ದ್ವಿಚಕ್ರ ವಾಹನಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಇಂಡಿಯಾ ಕಂಪನಿಯು ತನ್ನ ದ್ವಿಚಕ್ರ ವಾಹನಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು ಹೆಚ್ಚಿಸಿದ್ದು, ಹೋಂಡಾ ದ್ವಿಚಕ್ರ ವಾಹನ ಮಾಲೀಕರು ಲಾಕ್‌ಡೌನ್ ಅವಧಿಯಲ್ಲಿ ಮುಗಿದುಹೋಗಿರುವ ವಾರಂಟಿಗಳನ್ನು ಮುಂದಿನ ಎರಡು ತಿಂಗಳ ಅವಧಿಯಲ್ಲಿ ಪಡೆದುಕೊಳ್ಳಬಹುದಾಗಿದೆ.

ದ್ವಿಚಕ್ರ ವಾಹನಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಕೋವಿಡ್ ನಿಯಂತ್ರಣಕ್ಕಾಗಿ ವಿಧಿಸಲಾಗಿರುವ ಲಾಕ್‌ಡೌನ್ ಅವಧಿಯಲ್ಲಿ ಕೊನೆಗೊಳ್ಳಲಿರುವ ವಾಹನಗಳ ವಾರಂಟಿ ಅವಧಿಯನ್ನು ಬಹುತೇಕ ವಾಹನ ತಯಾಕರ ಕಂಪನಿಗಳು ವಿಸ್ತರಣೆ ಮಾಡಿದ್ದು, ಹೊಸ ವಾಹನಗಳ ನಿಗದಿತ ಅವಧಿಯ ಸೇವೆಗಳನ್ನು ಪಡೆಯಲು ಲಾಕ್‌ಡೌನ್ ವಿಧಿಸಿರುವ ಹಿನ್ನಲೆಯಲ್ಲಿ ವಾರಂಟಿ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ವಾಹನ ಮಾರಾಟಕ್ಕೆ ಕೆಲವು ಕಡೆಗಳಲ್ಲಿ ಷರತ್ತು ಬದ್ದ ಅವಕಾಶಗಳಿದ್ದರೂ ಗ್ರಾಹಕರ ಸೇವೆಗಳನ್ನು ಪೂರೈಸುವುದು ಆಟೋ ಉತ್ಪಾದನಾ ಕಂಪನಿಗಳಿಗೆ ಸವಾಲಿನ ಕೆಲಸವಾಗಿದೆ.

ದ್ವಿಚಕ್ರ ವಾಹನಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಆದರೆ ಲಾಕ್‌ಡೌನ್ ಅವಧಿಯಲ್ಲಿ ಮುಕ್ತಾಯಗೊಳ್ಳಲಿರುವ ನಿಗದಿತ ಅವಧಿಯ ಸೇವೆಗಳನ್ನು ಪಡೆದುಕೊಳ್ಳದ ವಾಹನಗಳ ವಾರಂಟಿ ಆಫರ್ ಮುಗಿದುಹೋಗಲಿದ್ದು, ವಾರಂಟಿ ಅವಧಿ ಮುಕ್ತಾಯದಿಂದ ಉಚಿತ ಸೇವೆಗಳನ್ನು ಕಳೆದುಕೊಳ್ಳಲಿರುವ ಗ್ರಾಹಕರಿಗೆ ಹೋಂಡಾ ಸೇರಿದಂತೆ ಬಹುತೇಕ ವಾಹನ ತಯಾರಕ ಕಂಪನಿಗಳು ಸಿಹಿಸುದ್ದಿ ಪ್ರಕಟಿಸಿವೆ.

ದ್ವಿಚಕ್ರ ವಾಹನಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಲಾಕ್‌ಡೌನ್ ಸಂದರ್ಭದಲ್ಲಿ ವಾಹನ ವಾರಂಟಿ ಮುಕ್ತಾಯವಾಗುವುದರಿಂದ ಗ್ರಾಹಕರ ಸೇವೆಗಳು ಕಡಿತವಾಗುವುದನ್ನು ತಪ್ಪಿಸಲು ಗ್ರಾಹಕರಿಗೆ ಹೆಚ್ಚುವರಿಯಾಗಿ ಎರಡು ತಿಂಗಳ ಕಾಲ ವಾರಂಟಿ ಅವಧಿಯನ್ನು ಘೋಷಿಸಲಾಗಿದೆ.

ದ್ವಿಚಕ್ರ ವಾಹನಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯಗೊಳ್ಳಬೇಕಿರುವ ಹೊಸ ಕಾರುಗಳ ವಾರಂಟಿ ಅವಧಿಯನ್ನು ಜುಲೈ 31ರ ತನಕ ಮುಂದೂಡಲಾಗಿದ್ದು, ಲಾಕ್‌ಡೌನ್ ಸಂದರ್ಭದಲ್ಲಿ ವಾರಂಟಿ ಮುಕ್ತಾಯಗೊಳ್ಳುವುದನ್ನು ತಪ್ಪಿಸಲು ವಾರಂಟಿ ವಿಸ್ತರಿಸಲಾಗಿದೆ. ವಾರಂಟಿ ಅವಧಿ ವಿಸ್ತರಣೆಯಾಗಿರುವುದರಿಂದ ವಾರಂಟಿ ಪ್ಯಾಕೇಜ್‌ನಲ್ಲಿರುವ ಸೇವೆಗಳನ್ನು ಪರಿಸ್ಥಿತಿ ತುಸು ಸುಧಾರಣೆಗೊಂಡ ನಂತರ ಪಡೆದುಕೊಳ್ಳಬಹುದಾಗಿದ್ದು, ವಾರಂಟಿ ಅವಧಿಯನ್ನು ವಿಸ್ತರಿಸಿರುವುದು ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿದೆ.

ದ್ವಿಚಕ್ರ ವಾಹನಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಇನ್ನು ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಹರಸಾಹಸ ಪಡುತ್ತಿದ್ದು, ಆರ್ಥಿಕ ಸಂಕಷ್ಟದ ನಡುವೆಯೂ ಸರ್ಕಾರದ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿವೆ.

MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ದ್ವಿಚಕ್ರ ವಾಹನಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳದಿಂದಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಸರ್ಕಾರಗಳ ಪ್ರಯತ್ನಕ್ಕೆ ವಿವಿಧ ಆಟೋ ಉತ್ಪಾದನಾ ಕಂಪನಿಗಳು ವಿವಿಧ ಮಾದರಿಯ ಸಹಕಾರ ನೀಡುತ್ತಿವೆ.

ದ್ವಿಚಕ್ರ ವಾಹನಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಆರ್ಥಿಕ ಸಂಕಷ್ಟದ ನಡುವೆಯೂ ಆಟೋ ಕಂಪನಿಯು ಸಾಧ್ಯವಿರುವ ಕಡೆಗಳಲ್ಲಿ ಸರ್ಕಾರದ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡುತ್ತಿದ್ದು, ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಯಾಗಿರುವ ಹೋಂಡಾ ಗ್ರೂಪ್ ಕೂಡಾ ತನ್ನ ಹೋಂಡಾ ಫೌಂಡೇಶನ್ ಮೂಲಕ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಹಣಾಕಾಸು ನೆರವು ನೀಡಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ದ್ವಿಚಕ್ರ ವಾಹನಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

2020ರ ಏಪ್ರಿಲ್ ಅವಧಿಯಲ್ಲಿನ ಕೋವಿಡ್ ಹೆಚ್ಚಳ ಸಂದರ್ಭದಲ್ಲೂ ಬರೋಬ್ಬರಿ ರೂ.10 ಕೋಟಿ ದೇಣಿಗೆ ನೀಡಿದ್ದ ಹೋಂಡಾ ಗ್ರೂಪ್ ಕಂಪನಿಯು ಇದೀಗ 2ನೇ ಅಲೆಯ ಕೋವಿಡ್ ನಿಯಂತ್ರಣಕ್ಕಾಗಿ ರೂ. 6.50 ಕೋಟಿ ದೇಣಿಗೆ ಘೋಷಣೆ ಮಾಡಿದ್ದು, ದೇಣಿಗೆ ಹಣವನ್ನು ಪಿಎಂ ಕೇರ್ಸ್ ಫಂಡ್(ಪ್ರಧಾನ ಮಂತ್ರಿ ಪರಿಹಾರ ನಿಧಿ)ಗೆ ನೀಡಲಾಗಿದೆ.

Most Read Articles

Kannada
English summary
Honda Two Wheelers Extends Warranty & Free Service Period. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X