Just In
- 21 min ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 1 hr ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 2 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 2 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies Seetha Rama ; ಹೊಸ ಸ್ಕೆಚ್ ಹಾಕಿ ಅಂಜಲಿಯನ್ನು ಭೇಟಿ ಮಾಡಿದ ರುದ್ರಪ್ರತಾಪ್ ಮಾಡಿದ್ದೇನು..?
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದ ನಂತರ ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆಯಾಗುತ್ತಿದೆ ಹೋಂಡಾ ಹೈನೆಸ್ ಸಿಬಿ 350
ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಹೋಂಡಾ ಹೊಚ್ಚ ಹೊಸ ಹೈನೆಸ್ ಸಿಬಿ 350 ಬೈಕ್ ಮಾದರಿಯು ಭಾರತದಲ್ಲಿ ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ ಸಾಕಷ್ಟು ಬೇಡಿಕೆ ಪಡೆದುಕೊಂಡಿದ್ದು, ಶೀಘ್ರದಲ್ಲೇ ಹೊಸ ಬೈಕ್ ಮಾದರಿಯು ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲು ಸಿದ್ದಗೊಳ್ಳುತ್ತಿದೆ.
ಹೋಂಡಾ ಮೋಟಾರ್ಸೈಕಲ್ ಕಂಪನಿಯು ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಹೈನೆಸ್ ಸಿಬಿ 350 ಬೈಕ್ ಮಾದರಿಯನ್ನು ಮುಂದಿನ ಕೆಲವೇ ದಿನಗಳಲ್ಲಿ ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಹೊಸ ಬೈಕ್ ಮಾದರಿಯು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಹೊಸ ಸಂಚಲನ ಮೂಡಿಸುವ ಭರವಸೆಯಲ್ಲಿದೆ. ಹೊಸ ಬೈಕ್ ಮಾದರಿಯು ಜಪಾನ್ ಮಾರುಕಟ್ಟೆಗಾಗಿ ಕೆಲವು ಬದಲಾವಣೆಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ವಿವಿಧ ಎಂಜಿನ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ.
ಸದ್ಯ ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350, ಜಾವಾ ಮೋಟಾರ್ಸೈಕಲ್ ಮತ್ತು ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯು ನಿಧಾನವಾಗಿ ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದೆ.
ಆಕರ್ಷಕ ಬೆಲೆ ಮತ್ತು ಪ್ರೀಮಿಯಂ ಫೀಚರ್ಸ್ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿರುವ ಹೈನೆಸ್ ಸಿಬಿ 350 ಬೈಕ್ ಮಾದರಿಯು ಭಾರತದಲ್ಲಿ ಹೋಂಡಾ ಬಿಗ್ವಿಂಗ್ ಮೂಲಕ ಮಾರಾಟಗೊಳ್ಳುತ್ತಿದ್ದು, ಕಳೆದ ಎರಡು ತಿಂಗಳಿನಿಂದ ಹೊಸ ಬೈಕ್ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬಂದಿದೆ.
ಹೈನೆಸ್ ಸಿಬಿ 350 ಬೈಕಿನ ವಿನ್ಯಾಸವು ಹಳೆಯ ಕ್ಲಾಸಿಕ್ ಸಿಬಿ ಬೈಕ್ ಸರಣಿಯನ್ನು ನೆನಪಿಸಲಿದ್ದು, ಈ ಬೈಕಿನ ಮುಂಭಾಗದಲ್ಲಿ ರೌಂಡ್ ಎಲ್ಇಡಿ ಹೆಡ್ಲ್ಯಾಂಪ್ ಕ್ರೋಮ್ ಫ್ರಂಟ್ ಫೆಂಡರ್ ಹಾಗೂ ಫೋರ್ಕ್ಗಳನ್ನು ಪಡೆದುಕೊಂಡಿದೆ. ಈ ಬೈಕಿನಲ್ಲಿ ದೊಡ್ಡದಾದ 15-ಲೀಟರಿನ ಫ್ಯೂಯಲ್ ಟ್ಯಾಂಕ್ ಜೋಡಿಸಲಾಗಿದ್ದು, ಈ ಬೈಕಿನ ಸೈಡ್ ಗಳಲ್ಲಿ ಹೊಂಡಾ ಬ್ಯಾಡ್ಜಿಂಗ್ ಅಳವಡಿಸಲಾಗಿದೆ.
ಎಂಜಿನ್ ಕವರ್, ಎಕ್ಸಾಸ್ಟ್ ಸೇರಿದಂತೆ ಈ ಬೈಕಿನ ಹಲವು ಭಾಗಗಳಲ್ಲಿ ಕ್ರೋಮ್ ಬಣ್ಣವನ್ನು ನೀಡಲಾಗಿದ್ದು, ಎಕ್ಸಾಸ್ಟ್ ಕ್ಲಾಸಿಕ್ ಲೋ-ಪಿಚ್ ಥಂಪಿ ನೋಟ್ ಹೊಂದಿದೆ. ಬೈಕ್ ವಿನ್ಯಾಸವನ್ನು ಸರಳಗೊಳಿಸಲು ಹಿಂಭಾಗವನ್ನು ಚಿಕ್ಕದು ಮಾಡಲಾಗಿದ್ದು, ಈ ಸೆಗ್ ಮೆಂಟಿನಲ್ಲಿ ಮೊದಲ ಬಾರಿಗೆ ಈ ಬೈಕಿನಲ್ಲಿ ರಿಂಗ್-ಟೈಪ್ ವಿಂಕರ್ ಗಳನ್ನು ನೀಡಲಾಗಿದೆ.
ಹೋಂಡಾ ಹೈನೆಸ್ ಸಿಬಿ 350 ಬೈಕಿನಲ್ಲಿ ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ ಗಳಿದ್ದು, ಬೇಸ್ ಮಾದರಿಯನ್ನು ಪ್ರೆಷಿಯಸ್ ರೆಡ್ ಮೆಟಾಲಿಕ್, ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಎಂಬ ಮೂರು ಸಿಂಗಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುವುದು.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ
ಟಾಪ್-ಎಂಡ್ ಡಿಎಲ್ಎಕ್ಸ್ ಪ್ರೊ ಮಾದರಿಯನ್ನು ಮ್ಯಾಟ್ ಗ್ರೇ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ವರ್ಚುವಸ್ ವೈಟ್ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಸ್ಪಿಯರ್ ಸಿಲ್ವರ್ ಮೆಟಾಲಿಕ್ ಪರ್ಲ್ ನೈಟ್ ಸ್ಟಾರ್ ಮೆಟಾಲಿಕ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.
ಈ ಬೈಕ್ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, 5-ಸ್ಪೀಡ್ ಗೇರ್ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ನೊಂದಿಗೆ 20.8-ಬಿಎಚ್ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!
ದೆಹಲಿ ಎಕ್ಸ್ಶೋರೂಂ ಪ್ರಕಾರ ಹೈನೆಸ್ ಸಿಬಿ 350 ಡಿಲಕ್ಸ್ ಮಾದರಿಗೆ ರೂ. 1.87 ಲಕ್ಷ ಮತ್ತು ಡಿಲಕ್ಸ್ ಪ್ರೋ ಮಾದರಿಗೆ ರೂ. 1.93 ಲಕ್ಷ ಬೆಲೆ ಹೊಂದಿದ್ದು, ಕ್ಲಾಸಿಕ್ ಬೈಕ್ ಖರೀದಿದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದೆ.