ಇವಿ ವಾಹನಗಳ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ ಹಾಪ್ ಮೊಬಿಲಿಟಿ

ದೇಶಾದ್ಯಂತ ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಇವಿ ವಾಹನಗಳ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ ಹಾಪ್ ಮೊಬಿಲಿಟಿ

ದೇಶಾದ್ಯಂತ ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಕಳೆದ ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನ ಪೂರಕವಾದ ಯೋಜನೆಗಳಿಗೆ ಚಾಲನೆ ನೀಡುತ್ತಿವೆ.

ಇವಿ ವಾಹನಗಳ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ ಹಾಪ್ ಮೊಬಿಲಿಟಿ

ಇವಿ ವಾಹನಗಳ ಹೆಚ್ಚಳಕ್ಕೆ ಸಾಕಷ್ಟು ಉತ್ತೇಜನ ನೀಡಬಲ್ಲ ಬ್ಯಾಟರಿ ವಿನಿಯಮ ಕೇಂದ್ರಗಳು ಎಲೆಕ್ಟ್ರಿಕ್ ವಾಹನಗಳಿಗೆ ಮಾರಾಟವನ್ನು ತೀವ್ರಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಲಿದ್ದು, ತ್ವರಿತವಾಗಿ ಬ್ಯಾಟರಿ ಸೌಲಭ್ಯಗಳನ್ನು ಸರ್ಕಾರಿ ಸಂಸ್ಥೆಗಳು ಮಾತ್ರ ಖಾಸಗಿ ಕಂಪನಿಗಳು ಸಹ ಹೊಸ ಉದ್ಯಮದಲ್ಲಿ ಹೂಡಿಕೆ ಮಾಡುತ್ತಿವೆ.

ಇವಿ ವಾಹನಗಳ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ ಹಾಪ್ ಮೊಬಿಲಿಟಿ

ಬ್ಯಾಟರಿ ವಿನಿಯಮ ಕೇಂದ್ರಗಳಲ್ಲಿ ಬ್ಯಾಟರಿ ರೇಂಜ್ ಆಧಾರದ ಮೇಲೆ ಇಂತಿಷ್ಟು ಪ್ರಮಾಣದ ದರ ಪಾವತಿಸಿಬೇಕಿದ್ದು, ಸಾಮಾನ್ಯ ಚಾರ್ಜರ್‌ ಮೂಲಕ ಚಾರ್ಜ್ ಮಾಡಲು ಆಗಬಹುದಾದ ಸಮಯ ವ್ಯರ್ಥವನ್ನು ತಡೆಯಲು ಬ್ಯಾಟರಿ ವಿನಿಯಮ ಕೇಂದ್ರ ಸಹಕಾರಿಯಾಗಿದೆ.

ಇವಿ ವಾಹನಗಳ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ ಹಾಪ್ ಮೊಬಿಲಿಟಿ

ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಚಾರ್ಜ್ ಖಾಲಿಯಾದ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಹೊಸ ಸೌಲಭ್ಯವು ಚಾರ್ಜಿಂಗ್ ಸಮಯವನ್ನು ಉಳಿಸುವ ಮೂಲಕ ಬ್ಯಾಟರಿ ಖಾಲಿಯಾದ ತಕ್ಷಣವೇ ಮತ್ತೊಂದು ಬ್ಯಾಟರಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.

ಇವಿ ವಾಹನಗಳ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ ಹಾಪ್ ಮೊಬಿಲಿಟಿ

ಹೊಸ ಸೌಲಭ್ಯವನ್ನು ಇತ್ತೀಚೆಗೆ ಜೈಪುರ್ ಮೂಲದ ಹಾಪ್ ಮೊಬಿಲಿಟಿ ಕಂಪನಿಯು ಕೂಡಾ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡುತ್ತಿದ್ದು, ಪ್ರಾಯೋಗಿಕವಾಗಿ ತೆರೆಯಲಾದ ಬ್ಯಾಟರಿ ವಿನಿಯಮ ಕೇಂದ್ರವನ್ನು ಶೀಘ್ರದಲ್ಲೇ ವಿವಿಧ ನಗರಗಳಿಗೂ ವಿಸ್ತರಿಸಲಿದೆ.

ಇವಿ ವಾಹನಗಳ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ ಹಾಪ್ ಮೊಬಿಲಿಟಿ

ಇನ್ನು ಹಾಪ್ ಎಲೆಕ್ಟ್ರಿಕ್ ಮೊಬಿಲಿಟಿ ಕಂಪನಿಯು ಗ್ರಾಹಕರ ಬೇಡಿಕೆ ಅನುಸಾರವಾರ ವಿವಿಧ ಬ್ಯಾಟರಿ ರೇಂಜ್ ಹೊಂದಿರುವ ಲಿಯೋ ಮತ್ತು ಲೈಫ್ ಎನ್ನುವ ಎರಡು ಇವಿ ಸ್ಕೂಟರ್ ಪರಿಚಯಿಸಿದ್ದು, ಹೊಸ ಸ್ಕೂಟರ್ ಬೆಲೆಯು ಆರಂಭಿಕವಾಗಿ ರೂ. 65,500 ರಿಂದ ಪ್ರಾರಂಭಗೊಳ್ಳುತ್ತದೆ.

ಇವಿ ವಾಹನಗಳ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ ಹಾಪ್ ಮೊಬಿಲಿಟಿ

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹಾಪ್ ಎಲೆಕ್ಟ್ರಿಕ್ ಮೊಬಿಲಿಟಿ ಕಂಪನಿಯು ಬೇಸಿಕ್, ಸ್ಟ್ಯಾಂಡರ್ಡ್ ಮತ್ತು ಎಕ್ಸ್ಟೆಂಡ್ ವೆರಿಯೆಂಟ್‌ಗಳಲ್ಲಿ ಮಾರಾಟ ಮಾಡುತ್ತಿದ್ದು, ಎಕ್ಸ್ಟೆಂಡ್ ವೆರಿಯೆಂಟ್‌ ಮಾದರಿಗಳೇ ಹಾಪ್ ಇವಿ ಸ್ಕೂಟರ್‌ಗಳ ಟಾಪ್ ಎಂಡ್ ಮಾದರಿಯಾಗಿ ಮಾರಾಟಗೊಳ್ಳುತ್ತಿವೆ.

ಇವಿ ವಾಹನಗಳ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ ಹಾಪ್ ಮೊಬಿಲಿಟಿ

ಲಿಯೋ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು 2.7kw ಎಲೆಕ್ಟ್ರಿಕ್ ಮೋಟಾರ್‌ನೊಂದಿಗೆ ಪ್ರತಿ ಗಂಟೆಗೆ 60 ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದು, ಲೈಫ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು 2.0kw ಎಲೆಕ್ಟ್ರಿಕ್ ಮೋಟಾರ್‌ನೊಂದಿಗೆ ಪ್ರತಿ ಗಂಟೆಗೆ 50 ಕಿ.ಮೀ ಟಾಪ್ ಸ್ಪೀಡ್ ಪಡೆದುಕೊಂಡಿದೆ.

ಇವಿ ವಾಹನಗಳ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ ಹಾಪ್ ಮೊಬಿಲಿಟಿ

ಈ ಮೂಲಕ ಎರಡು ಸ್ಕೂಟರ್‌ಗಳಲ್ಲಿ ಎಕ್ಸ್ಟೆಂಡ್ ಮಾದರಿಗಳು ಡ್ಯುಯಲ್ ಲೀ-ಅಯಾನ್ ಬ್ಯಾಟರಿ ಬ್ಯಾಕ್ ಹೊಂದಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 125 ಕಿ.ಮೀ ಮೈಲೇಜ್ ಹಿಂದಿರುಗಿಸಲಿವೆ.

ಇವಿ ವಾಹನಗಳ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ ಹಾಪ್ ಮೊಬಿಲಿಟಿ

ಹೊಸ ಸ್ಕೂಟರ್ ಪ್ರತಿ ಮಾದರಿಯು 72ವಿ ಆರ್ಕಿಟೆಕ್ಚರ್ ಬಾಡಿ ತಂತ್ರಜ್ಞಾನ ಹೊಂದಿದ್ದು, ಗರಿಷ್ಠು 180 ಕೆ.ಜಿ ಲೋಡಿಂಗ್ ಸಾಮಾರ್ಥ್ಯದೊಂದಿಗೆ 19.5-ಲೀಟರ್‌ನಷ್ಟು ಅಂಡರ್ ಸೀಟ್ ಸ್ಟೋರೇಜ್ ಸ್ಪೇಸ್ ಪಡೆದುಕೊಂಡಿದೆ.

Article Published On: Friday, July 9, 2021, 16:55 [IST]
English summary
Hop Electric Mobility Introduced Battery Swapping Network. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+