ದ್ವಿಚಕ್ರ ವಾಹನಗಳ ಮಾರಾಟದ ಮೇಲೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ Honda Motorcycle

Honda Motorcycle and Scooter India ಈ ಹಬ್ಬದ ಸೀಸನ್ ನಲ್ಲಿ ತನ್ನ ಬೈಕ್ ಹಾಗೂ ಸ್ಕೂಟರ್ ಗಳ ಮೇಲೆ ಆಕರ್ಷಕ ರಿಯಾಯಿತಿ ಹಾಗೂ ಕೊಡುಗೆಗಳನ್ನು ನೀಡುತ್ತಿದೆ. ಹೋಂಡಾ ಮೋಟಾರ್‌ಸೈಕಲ್ ಕಂಪನಿಯ ಈ ಕೊಡುಗೆಗಳಿಂದಾಗಿ ಈ ತಿಂಗಳು ಬೈಕ್ ಅಥವಾ ಸ್ಕೂಟರ್ ಖರೀದಿಸಲು ಮುಂದಾಗಿರುವವರು ದ್ವಿಚಕ್ರ ವಾಹನಗಳ ಖರೀದಿಯಲ್ಲಿ ದೊಡ್ಡ ಮೊತ್ತವನ್ನು ಉಳಿಸಬಹುದು.

ದ್ವಿಚಕ್ರ ವಾಹನಗಳ ಮಾರಾಟದ ಮೇಲೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ Honda Motorcycle

ಹೋಂಡಾ ಮೋಟಾರ್‌ಸೈಕಲ್ ಕಂಪನಿಯ ಈ ಕೊಡುಗೆಗಳು ಸೆಪ್ಟೆಂಬರ್ 1 ರಿಂದ ನವೆಂಬರ್ 30 ರವರೆಗೆ ಲಭ್ಯವಿರಲಿವೆ. ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಬೈಕ್‌ ಹಾಗೂ ಸ್ಕೂಟರ್‌ಗಳ ಮೇಲೆ ನೀಡುತ್ತಿರುವ ಕೊಡುಗೆ ಹಾಗೂ ರಿಯಾಯಿತಿಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ದ್ವಿಚಕ್ರ ವಾಹನಗಳ ಮಾರಾಟದ ಮೇಲೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ Honda Motorcycle

ಎಸ್‌ಬಿಐ ಕ್ರೆಡಿಟ್ ಕಾರ್ಡ್‌ಗಳ ಮೇಲೆ ಕ್ಯಾಶ್‌ಬ್ಯಾಕ್

ಈ ಹಬ್ಬದ ಸೀಸನ್ ನಲ್ಲಿ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಗ್ರಾಹಕರಿಗೆ ವಿವಿಧ ರಿಯಾಯಿತಿಗಳನ್ನು ನೀಡುತ್ತಿದೆ. ಹೋಂಡಾ ಬೈಕ್ ಅಥವಾ ಸ್ಕೂಟರ್ ಅನ್ನು ಇಎಂಐ ಮೂಲಕ ಖರೀದಿಸುತ್ತಿದ್ದರೆ ಹಾಗೂ ಎಸ್‌ಬಿಐ ಕ್ರೆಡಿಟ್ ಕಾರ್ಡ್‌ ಮೂಲಕ ಪಾವತಿಸಿದರೆ, ವಾಹನದ ಮೌಲ್ಯದ 5% ನಷ್ಟು ಅಥವಾ ಗರಿಷ್ಠ ರೂ. 5,000 ಕ್ಯಾಶ್‌ಬ್ಯಾಕ್ ನೀಡಲಾಗುತ್ತದೆ.

ದ್ವಿಚಕ್ರ ವಾಹನಗಳ ಮಾರಾಟದ ಮೇಲೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ Honda Motorcycle

ಈ ಆಫರ್ Honda Shine, Activa 3 G, Activa 125 ಸೇರಿದಂತೆ ಎಲ್ಲಾ ಹೋಂಡಾ ಬೈಕ್ ಹಾಗೂ ಸ್ಕೂಟರ್ ಗಳ ಮೇಲೆ ಲಭ್ಯವಿರಲಿದೆ. ವಾಹನ ಖರೀದಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಡೌನ್ ಪೇಮೆಂಟ್ ಹಾಗೂ ಹೈಪೋಥೆಕೇಶನ್ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ಗ್ರಾಹಕರು ಈಗ ಯಾವುದೇ ದಾಖಲೆಯ ಹಾರ್ಡ್ ಕಾಪಿಯನ್ನು ಸಲ್ಲಿಸದೆ ವಾಹನವನ್ನು ಖರೀದಿಸುವ ಸಂಪೂರ್ಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ದ್ವಿಚಕ್ರ ವಾಹನಗಳ ಮಾರಾಟದ ಮೇಲೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ Honda Motorcycle

ಹೋಂಡಾ ದ್ವಿಚಕ್ರ ವಾಹನಗಳ ಡೀಲರ್‌ಗಳು ಯಾವುದೇ ಪ್ರಕ್ರಿಯೆಯನ್ನು ಆನ್‌ಲೈನ್ ಹಾಗೂ ಡಿಜಿಟಲ್ ಮೂಲಕ ಯಾವುದೇ ಭೌತಿಕ ದಾಖಲೆ (ಹಾರ್ಡ್ ಕಾಪಿ) ಸ್ವೀಕರಿಸದೇ ಪೂರ್ಣಗೊಳಿಸುತ್ತಿದ್ದಾರೆ. ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ವಾಹನಗಳನ್ನು 0% ಡೌನ್ ಪೇಮೆಂಟ್ ನಲ್ಲಿ ನೀಡುತ್ತಿದೆ. ಅಂದರೆ ಹೋಂಡಾ ಬೈಕ್ ಅಥವಾ ಸ್ಕೂಟರ್ ಅನ್ನು ಯಾವುದೇ ಹಣ ನೀಡದೆ ಮನೆಗೆ ತೆಗೆದುಕೊಂಡು ಹೋಗಬಹುದು.

ದ್ವಿಚಕ್ರ ವಾಹನಗಳ ಮಾರಾಟದ ಮೇಲೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ Honda Motorcycle

ಇದರ ಜೊತೆಗೆ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ವಾಹನಗಳಿಗೆ 100% ನಷ್ಟು ಹಣಕಾಸು ಸೌಲಭ್ಯವನ್ನು ಒದಗಿಸುತ್ತಿದೆ. ಕಂಪನಿಯು ಆನ್‌ಲೈನ್‌ ಮೂಲಕ ವಾಹನಗಳ ಬುಕ್ಕಿಂಗ್ ಆರಂಭಿಸಿದೆ. ಇದರಿಂದ ಗ್ರಾಹಕರು ಮನೆಯಲ್ಲಿ ಕುಳಿತೇ ಹೋಂಡಾ ದ್ವಿಚಕ್ರ ವಾಹನವನ್ನು ಬುಕ್ ಮಾಡಬಹುದು.

ದ್ವಿಚಕ್ರ ವಾಹನಗಳ ಮಾರಾಟದ ಮೇಲೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ Honda Motorcycle

ಆಕರ್ಷಕ ಬಡ್ಡಿ ದರ

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಸಾಲು ಸಾಲು ಹಬ್ಬಗಳ ದೃಷ್ಟಿಯಿಂದ ತನ್ನ ಬೈಕ್‌ ಹಾಗೂ ಸ್ಕೂಟರ್‌ಗಳ ಮೇಲಿನ ಬಡ್ಡಿ ದರವನ್ನು ಕಡಿಮೆ ಮಾಡಿದೆ. ಗ್ರಾಹಕರು ಈಗ ಯಾವುದೇ ಹೋಂಡಾ ಬೈಕ್ ಅಥವಾ ಸ್ಕೂಟರ್ ಅನ್ನು ಆಕರ್ಷಕ ಬಡ್ಡಿ ದರದಲ್ಲಿ ಅಂದರೆ 5.99% ಬಡ್ಡಿ ದರದಲ್ಲಿ ಖರೀದಿಸಬಹುದು. ಇದರ ಜೊತೆಗೆ ಪ್ರಕ್ರಿಯೆ ಶುಲ್ಕವನ್ನು 0% ಗಳಿಗೆ ಇಳಿಸಲಾಗಿದೆ.

ದ್ವಿಚಕ್ರ ವಾಹನಗಳ ಮಾರಾಟದ ಮೇಲೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ Honda Motorcycle

ಒಂದು ವೇಳೆ ಗ್ರಾಹಕರು ಹೋಂಡಾ ಕಂಪನಿಯಿಂದಲೇ ವಾಹನ ವಿಮಾ ಯೋಜನೆಯನ್ನು ಖರೀದಿಸಲು ಬಯಸಿದರೆ, ಕಂಪನಿಯು ರೂ. 5 ಲಕ್ಷಗಳವರೆಗೆ ವಾಹನ ವಿಮೆಯನ್ನು ಒದಗಿಸುತ್ತದೆ. ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಭಾರತದಲ್ಲಿ 5 ಕೋಟಿ ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿ ಹೊಸ ದಾಖಲೆ ನಿರ್ಮಿಸಿದೆ. ಕಂಪನಿಯು ಭಾರತದಲ್ಲಿ 20 ವರ್ಷಗಳ ಅವಧಿಯಲ್ಲಿ ಈ ಸಾಧನೆ ಮಾಡಿದೆ.

ದ್ವಿಚಕ್ರ ವಾಹನಗಳ ಮಾರಾಟದ ಮೇಲೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ Honda Motorcycle

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು 2001ರಲ್ಲಿ ಹೋಂಡಾ Activa ಸ್ಕೂಟರ್ ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಗೆ ಪಾದಾರ್ಪಣೆ ಮಾಡಿತು. ಕಂಪನಿಯು ಮೊದಲ 25 ಮಿಲಿಯನ್ ಯುನಿಟ್ ವಾಹನಗಳನ್ನು ಮಾರಾಟ 16 ವರ್ಷ ತೆಗೆದುಕೊಂಡಿತು. ಆದರೆ ಮುಂದಿನ 25 ಮಿಲಿಯನ್ ಯುನಿಟ್ ವಾಹನಗಳನ್ನು ಕೇವಲ 5 ವರ್ಷಗಳಲ್ಲಿ ಮಾರಾಟ ಮಾಡಿತು.

ದ್ವಿಚಕ್ರ ವಾಹನಗಳ ಮಾರಾಟದ ಮೇಲೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ Honda Motorcycle

ಈ ಸಾಧನೆಯು ಕಳೆದ ಕೆಲವು ವರ್ಷಗಳಲ್ಲಿ ಕಂಪನಿಯ ಮಾರಾಟ ಎಷ್ಟು ಸುಧಾರಿಸಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಈ ಮಾರಾಟದಲ್ಲಿ Activa ಸ್ಕೂಟರ್‌ನ ಕೊಡುಗೆ ಬಹು ದೊಡ್ಡ ಪ್ರಮಾಣದಲ್ಲಿದೆ. ಹೋಂಡಾ Activa ಭಾರತದಲ್ಲಿ ಹೆಚ್ಚು ಮಾರಾಟವಾಗುವ ಸ್ಕೂಟರ್ ಆಗಿದೆ. ದೇಶದಲ್ಲಿ ಮಾರಾಟವಾಗುವ ಪ್ರತಿ ಎರಡನೇ ಸ್ಕೂಟರ್ ಹಾಗೂ ಪ್ರತಿ ಮೂರನೇ ದ್ವಿಚಕ್ರ ವಾಹನ Activa ಆಗಿದ್ದು, ಮಾರಾಟದ ವಿಷಯದಲ್ಲಿ ಮೊದಲ ಸ್ಥಾನದಲ್ಲಿದೆ.

ದ್ವಿಚಕ್ರ ವಾಹನಗಳ ಮಾರಾಟದ ಮೇಲೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ Honda Motorcycle

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಕಳೆದ ತಿಂಗಳು 4,82,756 ಯುನಿಟ್ ಬೈಕ್‌ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಈ ಪ್ರಮಾಣವು 2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಮಾರಾಟವಾದ 5,26,866 ಯುನಿಟ್‌ಗಳಿಗಿಂತ 8% ನಷ್ಟು ಕಡಿಮೆಯಾಗಿದೆ. ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ದೇಶೀಯ ಮಾರುಕಟ್ಟೆಯಲ್ಲಿ 4,63,679 ಯುನಿಟ್‌ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ್ದರೆ, 19,077 ಯುನಿಟ್‌ ದ್ವಿಚಕ್ರ ವಾಹನಗಳನ್ನು ರಫ್ತು ಮಾಡಿದೆ. 2020ರ ಸೆಪ್ಟೆಂಬರ್ ತಿಂಗಳಿಗೆ ಹೋಲಿಸಿದರೆ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಈ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಸುಮಾರು 37,000 ಯುನಿಟ್ ದ್ವಿಚಕ್ರ ವಾಹನಗಳನ್ನು ಕಡಿಮೆ ಮಾರಾಟ ಮಾಡಿದೆ.

Most Read Articles

Kannada
English summary
Honda motorcycle to give offers on two wheelers purchase details
Story first published: Wednesday, October 20, 2021, 12:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X