Just In
Don't Miss!
- News
ಕೊರೊನಾ ಬಂದಿದ್ದು ಚೀನಾದಿಂದ ಅಲ್ಲ... ಶಿವನಿಂದ, ನಾನೇ ಶಿವ!
- Sports
ಯುಎಇ ಆಟಗಾರರಿಂದ ಮ್ಯಾಚ್ ಫಿಕ್ಸಿಂಗ್; ಅಮಾನತು ಮಾಡಿದ ಐಸಿಸಿ
- Movies
'ಬೆಲ್ ಬಾಟಂ-2' ಟೈಟಲ್ ಪೋಸ್ಟರ್ ಅನಾವರಣ: ಡಿಟೆಕ್ಟಿವ್ ದಿವಾಕರ್ ಈಸ್ ಬ್ಯಾಕ್
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2020ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಏರಿಕೆ ಕಂಡ ಹೋಂಡಾ
ಹೋಂಡಾ ಮೋಟಾರ್ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು 2020ರ ಡಿಸೆಂಬರ್ ತಿಂಗಳ ತನ್ನ ಮಾರಾಟ ವರದಿಯನ್ನು ಪ್ರಕಟಿಸಿದೆ. ಈ ಮಾರಾಟ ವರದಿಯ ಪ್ರಕಾರ, ಹೋಂಡಾ ಹಿಂದಿನ ತಿಂಗಳಲ್ಲಿ ಒಟ್ಟು ದ್ವಿಚಕ್ರ ವಾಹನಗಳ 2,63,027 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಇನ್ನು 2019ರ ಡಿಸೆಂಬರ್ ತಿಂಗಳಿನಲ್ಲಿ ಹೋಂಡಾ ಕಂಪನಿಯು ಒಟ್ಟು ದ್ವಿಚಕ್ರ ವಾಹನಗಳ 2,55,283 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.3 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಹೊಂಡಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನಗಳ 2,42,046 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಹೋಂಡಾ ಕಂಪನಿಯು 20,981 ಯುನಿಟ್‌ಗಳ ದ್ವಿಚಕ್ರ ವಾಹನಗಳನ್ನು ವಿವಿಧ ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತಿದೆ.

ದೇಶಿಯ ಮಾರುಕಟ್ಟೆಯ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೋಂಡಾ ಕಂಪನಿಯು ಶೇ.5 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಈ ಹೋಂಡಾ ಕಂಪನಿಯು ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಸತತ 5 ತಿಂಗಳಿನಿಂದ ಬೆಳವಣಿಗೆಯನ್ನು ಸಾಧಿಸುತ್ತಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಕರೋನಾ ಸೋಂಕಿನಿಂದ ಕಳೆದ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅಷ್ಟು ಉತ್ತಮವಾಗಿರಲಿಲ್ಲ. ಆದರೆ ಕಳೆದ ಕೆಲವು ತಿಂಗಳುಗಳಿಂದ ಹೋಂಡಾ ದ್ವಿಚಕ್ರ ವಾಹನಗಳು ಭರ್ಜರಿ ಬೇಡಿಕೆಯನ್ನು ಪಡೆದುಕೊಳ್ಳುತ್ತಿದೆ.

ಹೋಂಡಾ ಮೋಟಾರ್ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಪ್ರೈ. ಲಿಮಿಟೆಡ್ ಸೇಲ್ಸ್ ಮತ್ತು ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥರಾದ ಯಾದ್ವಿಂದರ್ ಸಿಂಗ್ ಗುಲೇರಿಯಾ ಅವರು ಮಾತನಾಡಿ, ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನಳ ಮಾರಾಟದಲ್ಲಿ ಸಕಾರಾತ್ಮಕ ಬಳೆವಣಿಗೆಯನು ಸಾಧಿಸಿದ್ದೇವೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಭಾರತದಲ್ಲಿ ಹೋಂಡಾದ ಮಹತ್ವದ 20ನೇ ವಾರ್ಷಿಕೋತ್ಸವದ ವರ್ಷಕ್ಕೆ ಸಜ್ಜಾಗಿದ್ದೇವೆ. ಹೋಂಡಾ ಪೈಪ್‌ಲೈನ್‌ನಲ್ಲಿ ಅನೇಕ ಹೊಚ್ಚ ಹೊಸ ಮತ್ತು ಉತ್ತೇಜಕ ಕೊಡುಗೆಗಳೊಂದಿಗೆ ಹೊಸ ಜಾಯ್ ಆಫ್ ರೈಡಿಂಗ್ ವಿಭಾಗಗಳಲ್ಲಿ ಸವಾರರನ್ನು ಆನಂದಿಸುತ್ತದೆ ಎಂದು ಹೇಳಿದರು.

ಇತ್ತೀಚೆಗೆ ಹೋಂಡಾ ಮೋಟಾರ್ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ಈಗಾಗಲೇ ತನ್ನ ಎಸ್‌ಪಿ 125, ಹಾರ್ನೆಟ್ 2.0, ಆಕ್ಟಿವಾ 6ಜಿ, ಸಿಡಿ 110 ಡ್ರೀಮ್, ಯೂನಿಕಾರ್ನ್ ಮತ್ತು ಗ್ರಾಜಿಯಾ 125 ಮಾದರಿಗಳ ಮೇಲೆ ಕ್ಯಾಶ್‌ಬ್ಯಾಕ್ ಆಫರ್ ಅನ್ನು ಘೋಷಿಸಿತ್ತು.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇನ್ನು ಇತ್ತೀಚೆಗೆ ಹೋಂಡಾ ಮೋಟಾರ್ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಪ್ರೈ. ಲಿಮಿಟೆಡ್ ಕಂಪನಿಯ ಸಿಬಿ ಶೈನ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಹೋಂಡಾ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಕಮ್ಯೂಟರ್ ಬೈಕುಗಳಲ್ಲಿ ಒಂದಾಗಿದೆ.

ಹೋಂಡಾ ಸಿಬಿ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದಗಿನಿಂದ ಇಲ್ಲಿಯವರೆಗೂ 90 ಲಕ್ಷ ಯೂನಿಟ್‌ಗಳು ಮಾರಾಟವಾಗಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ಈ ಸಿಬಿ ಶೈನ್ ಬೈಕನ್ನು ಭಾರತದಲ್ಲಿ 2006ರಲ್ಲಿ ಮೊಟ್ಟ ಮೊದಲ ಬಾರಿಗೆ ಹೋಂಡಾ ಕಂಪನಿಯು ಬಿಡುಗಡೆಗೊಳಿತು. ಹೋಂಡಾ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ವಿಭಾಗದಲ್ಲಿ ಶೇಕಡಾ 39 ರಷ್ಟು ಹೆಚ್ಚಿನ ಮಾರುಕಟ್ಟೆ ಪಾಲನ್ನು ಹೊಂದಿದೆ.

ಮಾರಾಟದಲ್ಲಿ ಹೋಂಡಾ ಕಂಪನಿಗೆ ಆಕ್ಟಿವಾ ಸ್ಕೂಟರ್ ದೊಡ್ಡ ಕೊಡುಗೆಯನ್ನು ನೀಡುತ್ತಿದೆ. ಇನ್ನು ಹೊಂಡಾ ಶೈನ್ ಕೂಡ ಮಾರಾಟದಲ್ಲಿ ಕಂಪನಿಗೆ ದೊಡ್ಡ ಕೊಡುಗೆಯನ್ನು ನೀಡುತ್ತಿದೆ. ಒಟ್ಟಾರೆಯಾಗಿ ಹೋಂಡಾ ಬೈಕುಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸುತ್ತಿದೆ.