ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ಹೋಂಡಾ ಹೈನೆಸ್ ಸಿಬಿ350

ಆಟೋ ಉತ್ಪಾದನಾ ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಕೂಡಾ ತನ್ನ ಪ್ರೀಮಿಯಂ ಬೈಕ್ ಮಾದರಿಯಾದ ಹೈನೆಸ್ ಸಿಬಿ350 ಆವೃತ್ತಿಯ ಬೆಲೆ ಹೆಚ್ಚಳಕ್ಕೆ ಮುಂದಾಗಿದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ಹೋಂಡಾ ಹೈನೆಸ್ ಸಿಬಿ350

2021ರ ಅವಧಿಯಲ್ಲೇ ಈಗಾಗಲೇ ಒಂದು ಬಾರಿ ಬಹುತೇಕ ಹೊಸ ವಾಹನಗಳ ಬೆಲೆ ಹೆಚ್ಚಳವಾಗಿದ್ದು, ಇದೀಗ ಎರಡನೇ ಬಾರಿಗೆ ಏಪ್ರಿಲ್ 1ರಿಂದ ಮತ್ತೆ ಹೊಸ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡಲಾಗುತ್ತಿದೆ. ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಹೈನೆಸ್ ಸಿಬಿ350 ಬೆಲೆಯಲ್ಲಿ ರೂ. 3 ಸಾವಿರದಿಂದ ರೂ.5 ಸಾವಿರ ಬೆಲೆ ಮಾಡುವ ಸುಳಿವು ನೀಡಿದ್ದು, ಹೊಸ ದರಪಟ್ಟಿಯು ಏಪ್ರಿಲ್ 1ರಿಂದಲೇ ಅನ್ವಯವಾಗಲಿದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ಹೋಂಡಾ ಹೈನೆಸ್ ಸಿಬಿ350

2020ರ ಅಕ್ಬೋಬರ್ ಮಧ್ಯಂತರದಲ್ಲಿ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಬಿಡುಗಡೆ ಮಾಡಿದ್ದ ಹೋಂಡಾ ಕಂಪನಿಯು ಇದುವರೆಗೆ 15 ಸಾವಿರಕ್ಕೂ ಹೆಚ್ಚು ಯುನಿಟ್ ಬೈಕ್ ವಿತರಣೆ ಮಾಡಿದ್ದು, ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ಹೋಂಡಾ ಹೈನೆಸ್ ಸಿಬಿ350

ಹೈನೆಸ್ ಸಿಬಿ350 ಬೈಕ್ ಮಾದರಿಯ ಮೂಲಕ ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ಹೋಂಡಾ ಕಂಪನಿಯು ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಕ್ಲಾಸಿಕ್ 350, ಬೆನೆಲ್ಲಿ ಇಂಪೀರಿಯಲ್ 400 ಮತ್ತು ಜಾವಾ ಕ್ಲಾಸಿಕ್ ಬೈಕ್‌ಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ಹೋಂಡಾ ಹೈನೆಸ್ ಸಿಬಿ350

ಹೈನೆಸ್ ಸಿಬಿ350 ಬೈಕ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಡಿಲಕ್ಸ್ ಮಾದರಿಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1,86,500 ಮತ್ತು ಡಿಲಕ್ಸ್ ಪ್ರೋ ಮಾದರಿಯು ರೂ. 1,92,500 ಬೆಲೆ ಹೊಂದಿದೆ. ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆ ಮತ್ತು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ಹೈನೆಸ್ ಸಿಬಿ350 ಮಾದರಿಯು ಅತಿ ಕಡಿಮೆ ಅವಧಿಯಲ್ಲಿ ಉತ್ತಮ ಮಾರಾಟ ಗುರಿ ಸಾಧಿಸಿದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ಹೋಂಡಾ ಹೈನೆಸ್ ಸಿಬಿ350

ಹೈನೆಸ್ ಸಿಬಿ 350 ಬೈಕಿನ ವಿನ್ಯಾಸವು ಹಳೆಯ ಕ್ಲಾಸಿಕ್ ಸಿಬಿ ಬೈಕ್ ಸರಣಿಯನ್ನು ನೆನಪಿಸಲಿದ್ದು, ಈ ಬೈಕಿನ ಮುಂಭಾಗದಲ್ಲಿ ರೌಂಡ್ ಎಲ್ಇಡಿ ಹೆಡ್‌ಲ್ಯಾಂಪ್ ಕ್ರೋಮ್ ಫ್ರಂಟ್ ಫೆಂಡರ್‌ ಹಾಗೂ ಫೋರ್ಕ್‌ಗಳನ್ನು ಪಡೆದುಕೊಂಡಿದೆ. ಈ ಬೈಕಿನಲ್ಲಿ ದೊಡ್ಡದಾದ 15-ಲೀಟರಿನ ಫ್ಯೂಯಲ್ ಟ್ಯಾಂಕ್ ಜೋಡಿಸಲಾಗಿದ್ದು, ಈ ಬೈಕಿನ ಸೈಡ್ ಗಳಲ್ಲಿ ಹೊಂಡಾ ಬ್ಯಾಡ್ಜಿಂಗ್ ಅಳವಡಿಸಲಾಗಿದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ಹೋಂಡಾ ಹೈನೆಸ್ ಸಿಬಿ350

ಎಂಜಿನ್ ಕವರ್, ಎಕ್ಸಾಸ್ಟ್ ಸೇರಿದಂತೆ ಈ ಬೈಕಿನ ಹಲವು ಭಾಗಗಳಲ್ಲಿ ಕ್ರೋಮ್ ಬಣ್ಣವನ್ನು ನೀಡಲಾಗಿದ್ದು, ಎಕ್ಸಾಸ್ಟ್ ಕ್ಲಾಸಿಕ್ ಲೋ-ಪಿಚ್ ಥಂಪಿ ನೋಟ್ ಹೊಂದಿದೆ. ಬೈಕ್ ವಿನ್ಯಾಸವನ್ನು ಸರಳಗೊಳಿಸಲು ಹಿಂಭಾಗವನ್ನು ಚಿಕ್ಕದು ಮಾಡಲಾಗಿದ್ದು, ಈ ಸೆಗ್ ಮೆಂಟಿನಲ್ಲಿ ಮೊದಲ ಬಾರಿಗೆ ಈ ಬೈಕಿನಲ್ಲಿ ರಿಂಗ್-ಟೈಪ್ ವಿಂಕರ್ ಗಳನ್ನು ನೀಡಲಾಗಿದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ಹೋಂಡಾ ಹೈನೆಸ್ ಸಿಬಿ350

ಹೋಂಡಾ ಹೈನೆಸ್ ಸಿಬಿ 350 ಬೈಕಿನಲ್ಲಿ ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ಹೋಂಡಾ ಹೈನೆಸ್ ಸಿಬಿ350

ಬೇಸ್ ಮಾದರಿಯನ್ನು ಪ್ರೆಷಿಯಸ್ ರೆಡ್ ಮೆಟಾಲಿಕ್, ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಎಂಬ ಮೂರು ಸಿಂಗಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಸದ್ಯ ಹೊಸ ಬೈಕ್ ಮಾದರಿಯ ಹೋಂಡಾ ಬಿಗ್‌ವಿಂಗ್ ಮಾರಾಟ ಮಳಿಗೆಗಳಿಗೆ ಮಾತ್ರವೇ ಖರೀದಿಗೆ ಲಭ್ಯವಿದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ಹೋಂಡಾ ಹೈನೆಸ್ ಸಿಬಿ350

ಇನ್ನು ಟಾಪ್-ಎಂಡ್ ಡಿಎಲ್ಎಕ್ಸ್ ಪ್ರೊ ಮಾದರಿಯನ್ನು ಮ್ಯಾಟ್ ಗ್ರೇ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ವರ್ಚುವಸ್ ವೈಟ್ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಸ್ಪಿಯರ್ ಸಿಲ್ವರ್ ಮೆಟಾಲಿಕ್ ಪರ್ಲ್ ನೈಟ್ ಸ್ಟಾರ್ ಮೆಟಾಲಿಕ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ಹೋಂಡಾ ಹೈನೆಸ್ ಸಿಬಿ350

ಈ ಬೈಕ್ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್‌ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 20.8-ಬಿಎಚ್‌ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

Most Read Articles

Kannada
English summary
Honda Planning To Hike CB350 H'ness Prices From 1st April. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X