ಕೇವಲ 24 ಗಂಟೆಯೊಳಗೆ ಸೋಲ್ಡ್ ಔಟ್ ಆದ ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್

ಹೋಂಡಾ ಮೋಟರ್ ಸೈಕಲ್ ಮತ್ತು ಸ್ಕೂಟರ್ಸ್ ಇಂಡಿಯಾ ಕಂಪನಿಯು ಬಿಎಸ್6 ಗೋಲ್ಡ್ ವಿಂಗ್ ಟುರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೋಂಡಾ ಗೋಲ್ಡ್ ವಿಂಗ್ ಜಾಗತಿಕವಾಗಿ ಜನಪ್ರಿಯ ಐಷಾರಾಮಿ ಬೈಕ್‌ಗಳಲ್ಲಿ ಒಂದಾಗಿದೆ.

ಕೇವಲ 24 ಗಂಟೆಯೊಳಗೆ ಸೋಲ್ಡ್ ಔಟ್ ಆದ ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್

ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭಿಸಿದ ಕೇವಲ 24 ಗಂಟೆಯೊಳಗೆ ಸೋಲ್ಡ್ ಔಟ್ ಆಗಿ ಎಂದು ಹೋಂಡಾ ಕಂಪನಿಯು ಹೇಳಿದೆ. ಆದರೆ ಈ ಬೈಕಿನ ಎಷ್ಟು ಯುನಿಟ್ ಗಳನ್ನು ಮಾರಾಟ ಮಾಡಿದೆ ಎಂಬುವುದನ್ನು ಬಹಿರಂಗಪಡಿಸಿಲ್ಲ. ಇನ್ನು ಈ ಹೊಸ ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ,37.20 ಲಕ್ಷಗಳಾಗಿದೆ. ಈ ಹೋಂಡಾ ಗೋಲ್ಡ್ ವಿಂಗ್ ಬೈಕಿನ ವಿತರಣೆಯನ್ನು ಈ ತಿಂಗಳಿನಲ್ಲಿ ಪ್ರಾರಂಭಿಸಬಹುದು.

ಕೇವಲ 24 ಗಂಟೆಯೊಳಗೆ ಸೋಲ್ಡ್ ಔಟ್ ಆದ ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್

ಹೊಸ ಹೋಂಡಾ ಗೋಲ್ಡ್ ವಿಂಗ್ ಬೈಕ್ ಟೂರ್ ಭಾರತಕ್ಕೆ ಕಂಪ್ಲೀಟ್ ಬಿಲ್ಟ್-ಅಪ್ ಯುನಿಟ್(ಸಿಬಿಯು) ಆಗಿ ಬರುತ್ತದೆ. ಈ ಬೈಕನ್ನು ಪ್ರೀಮಿಯಂ ಬಿಗ್ ವಿಂಗ್ ಡೀಲರ್‌ಶಿಪ್ ಮೂಲಕ ಮಾರಾಟ ಮಾಡಲಾಗುತ್ತದೆ. ಇನ್ನು 2021ರ ಹೋಂಡಾ ಗೋಲ್ಡ್ ವಿಂಗ್ ಬೈಕನ್ನು ಹಿಂದಿನ ಮಾದರಿಗೆ ಹೋಲಿಸಿದರೆ ಯಾವುದೇ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿಲ್ಲ. ಆದರೆ ಕೆಲವು ಸಣ್ಣ ಬದಲಾವಣೆಗಳಿವೆ.

ಕೇವಲ 24 ಗಂಟೆಯೊಳಗೆ ಸೋಲ್ಡ್ ಔಟ್ ಆದ ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್

ಹೋಂಡಾ ಗೋಲ್ಡ್ ವಿಂಗ್ ಟೂರ್ ಜಗತ್ತಿನಾದ್ಯಂತ ಲಭ್ಯವಿರುವ ಐಕಾನಿಕ್ ಬೈಕ್ ಗಳಲ್ಲಿ ಒಂದಾಗಿದೆ. ಹೊಸ ಬೈಕ್‌ನಲ್ಲಿ ಎದ್ದು ಕಾಣುವ ವೈಶಿಷ್ಟ್ಯವೆಂದರೆ ಇದರ 1695 ಎಂಎಂ ಲಾಂಗ್-ವೀಲ್‌ಬೇಸ್. ಡ್ಯುಯಲ್-ಪಾಡ್ ಹೆಡ್‌ಲ್ಯಾಂಪ್‌ಗಳೊಂದಿಗೆ ಅದರ ಡಿಸ್ಕ್ಟಿಕ್ಟಿವ್ ಫ್ರಂಟ್-ಎಂಡ್ ಸ್ಟೈಲಿಂಗ್ ಆಗಿದೆ.

ಕೇವಲ 24 ಗಂಟೆಯೊಳಗೆ ಸೋಲ್ಡ್ ಔಟ್ ಆದ ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್

ಈ ಐಷಾರಾಮಿ ಬೈಕಿನಲ್ಲಿ 1,833 ಸಿಸಿ, ಲಿಕ್ವಿಡ್-ಕೂಲ್ಡ್ ಎಂಜಿನ್ ಹೊಂದಿದೆ. ಈ ಎಂಜಿನ್ 125 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದರೊಂದಿಗೆ ಸ್ಲಿಪ್ಪರ್ ಕ್ಲಚ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಕೇವಲ 24 ಗಂಟೆಯೊಳಗೆ ಸೋಲ್ಡ್ ಔಟ್ ಆದ ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್

ಹೊಸ ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್ ಬಹಳಷ್ಟು ಪ್ರೀಮಿಯಂ ವೈಶಿಷ್ಟ್ಯಗಳನ್ನು ಸಹ ಹೊಂದಿದೆ. ಇದರಲ್ಲಿ 7.0-ಇಂಚಿನ ಟಿಎಫ್‌ಟಿ ಇನ್ಸ್ ಟ್ರೂಮೆಂಟ್ ಕನ್ಸೋಲ್ ಜೊತೆಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿದೆ.

ಕೇವಲ 24 ಗಂಟೆಯೊಳಗೆ ಸೋಲ್ಡ್ ಔಟ್ ಆದ ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್

ಇದರೊಂದಿಗೆ ಗೈರೊಕಾಂಪಾಸ್ ನ್ಯಾವಿಗೇಷನ್, ಸ್ಮಾರ್ಟ್ ಕೀ, ಎಲೆಕ್ಟ್ರಾನಿಕ್-ಹೊಂದಾಣಿಕೆ ಮಾಡಬಹುದಾದ ವಿಂಡ್‌ಸ್ಕ್ರೀನ್, ಹಿಲ್ ಸ್ಟಾರ್ಟ್ ಅಸಿಸ್ಟ್, ಐಡಲ್ ಸ್ಟಾರ್ಟ್-ಸ್ಟಾಪ್ ಸಿಸ್ಟಮ್ (ಡಿಸಿಟಿ ಮಾತ್ರ) ಮತ್ತು ಆಲ್-ಎಲ್ಇಡಿ ಲೈಟಿಂಗ್ ಅನ್ನು ಕೂಡ ಒಳಗೊಂಡಿದೆ.

ಕೇವಲ 24 ಗಂಟೆಯೊಳಗೆ ಸೋಲ್ಡ್ ಔಟ್ ಆದ ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್

ಈ ಗೋಲ್ಡ್ ವಿಂಗ್ ಟೂರ್ ಬೈಕ್ ಟ್ರ್ಯಾವೇಲ್, ಸ್ಪೋಟ್ಸ್, ರೈನ್ ಮತ್ತು ಇಕಾನ್ ಎಂಬ ರೈಡಿಂಗ್ ಮೋಡ್ ಅನ್ನು ಹೊಂದಿರಲಿದೆ. 2021ರ ಗೋಲ್ಡ್ ವಿಂಗ್ ಅತ್ಯಂತ ಬೃಹತ್ ಗಾತ್ರದ ಅಲ್ಟ್ರಾ ಪ್ರೀಮಿಯಂ ಬೈಕ್ ಆಗಿದೆ. ಇನ್ನು ಈ ಬೈಕ್ ಸ್ಟೆಪ್ಡ್ ಸೀಟುಗಳನ್ನು ಸಹ ಪಡೆಯುತ್ತದೆ, ಇದು ದೀರ್ಘ ಸವಾರಿಗಳಿಗೆ ಸಾಕಷ್ಟು ಆರಾಮದಾಯಕವಾಗಿರುತ್ತದೆ.

ಕೇವಲ 24 ಗಂಟೆಯೊಳಗೆ ಸೋಲ್ಡ್ ಔಟ್ ಆದ ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್

ಈ ಬೈಕ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಡಬಲ್-ವಿಷ್ಬೋನ್ ಯುನಿಟ್ ಮತ್ತು ಹಿಂಭಾಗದಲ್ಲಿ ಪ್ರೊ-ಲಿಂಕ್ ಸೆಟಪ್ ಅನ್ನು ಹೊಂದಿದೆ. ಇದನ್ನು ಎಲೆಕ್ಟ್ರಿಕ್ ಕಂಟ್ರೋಲ್ ಜೊತೆ ಸಸ್ಪೆಂಕ್ಷನ್-ಡ್ಯಾಂಪಿಂಗ್ ಹೊಂದಾಣಿಕೆಯನ್ನು ಸಹ ಹೊಂದಿದೆ.

ಕೇವಲ 24 ಗಂಟೆಯೊಳಗೆ ಸೋಲ್ಡ್ ಔಟ್ ಆದ ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್

ಇನ್ನು ಈ ಗೋಲ್ಡ್ ವಿಂಗ್ ಟೂರ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಆರು-ಪಿಸ್ಟನ್ ಕಾಲಿಪರ್‌ಗಳನ್ನು ಹೊಂದಿರುವ ಟ್ವಿನ್ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ ಮೂರು ಪಿಸ್ಟನ್ ಕ್ಯಾಲಿಪರ್ ಹೊಂದಿರುವ ಸಿಂಗಲ್ 316 ಎಂಎಂ ಡಿಸ್ಕ್ ಅನ್ನು ಒಳಗೊಂಡಿದೆ.

Most Read Articles

Kannada
English summary
New Honda Gold Wing Tour in India Sells Out. Read In Kannada.
Story first published: Thursday, July 1, 2021, 21:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X