ಕೋವಿಡ್ ಪರಿಣಾಮ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮುಂದೂಡಿದ ಹಸ್ಕ್‌ವರ್ನಾ

ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ಹೊಸ ಯೋಜನೆಗಳ ಪರಿಣಾಮ ಇವಿ ವಾಹನ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮುಂದೂಡಿದ ಹಸ್ಕ್‌ವರ್ನಾ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯವನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರೋತ್ಸಾಹ ಯೋಜನೆಗಳಿಂದ ಹಲವಾರು ಸ್ಟಾರ್ಟ್ ಕಂಪನಿಗಳು ಇವಿ ವಾಹನ ಉದ್ಯಮ ಪ್ರವೇಶಿಸುತ್ತಿದ್ದು, ಕೆಟಿಎಂ ಸಹಭಾಗಿತ್ವ ಸಂಸ್ಥೆಯಾದ ಹಸ್ಕವರ್ನಾ ಕೂಡಾ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ಸಿದ್ದವಾಗಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮುಂದೂಡಿದ ಹಸ್ಕ್‌ವರ್ನಾ

ಪ್ರೀಮಿಯಂ ಬೈಕ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಸ್ವೀಡಿಷ್ ಆಟೋ ಕಂಪನಿಯಾಗಿರುವ ಹಸ್ಕವರ್ನಾ ಸದ್ಯ ಕೆಟಿಎಂ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಹೊಸ ಬ್ರಾಂಡ್ ಬೈಕ್ ಇತ್ತೀಚೆಗೆ ಭಾರತದಲ್ಲೂ ಬಿಡುಗಡೆಗೊಂಡಿವೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮುಂದೂಡಿದ ಹಸ್ಕ್‌ವರ್ನಾ

ಸ್ವೀಡಿಷ್ ಆಟೋ ಕಂಪನಿಯು ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಸಹ ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದ್ದು, ಇ-01 ಕಾನ್ಸೆಪ್ಟ್ ಮಾದರಿಯನ್ನು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲು ಸಜ್ಜಾಗಿತ್ತು.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮುಂದೂಡಿದ ಹಸ್ಕ್‌ವರ್ನಾ

ಹೊಸ ಸ್ಕೂಟರ್ ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಬೇಕಿದ್ದ ಕಂಪನಿಯ ಹೊಸ ಯೋಜನೆಯು ಕೋವಿಡ್ ಕಾರಣಕ್ಕೆ ಮತ್ತೆ ಮುಂದೂಡಿಕೆ ಮಾಡಲು ನಿರ್ಧರಿಸಿದ್ದು, ಪರಿಸ್ಥತಿ ತುಸು ಸಹಜಸ್ಥಿತಿಯತ್ತ ಬಂದ ನಂತರವೇ ಬಿಡುಗಡೆ ಯೋಜನೆ ಪ್ರಕ್ರಿಯೆಗಳನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ಹಸ್ಕ್​ವರ್ನಾ ಕಂಪನಿಯು ಹೊಸ ಇವಿ ಸ್ಕೂಟರ್ ಅನ್ನು ಬಜಾಜ್‌ ಕಂಪನಿಯ ಚಾಕನ್ ಉತ್ಪಾದನಾ ಘಟಕದಲ್ಲಿ ಉತ್ಪಾದಿಸಲಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮುಂದೂಡಿದ ಹಸ್ಕ್‌ವರ್ನಾ

ಹಸ್ಕ್​ವರ್ನಾ ಕಂಪನಿಯು ಎಲೆಕ್ಟ್ರಿಕ್ ಬೈಕ್‌ಗಳನ್ನು ಸಹ ಅಭಿವೃದ್ಧಿ ಪಡಿಸುತ್ತಿದೆ ಎಂದು ಹೇಳಲಾಗಿದ್ದು, ಕಂಪನಿಯು ಬೈಕ್ ಬಿಡುಗಡೆಯ ಬಗ್ಗೆ ಸ್ಪಷ್ಟ ಮಾಹಿತಿಯನ್ನು ನೀಡಿಲ್ಲ. ಭಾರತದಲ್ಲಿ ಹಸ್ಕ್​ವರ್ನಾ ಬೈಕುಗಳನ್ನು ಕೆಟಿಎಂ ಸಹಭಾಗಿತ್ವ ಕಂಪನಿಯಾಗಿರುವ ಬಜಾಜ್‌ನ ಶೋರೂಂಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮುಂದೂಡಿದ ಹಸ್ಕ್‌ವರ್ನಾ

ಹಸ್ಕ್​ವರ್ನಾ ಕಂಪನಿಯ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ ಮಾದರಿಯ ಸಾಕಷ್ಟು ಆಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಳ್ಳಲಿದ್ದು, ಎಲೆಕ್ಟ್ರಿಕ್ ಸ್ಕೂಟರಿನ ವಿನ್ಯಾಸವು ಕಾನ್ಸೆಪ್ಟ್ ಸ್ಕೂಟರ್‌ ಅನ್ನು ಹೋಲುತ್ತದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮುಂದೂಡಿದ ಹಸ್ಕ್‌ವರ್ನಾ

ಹೊಸ ಯೋಜನೆಗೆ ಪೂರಕವಾಗಿ ದೇಶದ 45 ನಗರಗಳಲ್ಲಿರುವ 100 ಕೆಟಿಎಂ ಶೋರೂಂಗಳಲ್ಲಿ ಹಸ್ಕ್​ವರ್ನಾ ಬೈಕುಗಳನ್ನು ಮಾರಾಟ ಮಾಡಲಾಗುತ್ತದೆ. ಇವುಗಳನ್ನು ಪುಣೆಯಲ್ಲಿರುವ ಬಜಾಜ್‌ ಕಂಪನಿಯ ಚಾಕನ್ ಉತ್ಪಾದನಾ ಘಟಕದಲ್ಲಿ ಉತ್ಪಾದಿಸಲಾಗುತ್ತಿದ್ದು, ಕೆಟಿಎಂ ಶೋರೂಂಗಳಲ್ಲೇ ಹಸ್ಕ್​ವರ್ನಾ ಎಲೆಕ್ಟ್ರಿಕ್ ಸ್ಕೂಟರ್‌ ಮಾರಾಟಗೊಳ್ಳಲಿದೆ.

Most Read Articles

Kannada
English summary
Husqvarna E-01 Electric Scooter Launch Delayed. Read in Kannada.
Story first published: Friday, May 7, 2021, 1:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X