ಹೊಸ ಇವಿ ಸ್ಕೂಟರ್‌ಗಳಲ್ಲಿ ಬ್ಯಾಟರಿ ವಿನಿಮಯ ತಂತ್ರಜ್ಞಾನ ಬಳಸಲಿದೆ ಹೋಂಡಾ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಗ್ರಾಹಕರ ಬೇಡಿಕೆ ವಾಹನ ಉತ್ಪಾದನಾ ಕಂಪನಿಗಳು ಕೂಡಾ ಹಲವಾರು ಹೊಸ ಮಾದರಿಯ ಇವಿ ಮಾದರಿಯೊಂದಿಗೆ ಹೊಸ ಹೊಸ ತಂತ್ರಜ್ಞಾನ ಸೌಲಭ್ಯಗಳನ್ನು ಪರಿಚಯಿಸಲು ಸಜ್ಜಾಗುತ್ತಿವೆ.

ಇವಿ ಸ್ಕೂಟರ್‌ಗಳಿಗೆ ಬ್ಯಾಟರಿ ವಿನಿಮಯ ತಂತ್ರಜ್ಞಾನ ಬಳಸಲಿದೆ ಹೋಂಡಾ

ದೇಶದ ಮುಂಚೂಣಿ ದ್ವಿಚಕ್ರ ವಾಹನ ಉತ್ಪಾದನಾ ಕಂಪನಿಯಾಗಿರುವ ಹೋಂಡಾ ಮೋಟಾರ್‌ಸೈಕಲ್ ಸಹ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಸಾರವಾಗಿ ಹೊಸ ಇವಿ ಉತ್ಪನ್ನಗಳ್ನು ಸಿದ್ದಪಡಿಸುತ್ತಿದ್ದು, ಹೋಂಡಾ ಹೊಸ ಇವಿ ಸ್ಕೂಟರ್ ಮಾದರಿಗಳಲ್ಲಿ ಬ್ಯಾಟರಿ ಸ್ವ್ಯಾಪೆಬಲ್ ತಂತ್ರಜ್ಞಾನವನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲು ನಿರ್ಧರಿಸಿದೆ.

ಇವಿ ಸ್ಕೂಟರ್‌ಗಳಿಗೆ ಬ್ಯಾಟರಿ ವಿನಿಮಯ ತಂತ್ರಜ್ಞಾನ ಬಳಸಲಿದೆ ಹೋಂಡಾ

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಲ್ಲಿ ಬ್ಯಾಟರಿ ಸ್ವ್ಯಾಪೆಬಲ್ ತಂತ್ರಜ್ಞಾನವು ಸ್ಟ್ಯಾಂಡರ್ಡ್ ಆಗಿ ಹೊಂದಿದ್ದಲ್ಲಿ ಗ್ರಾಹಕರಿಗೆ ಚಾರ್ಜಿಂಗ್ ಸೌಲಭ್ಯಕ್ಕಾಗಿ ವಿವಿಧ ಆಯ್ಕೆಗಳಿರಲಿದ್ದು, ತಮ್ಮ ಅನುಕೂಲಕ್ಕೆ ತಕ್ಕಂತೆ ಬ್ಯಾಟರಿ ಸ್ವ್ಯಾಪ್ ಕೇಂದ್ರಗಳ ಮೂಲಕ ಬ್ಯಾಟರಿ ಬದಲಾಯಿಸಬಹುದಾಗಿದೆ.

ಇವಿ ಸ್ಕೂಟರ್‌ಗಳಿಗೆ ಬ್ಯಾಟರಿ ವಿನಿಮಯ ತಂತ್ರಜ್ಞಾನ ಬಳಸಲಿದೆ ಹೋಂಡಾ

ಬ್ಯಾಟರಿ ಸ್ವ್ಯಾಪೆಬಲ್ ತಂತ್ರಜ್ಞಾನವು ಲಭ್ಯವಾದಲ್ಲಿ ಗ್ರಾಹಕರು ಹೆಚ್ಚುವರಿ ಬ್ಯಾಟರಿ ಬ್ಯಾಕ್‌ಪ್ಯಾಕ್ ಹೊಂದಲು ಸಹಕಾರಿಯಾಗಲಿದ್ದು, ಶೀಘ್ರದಲ್ಲೇ ಹೋಂಡಾ ಕಂಪನಿಯು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ತನ್ನ ಹೊಸ ಇವಿ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಇವಿ ಸ್ಕೂಟರ್‌ಗಳಿಗೆ ಬ್ಯಾಟರಿ ವಿನಿಮಯ ತಂತ್ರಜ್ಞಾನ ಬಳಸಲಿದೆ ಹೋಂಡಾ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಇವಿ ಸ್ಕೂಟರ್‌ಗಳಿಗೆ ಬ್ಯಾಟರಿ ವಿನಿಮಯ ತಂತ್ರಜ್ಞಾನ ಬಳಸಲಿದೆ ಹೋಂಡಾ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆ ಅಡಿ ಇದೀಗ ಮತ್ತೆ ಇವಿ ವಾಹನಗಳ ಖರೀದಿ ಮೇಲೆ ಪ್ರೋತ್ಸಾಹ ಧನ ಹೆಚ್ಚಿಸಿದೆ.

ಆದರೆ ಭಾರತದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಯನ್ನು ತಗ್ಗಿಸಲು ತುರ್ತಾಗಿ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಹೆಚ್ಚಿಸಲು ಮುಂದಾಗಿರುವ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಗೆ ಕೆಲವು ತಿದ್ದುಪಡಿ ತರುವ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಸಬ್ಸಡಿ ಪ್ರಮಾಣವನ್ನು ಚಾಲ್ತಿಯಲ್ಲಿರುವ ಪ್ರಮಾಣಕ್ಕಿಂತ ಶೇ.50 ರಷ್ಟು ಹೆಚ್ಚಳ ಮಾಡಿದೆ.

ಇವಿ ಸ್ಕೂಟರ್‌ಗಳಿಗೆ ಬ್ಯಾಟರಿ ವಿನಿಮಯ ತಂತ್ರಜ್ಞಾನ ಬಳಸಲಿದೆ ಹೋಂಡಾ

ಹೊಸ ತಿದ್ದುಪಡಿಯ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಸಬ್ಸಿಡಿ ಪ್ರಮಾಣವನ್ನು ಬ್ಯಾಟರಿ ಪ್ಯಾಕ್ ಆಧರಿಸಿ ಪ್ರತಿ ಕಿಲೋವ್ಯಾಟ್‌ಗೆ ರೂ. 15 ಸಾವಿರ ಏರಿಕೆ ಮಾಡಲಾಗಿದ್ದು, ಹೊಸ ತಿದ್ದುಪಡಿಯ ನಂತರ ಪ್ರತಿ ಇವಿ ಸ್ಕೂಟರ್ ಖರೀದಿ ಮೇಲೆ ಗ್ರಾಹಕರು ರೂ. 5 ಸಾವಿರ ರೂ.30 ಸಾವಿರದಷ್ಟು ಉಳಿತಾಯ ಮಾಡಬಹುದಾಗಿದೆ.

Article Published On: Saturday, June 26, 2021, 20:59 [IST]
English summary
Honda Planning To Introduce Battery Swapping Tech For Electric Scooters. Read in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+