ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ Honda Motorcycles

ಭಾರತದಲ್ಲಿ ಸುಮಾರು ಒಂದು ವರ್ಷದಿಂದ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ. ಭಾರತದ ಬಹುತೇಕ ಎಲ್ಲಾ ಭಾಗಗಳಲ್ಲಿ ಪೆಟ್ರೋಲ್ ಬೆಲೆ ರೂ. 100 ಗಳ ಗಡಿ ದಾಟಿದೆ. ಇನ್ನು ಕೆಲವು ರಾಜ್ಯಗಳಲ್ಲಿ ಡೀಸೆಲ್ ಬೆಲೆಯೂ ಸಹ ರೂ. 100 ಗಳ ಗಡಿ ದಾಟಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಸವಾರರು ಅನಿವಾರ್ಯವಾಗಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗಿದ್ದಾರೆ.

ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ Honda Motorcycles

ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಎಲೆಕ್ಟ್ರಿಕ್ ಸ್ಕೂಟರ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಎಲೆಕ್ಟ್ರಿಕ್ ಸ್ಕೂಟರ್ ಗಳ ಮಾರಾಟ ಪ್ರಮಾಣವು ಪ್ರತಿ ತಿಂಗಳು ಹೆಚ್ಚಾಗುತ್ತಿದೆ. ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳು ಭಾರತದ ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳಲಿವೆ ಎಂದು ಹೇಳಲಾಗಿದೆ. ಈಗ ಹೆಚ್ಚು ಹೆಚ್ಚು ಗ್ರಾಹಕರು ಎಲೆಕ್ಟ್ರಿಕ್ ಸ್ಕೂಟರ್ ಗಳ ಖರೀದಿಗೆ ಆದ್ಯತೆ ನೀಡುತ್ತಿದ್ದಾರೆ.

ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ Honda Motorcycles

ಕೆಲವು ದೇಶಗಳಲ್ಲಿ ಪೆಟ್ರೋಲ್ ಸ್ಕೂಟರ್ ಗಳಿಗಿಂತ ಎಲೆಕ್ಟ್ರಿಕ್ ಸ್ಕೂಟರ್‌ಗಳು ಹೆಚ್ಚು ಮಾರಾಟವಾಗುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇ ಸ್ಕೂಟರ್ ತಯಾರಿಸುವ ಸ್ಟಾರ್ಟ್ ಅಪ್ ಕಂಪನಿಗಳಿಗೆ ರಿಯಾಯಿತಿ ಹಾಗೂ ಸಬ್ಸಿಡಿ ನೀಡುತ್ತಿವೆ. ಪೆಟ್ರೋಲ್ ದ್ವಿಚಕ್ರ ವಾಹನಗಳನ್ನು ತಯಾರಿಸುವ ಕಂಪನಿಗಳು ಸಹ ಈ ಕೊಡುಗೆಯ ಲಾಭ ಪಡೆಯಲು ಮುಂದಾಗುತ್ತಿವೆ.

ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ Honda Motorcycles

ಭಾರತದಲ್ಲಿ ಅತಿ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಕಂಪನಿಗಳಲ್ಲಿ ಒಂದಾದ Honda Motorcycles and Scooters India 2022 - 23ರಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ ಎಂದು ವರದಿಯಾಗಿದೆ. ಈ ಬಗ್ಗೆ HMSI ಅಧ್ಯಕ್ಷರಾದ ಅತುಶಿ ಒಕಾಡಾರವರೇ ಸ್ಪಷ್ಟನೆ ನೀಡಿದ್ದಾರೆ.

ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ Honda Motorcycles

ಆದರೆ ಹೋಂಡಾದ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಯಾವುದೇ ವಿವರಗಳು ಲಭ್ಯವಾಗಿಲ್ಲ. ಹೋಂಡಾ ಟೂ ವ್ಹೀಲರ್ಸ್ ಕಂಪನಿಯು ಈಗ ಬೆನ್ಲೆ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಪರೀಕ್ಷಿಸುತ್ತಿರುವ ಬಗ್ಗೆ ವರದಿಗಳಾಗಿದ್ದವು. ಆದರೂ ಹೋಂಡಾ ಬ್ರಾಂಡ್ ಅಡಿಯಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬೆನ್ಲೆ ಆಗಿರಲಿದೆಯೇ ಎಂಬುದು ಖಚಿತವಾಗಿಲ್ಲ.

ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ Honda Motorcycles

ಈ ಸ್ಕೂಟರ್ 2019 ರ ಟೋಕಿಯೊ ಮೋಟಾರ್ ಶೋದಲ್ಲಿ ಪ್ರದರ್ಶಿತವಾಗಿತ್ತು. ಬೆನ್ಲೆ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪ್ರದರ್ಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೋಂಡಾ ಮೋಟಾರ್‌ಸೈಕಲ್ ಅಂಡ್ ಸ್ಕೂಟರ್ ಇಂಡಿಯಾ ವಾಣಿಜ್ಯ ಬಳಕೆಗಾಗಿ ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸುವ ಸಾಧ್ಯತೆಗಳಿಲ್ಲ.

ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ Honda Motorcycles

ಜಪಾನ್ ಮೂಲದ ಹೋಂಡಾ ಟೂ ವ್ಹೀಲರ್ಸ್ ಕಂಪನಿಯು 2024 ರ ವೇಳೆಗೆ ಜಾಗತಿಕವಾಗಿ 3 ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ವೈಯಕ್ತಿಕ ಬಳಕೆಗಾಗಿ ಬಿಡುಗಡೆಗೊಳಿಸಲಿದೆ ಎಂದು ಹೇಳಲಾಗಿದೆ. ಹೋಂಡಾ ಭಾರತೀಯ ಗ್ರಾಹಕರಿಗಾಗಿ ಪ್ರತ್ಯೇಕವಾದ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲಿದೆ ಎಂದು ಹೇಳಲಾಗಿದೆ. ಭಾರತದಲ್ಲಿ ಉತ್ಪಾದನೆಯಾಗುವ ಹೋಂಡಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ವಿದೇಶಿ ಮಾರುಕಟ್ಟೆಗಳಿಗೆ ಕೊಂಡೊಯ್ಯಬಹುದು.

ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ Honda Motorcycles

ಬೆಲೆಗಳನ್ನು ಕಡಿಮೆ ಮಾಡಲು ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿಸಲು ನಿರ್ಧರಿಸಿರುವ ಹೋಂಡಾ ದೇಶದ ವಿವಿಧ ವಿತರಕರೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಒಕಾಡಾ ಪ್ರಕಾರ, ಸ್ಥಳೀಯವಾಗಿ ತಯಾರಾಗುವ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ವಿಶ್ವ ಮಟ್ಟಕ್ಕೆ ಕೊಂಡೊಯ್ಯುವ ಯೋಜನೆಯಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಆಗಮನವು ವಿಳಂಬವಾಗುತ್ತಿದೆ.

ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ Honda Motorcycles

ದೇಶಿಯ ಮಾರುಕಟ್ಟೆಗೆ ಮಾತ್ರ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿಸುವುದಾಗಿದ್ದರೆ ತಮ್ಮ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು 2021 ರ ವೇಳೆಗೆ ಬಿಡುಗಡೆಗೊಳಿಸಬಹುದಾಗಿತ್ತು ಎಂದು ಅವರು ಹೇಳಿದರು. ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ತಯಾರಿಸಲು ಹೋಂಡಾ ಟೂ ವ್ಹೀಲರ್‌ ಕಂಪನಿಗೆ ಅದರ ಅನುಭವ ನೆರವಿಗೆ ಬರಲಿದೆ. ಹೋಂಡಾ ಕಂಪನಿಯು ಕೆಲವು ವಿದೇಶಿ ಮಾರುಕಟ್ಟೆಗಳಲ್ಲಿ ವಾಣಿಜ್ಯ ಹಾಗೂ ವೈಯಕ್ತಿಕ ಬಳಕೆಗಾಗಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಉತ್ಪಾದಿಸಿ ಮಾರಾಟ ಮಾಡುತ್ತಿದೆ.

ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ Honda Motorcycles

ಹೋಂಡಾ ಮೊಬೈಲ್ ಎನರ್ಜಿ ಪ್ಯಾಕೇಜ್ (ಎಂಪಿಪಿ) ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿರುವ ಮೊದಲ ಹೋಂಡಾ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿಯೂ ಬಳಸಬಹುದು. ಭಾರತದಲ್ಲಿ ಈಗ ಸೀಮಿತ ಸಂಖ್ಯೆಯ ಇವಿ ಚಾರ್ಜಿಂಗ್ ಕೇಂದ್ರಗಳಿವೆ. ಚಾರ್ಜಿಂಗ್ ಕೇಂದ್ರಗಳು ಬಹಳ ಕಡಿಮೆ ಸಂಖ್ಯೆಯಲ್ಲಿ ಇರುವುದರಿಂದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂಜರಿಯುತ್ತಿದ್ದಾರೆ.

ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ Honda Motorcycles

ಆ ಹಿಂಜರಿಕೆಯನ್ನು ಹೋಗಲಾಡಿಸಲು, ಕೇಂದ್ರ ಸರ್ಕಾರ ಹಾಗೂ ವಿವಿಧ ರಾಜ್ಯ ಸರ್ಕಾರಗಳು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿವೆ. ಇದರಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ನೀಡುವ ಸಬ್ಸಿಡಿ ಸಹ ಸೇರಿದೆ. ಕೇಂದ್ರ ಸರ್ಕಾರದ ಫೇಮ್ ಇಂಡಿಯಾ 2 ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರು ಸಬ್ಸಿಡಿ ಪಡೆಯಬಹುದು.

ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ Honda Motorcycles

ಇದರ ಜೊತೆಗೆ ಆಯಾ ರಾಜ್ಯ ಸರ್ಕಾರಗಳು ಸಹ ತಮ್ಮ ಎಲೆಕ್ಟ್ರಿಕ್ ವಾಹನ ನೀತಿಯ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡುತ್ತವೆ. ಆದರೆ ಎಲ್ಲಾ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ನೀಡುತ್ತಿಲ್ಲ ಎಂಬುದು ಗಮನಾರ್ಹ. ಸದ್ಯಕ್ಕೆ ದೆಹಲಿ ಹಾಗೂ ಗುಜರಾತ್‌ನಂತಹ ಕೆಲವು ರಾಜ್ಯಗಳಲ್ಲಿ ಮಾತ್ರ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡಲಾಗುತ್ತಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Honda motorcycles to launch their first electric scooter by 2022 23 details
Story first published: Friday, October 15, 2021, 10:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X