ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್
ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಆಯ್ದ ಸ್ಕೂಟರ್ ಮತ್ತು ಬೈಕ್ ಮಾದರಿಗಳ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್ ಅನ್ನು ಮತ್ತಷ್ಟು ವಿಸ್ತರಿಸಿದೆ. ಇದೀಗ ಹೋಂಡಾ ಕಂಪನಿಯು ಆಕ್ಟಿವಾ 125 ಸ್ಕೂಟರ್ ಮೇಲೆ ಕ್ಯಾಶ್‌ಬ್ಯಾಕ್ ಆಫರ್ ಅನ್ನು ನೀಡುತ್ತಿದೆ.

ಗ್ರಾಹಕರು ಈ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸುವಾಗ ರೂ.3500 ವರೆಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ಲಭಿಸುತ್ತದೆ. ಆದರೆ ಇದಕ್ಕೆ ನಿಯಮಗಳು ಮತ್ತು ಕೆಲವು ಷರತ್ತುಗಳಿವೆ. ಈ ಕೊಡುಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಇಎಂಐ ವಹಿವಾಟಿನಲ್ಲಿ ಮಾತ್ರ ಮಾನ್ಯವಾಗಿರುತ್ತದೆ ಮತ್ತು ಕನಿಷ್ಠ ವಹಿವಾಟು ಮೌಲ್ಯವು ರೂ.40,000 ಗಳಾಗಿರಬೇಕು ಎಂದು ಹೋಂಡಾ ಕಂಪನಿ ಹೇಳಿದೆ.

ಈ ಕ್ಯಾಶ್‌ಬ್ಯಾಕ್ ಆಫರ್ ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ. ಈ ಹೋಂಡಾ ಆಕ್ಟಿವಾ 125 ಸ್ಕೂಟರ್ ಮೇಲೆ ನೀಡಿರುವ ಕ್ಯಾಶ್‌ಬ್ಯಾಕ್ ಆಫರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಹತ್ತಿರದ ಹೋಂಡಾ ಮೋಟಾರ್‌ಸೈಕಲ್ ಕಂಪನಿಯ ಡೀಲರ್‌ಶಿಪ್‌ಗೆ ಭೇಟಿ ನೀಡಿ.

ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಸ್ಟ್ಯಾಂಡರ್ಡ್, ಅಲಾಯ್ ಮತ್ತು ಡಿಲಕ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ವಿಶ್ವಾಸಾರ್ಹವಾದ ಹಾಗೂ ಹೆಚ್ಚು ಮೈಲೇಜ್ ನೀಡುವ ಈ ಸ್ಕೂಟರ್ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ.

ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ನಲ್ಲಿ 124 ಸಿಸಿ ಏರ್-ಕೂಲ್ಡ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 6,500 ಆರ್‌ಪಿಎಂನಲ್ಲಿ 8.18 ಬಿಹೆಚ್‍ಪಿ ಪವರ್ ಮತ್ತು 5,000 ಆರ್‌ಪಿಎಂನಲ್ಲಿ 10.3 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಎಸ್ 6 ಎಂಜಿನ್ ಹೊಂದಿರುವ ಹೊಸ ಸ್ಕೂಟರಿನಲ್ಲಿ ಪರಿಷ್ಕರಿಸಿದ ಎಲ್‍ಇಡಿ ಹೆಡ್‍ಲ್ಯಾಂಪ್, ಮುಂಭಾಗ ಹಾಗೂ ಸೈಡ್‍ನಲ್ಲಿ ಕ್ರೋಮ್ ಟ್ರಿಮ್ ಹಾಗೂ ಮುಂಭಾಗದಲ್ಲಿ ಹೊಸ ಎಪ್ರಾನ್‍ಗಳನ್ನು ನೀಡಲಾಗಿದೆ.

ಈ ಬಿಎಸ್-6 ಆಕ್ಟಿವಾ 125 ಸ್ಕೂಟರ್ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಹಿಂಭಾಗದಲ್ಲಿ ಮೂರು-ಹಂತದ ಹೊಂದಾಣಿಕೆ ಮಾಡಬಹುದಾದ ಸ್ಪ್ರಿಂಗ್-ಲೋಡೆಡ್ ಹೈಡ್ರಾಲಿಕ್ ಸೆಟಪ್ ಅನ್ನು ಅಳವಡಿಸಲಾಗಿದೆ.

ಬಿಎಸ್-6 ಆಕ್ಟಿವಾ 125 ಸ್ಕೂಟರ್ ಸ್ಕೂಟರ್ ನಲ್ಲಿ ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಎಸಿಜಿ ಸ್ಟಾರ್ಟರ್, ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್ ಮತ್ತು ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ನಂತಹ ಫೀಚರ್ ಗಳನ್ನು ಹೊಂದಿದೆ.

ಹೋಂಡಾ ಮೋಟಾರ್‌ಸೈಕಲ್ ಸರಣಿಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಸ್ಕೂಟರ್ ಪಟ್ಟಿಯಲ್ಲಿ ಬಿಎಸ್-6 ಆಕ್ಟಿವಾ 125 ಕೂಡ ಒಂದಾಗಿದೆ. ಈ ಸ್ಕೂಟರ್ ಮೇಲೆ ಬಂಪರ್ ಕ್ಯಾಶ್ ಬ್ಯಾಕ್ ಆಫರ್ ಅನ್ನು ನೀಡಿರುವುದರಿಂದ ಮಾರಾಟವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ.


Click it and Unblock the Notifications