ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.60.77ರಷ್ಟು ಬೆಳವಣಿಗೆ ಸಾಧಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು 2021ರ ಮಾರ್ಚ್ ತಿಂಗಳಿನ ತನ್ನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ವರದಿಯ ಪ್ರಕಾರ ಕಳೆದ ತಿಂಗಳು, ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.60.77 ರಷ್ಟು ಬೆಳವಣಿಗೆ ಸಾಧಿಸಿದ ಹೋಂಡಾ ಮೋಟಾರ್‌ಸೈಕಲ್

ಕಳೆದ ತಿಂಗಳು ದೇಶೀಯ ಮಾರುಕಟ್ಟೆಯಲ್ಲಿ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು 395,037 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು ಕಳೆದ ವರ್ಷದ ಇದೇ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ಕಂಪನಿಯು 245,716 ಯುನಿಟ್‌ಗಳನ್ನು ಮಾರಾಟಗೊಳಿಸಿತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.60.77 ರಷ್ಟು ಬೆಳವಣಿಗೆ ಕಂಡಿದೆ. ಇನ್ನು ಹೋಂಡಾ ಕಂಪನಿಯು ಕಳೆದ ತಿಂಗಳಿನಲ್ಲಿ 16,000 ಯುನಿಟ್‌ಗಳನ್ನು ರಫ್ತು ಮಾಡಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.60.77 ರಷ್ಟು ಬೆಳವಣಿಗೆ ಸಾಧಿಸಿದ ಹೋಂಡಾ ಮೋಟಾರ್‌ಸೈಕಲ್

ಹೆಎಚ್‌ಎಂಎಸ್‌ಐನ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ನಿರ್ದೇಶಕ ಯದ್ವಿಂದರ್ ಸಿಂಗ್ ಗುಲೇರಿಯಾ ಅವರು ಮಾತನಾಡಿ, ಹಣಕಾಸಿನ ವರ್ಷ ಭೂತಪೂರ್ವ ಅನಿಶ್ಚಿತತೆಗಳ ವರ್ಷವಾಗಿತ್ತು. ಹೋಂಡಾ ಲಾಕ್‌ಡೌನ್‌ಗಳಿಂದ ಅನ್‌ಲಾಕ್‌ಗಳವರೆಗಿನ ಸವಾಲುಗಳನ್ನು ನಿವಾರಿಸಿಕೊಂಡಿತು, ಆದರೆ ಅನೇಕ ಹೊಸ ಪ್ರಥಮಗಳನ್ನು ಸೃಷ್ಟಿಸುವುದನ್ನು ಮುಂದುವರೆಸಿದ್ದೇವೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.60.77 ರಷ್ಟು ಬೆಳವಣಿಗೆ ಸಾಧಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಭಾರತದಲ್ಲಿ ಹಲವು ಹೊಸ ಮಾದರಿಗಳನ್ನು ಪರಿಚಯಿಸಿದೆ. ಇದರಲ್ಲಿ ರೆಟ್ರೋ ಶೈಲಿಯ ಬೈಕ್ ಗಳು ಒಳಗೊಂಡಿದೆ. ಮಾರಾಟದಲ್ಲಿ ಇನ್ನಷ್ಟು ಬೆಳವಣಿಗೆಯನ್ನು ಸಾಧಿಸುವ ವಿಶ್ವಾಸವಿದೆ ಎಂದು ಹೇಳಿದರು.

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.60.77 ರಷ್ಟು ಬೆಳವಣಿಗೆ ಸಾಧಿಸಿದ ಹೋಂಡಾ ಮೋಟಾರ್‌ಸೈಕಲ್

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ರಾಯಲ್ ಎನ್‌ಫೀಲ್ಡ್ ಬೈಕಿಗೆ ಪೈಪೋಟಿಯನ್ನು ನೀಡಲು ಹೈನೆಸ್ ಸಿಬಿ350 ಬಳಿಕ ಅದೇ ವಿಭಾಗದಲ್ಲಿ ಮತ್ತೊಂದು ಹೊಸ ಬೈಕ್ ಆದ ಸಿಬಿ350 ಆರ್‌‌ಎಸ್ ಸ್ಕ್ರ್ಯಾಂಬ್ಲರ್ ಮಾದರಿಯನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತು. ಈ ಹೊಸ ಸಿಬಿ350 ಆರ್‌‌ಎಸ್ ಸ್ಕ್ರ್ಯಾಂಬ್ಲರ್ ಬೈಕಿನ ವಿತರಣೆಯನ್ನು ಭಾರತದಲ್ಲಿ ಪ್ರಾರಂಭಿಸಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.60.77 ರಷ್ಟು ಬೆಳವಣಿಗೆ ಸಾಧಿಸಿದ ಹೋಂಡಾ ಮೋಟಾರ್‌ಸೈಕಲ್

ಈ ಬೈಕ್ ಗಳನ್ನ್ನು ಬಿಗ್‌ವ್ಹೀಂಗ್ ಪ್ರೀಮಿಯಂ ಡೀಲರ್‌ಶಿಪ್ ನೆಟ್‌ವರ್ಕ್ ಮೂಲಕ ಮಾರಾಟ ಮಾಡಲಾಗುತ್ತದೆ. ಹೈನೆಸ್ ಸಿಬಿ350 ಬೈಕಿನಲ್ಲಿ ಇರುವ ಅದೇ 348.6ಸಿಸಿ, ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಸಿಬಿ350 ಆರ್‌‌ಎಸ್ ಸ್ಕ್ರ್ಯಾಂಬ್ಲರ್ ಬೈಕಿನಲ್ಲಿ ಅಳವಡಿಸಲಾಗಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.60.77 ರಷ್ಟು ಬೆಳವಣಿಗೆ ಸಾಧಿಸಿದ ಹೋಂಡಾ ಮೋಟಾರ್‌ಸೈಕಲ್

ಈ ಸಿಂಗಲ್ ಸಿಲಿಂಡರ್ ಎಂಜಿನ್ 5,500 ಆರ್‌ಪಿಎಂನಲ್ಲಿ 20.78 ಬಿಹೆಚ್‌ಪಿ ಮತ್ತು 3,000 ಆರ್‌ಪಿಎಂನಲ್ಲಿ 30 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದ್ದು. ಇದರೊಂದಿಗೆ ಸ್ಲಿಪ್ಪರ್ ಕ್ಲಚ್ ಅನ್ನು ಪಡೆಯುತ್ತದೆ, ಇದು ಕ್ಲಚ್ ಲಿವರ್ ಕಾರ್ಯಾಚರಣೆಯ ಹೊರೆ ಕಡಿಮೆಮಾಡಿ ಗೇರ್ ವರ್ಗಾವಣೆಯನ್ನು ಸುಗಮಗೊಳಿಸುತ್ತದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.60.77 ರಷ್ಟು ಬೆಳವಣಿಗೆ ಸಾಧಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ದ್ವಿಚಕ್ರ ವಾಹನ ಮಾರಾಟದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಂದಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿದೆ. ಕಳೆದ 20 ವರ್ಷಗಳಲ್ಲಿ ದಕ್ಷಿಣ ಭಾರತದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಬರೋಬ್ಬ 1.50 ಕೋಟಿ ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.60.77 ರಷ್ಟು ಬೆಳವಣಿಗೆ ಸಾಧಿಸಿದ ಹೋಂಡಾ ಮೋಟಾರ್‌ಸೈಕಲ್

2001ರಿಂದ 2016ರ ಅವಧಿಯಲ್ಲಿ 75 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ್ದ ಹೋಂಡಾ ಕಂಪನಿಯು 2017ರಿಂದ ಇದುವರೆಗೆ ಮೂರು ಪಟ್ಟು ಹೆಚ್ಚು ಬೇಡಿಕೆಯೊಂದಿಗೆ 1.50 ಕೋಟಿ ಯುನಿಟ್ ಮಾರಾಟ ಮೈಲಿಗಲ್ಲನ್ನು ದಾಖಲಿಸಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.60.77 ರಷ್ಟು ಬೆಳವಣಿಗೆ ಸಾಧಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಕಂಪನಿಯ ಕಳೆದ ತಿಂಗಳ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಹೊಂಡಾ ದ್ವಿಚಕ್ರ ಮಾರಾಟದಲ್ಲಿ ಆಕ್ಟಿವಾ ಸ್ಕೂಟರ್ ಹೆಚ್ಚಿನ ಕೊಡುಗೆಯನ್ನು ನೀಡಿದೆ.

Most Read Articles

Kannada
English summary
Honda 2Wheelers India Registers 60.77 Per Cent Growth Year-On-Year. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X