Just In
- 27 min ago
ಅನಾವರಣವಾಯ್ತು 2021ರ ಹ್ಯುಂಡೈ ಸೊನಾಟಾ ಎನ್ ಲೈನ್ ಪರ್ಫಾಮೆನ್ಸ್ ಕಾರು
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 14 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
Don't Miss!
- News
ನೊಂದ ಮಹಿಳೆಯಿಂದ ಪೊಲೀಸ್ ಸ್ಟೇಷನ್ ನಿಂದಲೇ ಫೇಸ್ ಬುಕ್ ಲೈವ್ !
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಡಿಮೆ ಬೆಲೆಯ ಎಲೆಕ್ಟ್ರಿಕ್ ಬೈಕ್ ಅಭಿವೃದ್ಧಿಪಡಿಸಿದ ಐಐಟಿ ವಿದ್ಯಾರ್ಥಿಗಳು
ಖ್ಯಾತ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯಾದ ಪೈ ಬೀಮ್ ಭಾರತದಲ್ಲಿ ಕೈಗೆಟುಕುವ ಬೆಲೆಯ ಇ-ಬೈಕ್ ಅನ್ನು ಬಿಡುಗಡೆಗೊಳಿಸಿದೆ. ಪಿಮೋ ಎಂಬ ಹೆಸರಿನಲ್ಲಿ ಮಾರಾಟವಾಗುವ ಈ ಎಲೆಕ್ಟ್ರಿಕ್ ಬೈಕಿನ ಬೆಲೆ ರೂ.30 ಸಾವಿರಗಳಾಗಿದೆ.

ಈ ಎಲೆಕ್ಟ್ರಿಕ್ ಬೈಕ್ ಆರಂಭಿಕ ದಿನಗಳಲ್ಲಿ ಅಭಿವೃದ್ಧಿಪಡಿಸಲಾದ ಬೈಸಿಕಲ್‌ಗಳನ್ನು ಆಧರಿಸಿದೆ. ಈ ಕಾರಣಕ್ಕೆ ಈ ಎಲೆಕ್ಟ್ರಿಕ್ ಬೈಕ್ ಆಧುನಿಕ ನೋಟವನ್ನು ಹೊಂದಿರುವ ಆಧುನಿಕ ಎಲೆಕ್ಟ್ರಿಕ್ ಬೈಕಿನಂತೆ ಕಾಣುತ್ತದೆ.

ಈ ಎಲೆಕ್ಟ್ರಿಕ್ ಬೈಕ್ ಅನ್ನು ಐಐಟಿ ಮದ್ರಾಸ್ ಒಡೆತನದ ಪೈ ಬೀಮ್ ಕಂಪನಿಯು ಅಭಿವೃದ್ಧಿಪಡಿಸಿದೆ. ಈ ಕಂಪನಿಯು ತನ್ನ ವಿದ್ಯಾರ್ಥಿಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಪಿಮೋ, ವಿದ್ಯಾರ್ಥಿಗಳ ಪ್ರಯತ್ನದಿಂದ ಉತ್ಪಾದಿಸಲಾದ ಮೊದಲ ಇ-ಬೈಕ್ ಆಗಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಈ ಎಲೆಕ್ಟ್ರಿಕ್ ಬೈಕ್ ಪೂರ್ತಿಯಾಗಿ ಚಾರ್ಜ್ ಆದ ನಂತರ ಸುಮಾರು 50 ಕಿ.ಮೀಗಳವರೆಗೆ ಚಲಿಸುತ್ತದೆ. ಈ ವಾಹನದಲ್ಲಿರುವ ಸೀಟ್ ಮೇಲೆ ಕುಳಿತು ಒಬ್ಬರು ಹಾಗೂ ಕ್ಯಾರಿಯರ್ ಮೇಲೆ ಕುಳಿತು ಇನ್ನೊಬ್ಬರು ಪ್ರಯಾಣಿಸಬಹುದು.

ಲಗೇಜ್ ಸಾಗಿಸುವ ಉದ್ದೇಶಕ್ಕಾಗಿ ಈ ವಾಹನದಲ್ಲಿ ಕ್ಯಾರಿಯರ್ ನೀಡಲಾಗಿದೆ. ಕಡಿಮೆ ವೇಗವನ್ನು ಹೊಂದಿರುವ ಕಾರಣಕ್ಕೆ ಈ ಎಲೆಕ್ಟ್ರಿಕ್ ವಾಹನವನ್ನು ಚಾಲನೆ ಮಾಡಲು ಡ್ರೈವಿಂಗ್ ಲೈಸೆನ್ಸ್ ಅಗತ್ಯವಿಲ್ಲ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಈ ವಾಹನದಲ್ಲಿ ಎದುರಾಗುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಸ್ವತಃ ನಾವೇ ಸರಿಪಡಿಸಿಕೊಳ್ಳಬಹುದಾದ ಕಾರಣಕ್ಕೆ ಈ ವಾಹನದ ಮೇಲೆ ಹೆಚ್ಚು ಖರ್ಚು ಮಾಡುವುದು ತಪ್ಪಲಿದೆ.

ಗಗನಕ್ಕೇರುತ್ತಿರುವ ಇಂಧನ ಬೆಲೆಗಳಿಂದ ಪಾರಾಗಲು ಜನರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ಇಂಧನಕ್ಕಾಗಿ ಹೆಚ್ಚು ಖರ್ಚು ಮಾಡುವುದು ತಪ್ಪುವುದರ ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಕಂಪನಿಯು 2021-2022ರ ವೇಳೆಗೆ ಸುಮಾರು 10,000 ಯುನಿಟ್ ವಾಹನಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದೆ. ಪ್ರತಿ ಗಂಟೆಗೆ ಗರಿಷ್ಠ 25 ಕಿ.ಮೀ ವೇಗದ ಮಿತಿಯನ್ನು ಹೊಂದಿರುವ ಈ ವಾಹನದಲ್ಲಿ ಸ್ವ್ಯಾಪ್ ಮಾಡಬಹುದಾದ ಸೂಪರ್ ಫೀಚರ್'ಗಳನ್ನು ನೀಡಲಾಗಿದೆ.

ಪೈ ಬೀಮ್ ವಾಹನವನ್ನು ಎಲ್ಲಾ ವಯಸ್ಸಿನವರು ಬಳಸಲು ಸಾಧ್ಯವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಈ ಎಲೆಕ್ಟ್ರಿಕ್ ಬೈಕಿನಲ್ಲಿ ಸ್ವಿಂಗ್ ಆರ್ಮ್ಮೆಕ್ಯಾನಿಸಂ, ಡ್ಯುಯಲ್ ಶಾಕ್ ಅಬ್ಸಾರ್ಬರ್ ಹಾಗೂ ನಯವಾಗಿರುವ ಸೀಟ್ ಇನ್ ಪುಟ್ ನೀಡಲಾಗಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಪೈ ಬೀಮ್ ಎಲೆಕ್ಟ್ರಿಕ್ ವಾಹನವನ್ನು ಇ-ಟ್ರಕ್, ಇ-ಕಾರ್ಡ್ ಹಾಗೂ ಇ-ಆಟೋ ಎಂಬ ಮೂರು ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತದೆ. ಈ ಎಲ್ಲಾ ಮಾದರಿಗಳನ್ನು ಕಡಿಮೆ ಬೆಲೆಯ ಎಲೆಕ್ಟ್ರಿಕ್ ವಾಹನಗಳಾಗಿ ಬಿಡುಗಡೆಗೊಳಿಸಲಾಗಿದೆ.