕ್ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಆಫರ್ ನೀಡಿದ ಹೋಂಡಾ

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಜನಪ್ರಿಯ ಸ್ಕೂಟರ್ ಮತ್ತು ಬೈಕ್ ಮಾದರಿಗಳ ಮೇಲೆ ವಿಶೇಷ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಮಾರ್ಚ್ ಅವಧಿಯಲ್ಲಿ ಆಕ್ಟಿವಾ 125 ಮತ್ತು ಲಿವೊ ಬೈಕ್ ಖರೀದಿಸುವ ಗ್ರಾಹಕರು ಗರಿಷ್ಠ ಉಳಿತಾಯ ಮಾಡಬಹುದಾಗಿದೆ.

ಲಿವೊ ಬೈಕ್ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಆಫರ್ ನೀಡಿದ ಹೋಂಡಾ

ಹೋಂಡಾ ಕಂಪನಿಯು ಪ್ರಮುಖ ದ್ವಿಚಕ್ರ ವಾಹನಗಳ ಖರೀದಿಗಾಗಿ ಆಕರ್ಷಕ ಬಡ್ಡಿದರದಲ್ಲಿ ಗರಿಷ್ಠ ಸಾಲಸೌಲಭ್ಯ, ಕ್ಯಾಶ್‌ಬ್ಯಾಕ್ ಆಫರ್ ಮತ್ತು ಜಿರೋ ಡೌನ್‌ಪೇಮೆಂಟ್ ಆಯ್ಕೆಗಳನ್ನು ನೀಡುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿವೆ. ಆಯ್ದ ಡೀಲರ್ಸ್‌ಗಳಲ್ಲಿ ಹೊಸ ದ್ವಿಚಕ್ರ ವಾಹನಗಳ ಖರೀದಿ ಮೇಲೆ ಹಲವಾರು ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದ್ದು, ಬೈಕ್ ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.

ಲಿವೊ ಬೈಕ್ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಆಫರ್ ನೀಡಿದ ಹೋಂಡಾ

ಹೊಸ ಆಫರ್‌ನಲ್ಲಿ ಲಿವೊ ಬೈಕ್ ಖರೀದಿ ಮೇಲೆ ಆಕರ್ಷಕ ಬಡ್ಡಿದರದಲ್ಲಿ ಶೇ. 100ರಷ್ಟು ಸಾಲ ಸೌಲಭ್ಯ ನೀಡುತ್ತಿದ್ದು, ಡೆಬಿಟ್ ಕಾರ್ಡ್ ಅಥವಾ ಕ್ರೆಡಿಕ್ ಕಾರ್ಡ್ ಬಳಕೆ ಮಾಡುವ ಗ್ರಾಹಕರಿಗೆ ರೂ.5 ಸಾವಿರ ಕ್ಯಾಶ್‌ಬ್ಯಾಕ್ ಕೂಡಾ ಲಭ್ಯವಿದೆ.

ಲಿವೊ ಬೈಕ್ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಆಫರ್ ನೀಡಿದ ಹೋಂಡಾ

ಹಾಗೆಯೇ ಹೊಸ ಬೈಕ್ ಖರೀದಿಗಾಗಿ ಹೋಂಡಾ ಕಂಪನಿಯು ಶೂನ್ಯ ಮೊತ್ತದೊಂದಿಗೆ ಡೌನ್‌ಪೆಮೆಂಟ್ ನಿಗದಿಪಡಿಸಿದ್ದು, ಕ್ಯಾಶ್‌ಬ್ಯಾಕ್ ಪಡೆದುಕೊಳ್ಳುವ ಗ್ರಾಹಕರು ಕಡ್ಡಾಯವಾಗಿ ಇಂಡಸ್ಇಂಡ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಯೆಸ್ ಬ್ಯಾಂಕ್, ಸ್ಟ್ಯಾಂಡರ್ಡ್ ಚಾರ್ಟಟೆಡ್ ಅಥವಾ ಫೆಡರಲ್ ಬ್ಯಾಂಕ್ ಕಾರ್ಡ್‌ಗಳನ್ನೇ ಬಳಕೆ ಮಾಡಬೇಕಾಗುತ್ತದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಲಿವೊ ಬೈಕ್ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಆಫರ್ ನೀಡಿದ ಹೋಂಡಾ

ಹೋಂಡಾ ಕಂಪನಿಯು ಲಿವೊ ಬೈಕ್ ಮಾದರಿ ಮಾತ್ರವಲ್ಲದೆ ತನ್ನ ಮತ್ತೊಂದು ಜನಪ್ರಿಯ ಸ್ಕೂಟರ್ ಮಾದರಿಯಾದ ಆಕ್ಟಿವಾ 125 ಆವೃತ್ತಿಯ ಮೇಲೂ ಲಿವೊ ಮಾದರಿಯಲ್ಲೇ ಆಫರ್ ನೀಡಿದ್ದು, ಕ್ಯಾಶ್‌ಬ್ಯಾಕ್ ಆಫರ್ ಗ್ರಾಹಕರಿಗೆ ಗರಿಷ್ಠ ಉಳಿತಾಯವಾಗಲಿದೆ.

ಲಿವೊ ಬೈಕ್ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಆಫರ್ ನೀಡಿದ ಹೋಂಡಾ

ಇನ್ನು ದೇಶಿಯ ಮಾರುಕಟ್ಟೆಯಲ್ಲಿನ ದ್ವಿಚಕ್ರ ವಾಹನ ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಹೋಂಡಾ ಮೋಟಾರ್‌ಸೈಕಲ್ ವಿಭಾಗವು ಹಲವಾರು ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ತನ್ನ ಪ್ರಮುಖ ವಾಹನ ಉತ್ಪನ್ನಗಳಲ್ಲಿ ನಿರಂತರವಾಗಿ ಬದಲಾವಣೆ ಪರಿಚಯಿಸುತ್ತಾ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಲಿವೊ ಬೈಕ್ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಆಫರ್ ನೀಡಿದ ಹೋಂಡಾ ಮೋಟಾರ್‌ಸೈಕಲ್

ಬೆಲೆ, ತಾಂತ್ರಿಕ ಅಂಶಗಳಲ್ಲಿ ಪ್ರತಿ ಸ್ಪರ್ಧಿ ಸ್ಕೂಟರ್ ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್ ಹೊಂದಿರುವ ವಿವಿಧ ಬೈಕ್ ಮತ್ತು ಸ್ಕೂಟರ್ ಮಾದರಿಗಳು ಕೋವಿಡ್ ನಂತರ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ಯುಗಾದಿ ಸಂಭ್ರಮಕ್ಕಾಗಿ ಮತ್ತಷ್ಟು ಮಾರಾಟ ಪ್ರಮಾಣವನ್ನು ಹೆಚ್ಚಿಸುವ ಸಿದ್ದತೆಯಲ್ಲಿದೆ.

Most Read Articles

Kannada
English summary
Honda Livo Cashback Offers Details. Read in Kannada.
Story first published: Wednesday, March 10, 2021, 17:21 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X