Just In
- 3 min ago ಕೋಟಿ ಬೆಲೆಯ ಲ್ಯಾಂಡ್ರೋವರ್ ಖರೀದಿಸಿದ ಗಾಯಕಿ: ಹೆಣ್ಮಕ್ಳೇ ಸ್ಟ್ರಾಂಗು ಗುರು ಎಂದ ನೆಟ್ಟಿಗರು!
- 2 hrs ago Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- 14 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 16 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
Don't Miss!
- Finance Real Estate: ಬೆಂಗಳೂರಿನ ಕೋರಮಂಗಲದಲ್ಲಿ ದುಬಾರಿ ಬೆಲೆಗೆ ಆಸ್ತಿ ಖರೀದಿಸಿದ ಅಜಿತ್ ಐಸಾಕ್
- News ಡಿ ಕೆ ಶಿವಕುಮಾರ್ 9 ವರ್ಷದ ಬಾಲಕಿಯನ್ನು ಕೂಡಿ ಹಾಕಿ ಆಸ್ತಿ ಬರೆಸಿಕೊಂಡವ್ರೆ ; ಹಿಂದಿನ ಸತ್ಯ ಬಿಚ್ಚಿಟ್ಟ ದೇವೇಗೌಡ್ರು
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Movies "ದಪ್ಪ ಇದ್ದೀಯಾ ಅಂದ್ರೆ ದಿನ ಯಾರೊಂದಿಗೋ ಇದ್ದೀಯಾ ಅನ್ನೂ ಕೆಟ್ಟ ಮನ:ಸ್ಥಿತಿಯಿದೆ"; ನಟಿ ನೀತು
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ಹೋಂಡಾ ಹೈನೆಸ್ ಸಿಬಿ350
ಆಟೋ ಉತ್ಪಾದನಾ ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಹೋಂಡಾ ಮೋಟಾರ್ಸೈಕಲ್ ಕಂಪನಿಯು ಕೂಡಾ ತನ್ನ ಪ್ರೀಮಿಯಂ ಬೈಕ್ ಮಾದರಿಯಾದ ಹೈನೆಸ್ ಸಿಬಿ350 ಆವೃತ್ತಿಯ ಬೆಲೆ ಹೆಚ್ಚಳಕ್ಕೆ ಮುಂದಾಗಿದೆ.
2021ರ ಅವಧಿಯಲ್ಲೇ ಈಗಾಗಲೇ ಒಂದು ಬಾರಿ ಬಹುತೇಕ ಹೊಸ ವಾಹನಗಳ ಬೆಲೆ ಹೆಚ್ಚಳವಾಗಿದ್ದು, ಇದೀಗ ಎರಡನೇ ಬಾರಿಗೆ ಏಪ್ರಿಲ್ 1ರಿಂದ ಮತ್ತೆ ಹೊಸ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡಲಾಗುತ್ತಿದೆ. ಹೋಂಡಾ ಮೋಟಾರ್ಸೈಕಲ್ ಕಂಪನಿಯು ಹೈನೆಸ್ ಸಿಬಿ350 ಬೆಲೆಯಲ್ಲಿ ರೂ. 3 ಸಾವಿರದಿಂದ ರೂ.5 ಸಾವಿರ ಬೆಲೆ ಮಾಡುವ ಸುಳಿವು ನೀಡಿದ್ದು, ಹೊಸ ದರಪಟ್ಟಿಯು ಏಪ್ರಿಲ್ 1ರಿಂದಲೇ ಅನ್ವಯವಾಗಲಿದೆ.
2020ರ ಅಕ್ಬೋಬರ್ ಮಧ್ಯಂತರದಲ್ಲಿ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಬಿಡುಗಡೆ ಮಾಡಿದ್ದ ಹೋಂಡಾ ಕಂಪನಿಯು ಇದುವರೆಗೆ 15 ಸಾವಿರಕ್ಕೂ ಹೆಚ್ಚು ಯುನಿಟ್ ಬೈಕ್ ವಿತರಣೆ ಮಾಡಿದ್ದು, ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.
ಹೈನೆಸ್ ಸಿಬಿ350 ಬೈಕ್ ಮಾದರಿಯ ಮೂಲಕ ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ಹೋಂಡಾ ಕಂಪನಿಯು ರಾಯಲ್ ಎನ್ಫೀಲ್ಡ್ ನಿರ್ಮಾಣದ ಕ್ಲಾಸಿಕ್ 350, ಬೆನೆಲ್ಲಿ ಇಂಪೀರಿಯಲ್ 400 ಮತ್ತು ಜಾವಾ ಕ್ಲಾಸಿಕ್ ಬೈಕ್ಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.
ಹೈನೆಸ್ ಸಿಬಿ350 ಬೈಕ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಡಿಲಕ್ಸ್ ಮಾದರಿಯ ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 1,86,500 ಮತ್ತು ಡಿಲಕ್ಸ್ ಪ್ರೋ ಮಾದರಿಯು ರೂ. 1,92,500 ಬೆಲೆ ಹೊಂದಿದೆ. ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆ ಮತ್ತು ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ಹೈನೆಸ್ ಸಿಬಿ350 ಮಾದರಿಯು ಅತಿ ಕಡಿಮೆ ಅವಧಿಯಲ್ಲಿ ಉತ್ತಮ ಮಾರಾಟ ಗುರಿ ಸಾಧಿಸಿದೆ.
ಹೈನೆಸ್ ಸಿಬಿ 350 ಬೈಕಿನ ವಿನ್ಯಾಸವು ಹಳೆಯ ಕ್ಲಾಸಿಕ್ ಸಿಬಿ ಬೈಕ್ ಸರಣಿಯನ್ನು ನೆನಪಿಸಲಿದ್ದು, ಈ ಬೈಕಿನ ಮುಂಭಾಗದಲ್ಲಿ ರೌಂಡ್ ಎಲ್ಇಡಿ ಹೆಡ್ಲ್ಯಾಂಪ್ ಕ್ರೋಮ್ ಫ್ರಂಟ್ ಫೆಂಡರ್ ಹಾಗೂ ಫೋರ್ಕ್ಗಳನ್ನು ಪಡೆದುಕೊಂಡಿದೆ. ಈ ಬೈಕಿನಲ್ಲಿ ದೊಡ್ಡದಾದ 15-ಲೀಟರಿನ ಫ್ಯೂಯಲ್ ಟ್ಯಾಂಕ್ ಜೋಡಿಸಲಾಗಿದ್ದು, ಈ ಬೈಕಿನ ಸೈಡ್ ಗಳಲ್ಲಿ ಹೊಂಡಾ ಬ್ಯಾಡ್ಜಿಂಗ್ ಅಳವಡಿಸಲಾಗಿದೆ.
ಎಂಜಿನ್ ಕವರ್, ಎಕ್ಸಾಸ್ಟ್ ಸೇರಿದಂತೆ ಈ ಬೈಕಿನ ಹಲವು ಭಾಗಗಳಲ್ಲಿ ಕ್ರೋಮ್ ಬಣ್ಣವನ್ನು ನೀಡಲಾಗಿದ್ದು, ಎಕ್ಸಾಸ್ಟ್ ಕ್ಲಾಸಿಕ್ ಲೋ-ಪಿಚ್ ಥಂಪಿ ನೋಟ್ ಹೊಂದಿದೆ. ಬೈಕ್ ವಿನ್ಯಾಸವನ್ನು ಸರಳಗೊಳಿಸಲು ಹಿಂಭಾಗವನ್ನು ಚಿಕ್ಕದು ಮಾಡಲಾಗಿದ್ದು, ಈ ಸೆಗ್ ಮೆಂಟಿನಲ್ಲಿ ಮೊದಲ ಬಾರಿಗೆ ಈ ಬೈಕಿನಲ್ಲಿ ರಿಂಗ್-ಟೈಪ್ ವಿಂಕರ್ ಗಳನ್ನು ನೀಡಲಾಗಿದೆ.
ಹೋಂಡಾ ಹೈನೆಸ್ ಸಿಬಿ 350 ಬೈಕಿನಲ್ಲಿ ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್ಗಳಿವೆ.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ
ಬೇಸ್ ಮಾದರಿಯನ್ನು ಪ್ರೆಷಿಯಸ್ ರೆಡ್ ಮೆಟಾಲಿಕ್, ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಎಂಬ ಮೂರು ಸಿಂಗಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಸದ್ಯ ಹೊಸ ಬೈಕ್ ಮಾದರಿಯ ಹೋಂಡಾ ಬಿಗ್ವಿಂಗ್ ಮಾರಾಟ ಮಳಿಗೆಗಳಿಗೆ ಮಾತ್ರವೇ ಖರೀದಿಗೆ ಲಭ್ಯವಿದೆ.
ಇನ್ನು ಟಾಪ್-ಎಂಡ್ ಡಿಎಲ್ಎಕ್ಸ್ ಪ್ರೊ ಮಾದರಿಯನ್ನು ಮ್ಯಾಟ್ ಗ್ರೇ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ವರ್ಚುವಸ್ ವೈಟ್ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಸ್ಪಿಯರ್ ಸಿಲ್ವರ್ ಮೆಟಾಲಿಕ್ ಪರ್ಲ್ ನೈಟ್ ಸ್ಟಾರ್ ಮೆಟಾಲಿಕ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಈ ಬೈಕ್ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, 5-ಸ್ಪೀಡ್ ಗೇರ್ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ನೊಂದಿಗೆ 20.8-ಬಿಎಚ್ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.