2022ಕ್ಕೆ 500 ಮಾರಾಟ ಮಳಿಗೆಗಳನ್ನು ಹೊಂದಿರಲಿದೆ ಜಾವಾ ಮೋಟಾರ್‌ಸೈಕಲ್

ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೊಸ ಉತ್ಪನ್ನಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಜಾವಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಹೊಸ ಯೋಜನೆಯ ಮಾಹಿತಿ ಹಂಚಿಕೊಂಡಿದ್ದು, ಕಂಪನಿಯು ಮಾರಾಟ ಮಳಿಗೆಗಳ ವಿಸ್ತರಣೆಗೆ ಸಿದ್ದತೆ ನಡೆಸಿದೆ.

2022ಕ್ಕೆ 500 ಮಾರಾಟ ಮಳಿಗೆಗಳನ್ನು ಹೊಂದಿರಲಿದೆ ಜಾವಾ ಮೋಟಾರ್‌ಸೈಕಲ್

2018ರಲ್ಲಿ ಜಾವಾ ಕ್ಲಾಸಿಕ್ ಬೈಕ್ ಮಾದರಿಗಳನ್ನು ಹೊಸ ರೂಪದಲ್ಲಿ ಮಾರುಕಟ್ಟೆಗೆ ಪರಿಚಯಿಸಿದ ಕ್ಲಾಸಿಕ್ ಲೆಜೆಂಡ್ ಕಂಪನಿಯು ಇದುವರೆಗೆ ಸುಮಾರು 150 ಪ್ರಮುಖ ನಗರಗಳಲ್ಲಿ 175 ಮಾರಾಟ ಮಳಿಗೆಗಳನ್ನು ಹೊಂದಿದ್ದು, ಹೊಸ ಬಂಡವಾಳದೊಂದಿಗೆ ಕಂಪನಿಯು ಮುಂದಿನ ಒಂದು ವರ್ಷದೊಳಗಾಗಿ ದೇಶದ ಪ್ರಮುಖ ನಗರಗಳಲ್ಲಿ ಮಾರಾಟ ಮಳಿಗೆಗಳ ಸಂಖ್ಯೆಯನ್ನು 500ಕ್ಕೆ ಹೆಚ್ಚಿಸಲು ನಿರ್ಧರಿಸಿದೆ.

2022ಕ್ಕೆ 500 ಮಾರಾಟ ಮಳಿಗೆಗಳನ್ನು ಹೊಂದಿರಲಿದೆ ಜಾವಾ ಮೋಟಾರ್‌ಸೈಕಲ್

ಸದ್ಯ ಕೋವಿಡ್ ಹೆಚ್ಚಿರುವ ಪರಿಣಾಮ ಹೊಸ ಮಾರಾಟ ಮಳಿಗೆಗಳನ್ನು ತೆರೆಯುವ ಯೋಜನೆಗೆ ತಾತ್ಕಾಲಿಕವಾಗಿ ಬ್ರೇಕ್ ನೀಡಿರುವ ಕಂಪನಿಯು ಶೀಘ್ರದಲ್ಲೇ ಶೋರೂಂ ತೆರೆಯಲು ಆರಂಭಿಸಲಿದ್ದು, ಮುಂಬರುವ ಅಗಸ್ಟ್ ಹೊತ್ತಿಗೆ ಕನಿಷ್ಠ 100 ಹೊಸ ಮಾರಾಟ ಮಳಿಗೆಗಳು ಅಧಿಕೃತ ಮಾರಾಟ ಪ್ರಕ್ರಿಯೆ ಆರಂಭಿಸುವ ಸಿದ್ದತೆಯಲ್ಲಿವೆ.

2022ಕ್ಕೆ 500 ಮಾರಾಟ ಮಳಿಗೆಗಳನ್ನು ಹೊಂದಿರಲಿದೆ ಜಾವಾ ಮೋಟಾರ್‌ಸೈಕಲ್

ಹೊಸ ಮಾರಾಟ ಮಳಿಗೆಗಳೊಂದಿಗೆ ಉತ್ಪಾದನಾ ಪ್ರಕ್ರಿಯೆಯನ್ನು ತೀವ್ರಗೊಳಿಸಲು ನಿರ್ಧರಿಸಿರುವ ಜಾವಾ ಮೋಟಾರ್‌ಸೈಕಲ್ ಕಂಪನಿಯು ಗ್ರಾಹಕರ ಕಾಯುವಿಕೆ ಅವಧಿಯನ್ನು ತಗ್ಗಿಸಲಿದ್ದು, ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

2022ಕ್ಕೆ 500 ಮಾರಾಟ ಮಳಿಗೆಗಳನ್ನು ಹೊಂದಿರಲಿದೆ ಜಾವಾ ಮೋಟಾರ್‌ಸೈಕಲ್

ಜಾವಾ ಮೋಟಾರ್‌ಸೈಕಲ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಜಾವಾ ಕ್ಲಾಸಿಕ್, ಜಾವಾ 42 ಮತ್ತು ಪೆರಾಕ್ ಬೈಕ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 2021ರ ಮಾದರಿಯೊಂದಿಗೆ ಹೊಸ ಬೈಕ್‌ಗಳು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ. ಬಿಎಸ್-6 ಎಂಜಿನ್ ಜೋಡಣೆ ನಂತರ ಜಾವಾ ಕ್ಲಾಸಿಕ್ ಮತ್ತು ಜಾವಾ 42 ಬೈಕ್ ಬೆಲೆಯಲ್ಲಿ ತುಸು ದುಬಾರಿಯಾಗಿದ್ದು, ಹೊಸ ಎಂಜಿನ್ ಜೋಡಣೆ ನಂತರ ಬೈಕ್ ಎಂಜಿನ್ ಕಾರ್ಯಕ್ಷಮತೆ ಮತ್ತು ಮಾಲಿನ್ಯ ಹೊರಸೂಸುವಿಕೆಯಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.

2022ಕ್ಕೆ 500 ಮಾರಾಟ ಮಳಿಗೆಗಳನ್ನು ಹೊಂದಿರಲಿದೆ ಜಾವಾ ಮೋಟಾರ್‌ಸೈಕಲ್

ಜಾವಾ ಕ್ಲಾಸಿಕ್ ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಸಿಂಗಲ್ ಚಾನೆಲ್ ಎಬಿಎಸ್ ಮಾದರಿಯು ಆರಂಭಿಕವಾಗಿ ರೂ. 1.77 ಲಕ್ಷ ಬೆಲೆ ಹೊಂದಿದ್ದಲ್ಲಿ, ಡ್ಯುಯಲ್ ಚಾನೆಲ್ ಎಬಿಎಸ್ ಮಾದರಿಯು ರೂ.1.86 ಲಕ್ಷ ಬೆಲೆ ಪಡೆದುಕೊಂಡಿದೆ.

2022ಕ್ಕೆ 500 ಮಾರಾಟ ಮಳಿಗೆಗಳನ್ನು ಹೊಂದಿರಲಿದೆ ಜಾವಾ ಮೋಟಾರ್‌ಸೈಕಲ್

ಹಾಗೆಯೇ ಜಾವಾ 42 ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಸಿಂಗಲ್ ಚಾನೆಲ್ ಎಬಿಎಸ್ ಮಾದರಿಯು ಆರಂಭಿಕವಾಗಿ ರೂ. 1.68 ಲಕ್ಷ ಬೆಲೆ ಹೊಂದಿದ್ದು, ಡ್ಯುಯಲ್ ಚಾನೆಲ್ ಎಬಿಎಸ್ ಮಾದರಿಯು ರೂ. 1.83 ಲಕ್ಷ ಬೆಲೆ ಪಡೆದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

2022ಕ್ಕೆ 500 ಮಾರಾಟ ಮಳಿಗೆಗಳನ್ನು ಹೊಂದಿರಲಿದೆ ಜಾವಾ ಮೋಟಾರ್‌ಸೈಕಲ್

ಈ ಮೂಲಕ ಹೊಸ ಬೈಕ್‌ಗಳ ಬೆಲೆಗೂ ಮತ್ತು ಹಳೆಯ ಆವೃತ್ತಿಯ ಬೈಕ್ ಬೆಲೆಗೂ ಎಕ್ಸ್‌ಶೋರೂಂ ದರದಲ್ಲಿ ರೂ.5 ಸಾವಿರದಿಂದ ರೂ.11 ಸಾವಿರದಷ್ಟು ಹೆಚ್ಚಳವಾಗಿದ್ದು, ಆನ್-ರೋಡ್ ದರಗಳಲ್ಲಿ ಇದು ಇನ್ನಷ್ಟು ದುಬಾರಿಯಾಗಿರುತ್ತದೆ.

2022ಕ್ಕೆ 500 ಮಾರಾಟ ಮಳಿಗೆಗಳನ್ನು ಹೊಂದಿರಲಿದೆ ಜಾವಾ ಮೋಟಾರ್‌ಸೈಕಲ್

ಹೊಸ ಜಾವಾ ಮತ್ತು ಜಾವಾ 42 ಬೈಕ್‌ಗಳು ಈ ಹಿಂದಿನಂತೆಯೇ 293-ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಪಡೆದುಕೊಂಡಿದ್ದು, ಲಿಕ್ವಿಡ್ ಕೂಲ್ಡ್ ಎಂಜಿನ್ ಬದಲಾಗಿ ಫ್ಯೂಲ್ ಇಂಜೆಕ್ಷನ್ ಫೀಚರ್ಸ್ ಪಡೆದುಕೊಂಡಿದೆ.

MOST READ: ಭಾರತದಲ್ಲಿ ಮಾರಾಟವಾಗುತ್ತಿರುವ ಪ್ರಮುಖ ಹೈ ಪರ್ಫಾಮೆನ್ಸ್ ಸ್ಕೂಟರ್‌ಗಳಿವು

2022ಕ್ಕೆ 500 ಮಾರಾಟ ಮಳಿಗೆಗಳನ್ನು ಹೊಂದಿರಲಿದೆ ಜಾವಾ ಮೋಟಾರ್‌ಸೈಕಲ್

ಫ್ಯೂಲ್ ಇಂಜೆಕ್ಷನ್ ಯುನಿಟ್ ಬಳಕೆಯಿಂದಾಗಿ ಬೈಕ್ ಚಾಲನೆ ವೇಳೆ ಸ್ಮೂತ್ ಪರ್ಫಾಮೆನ್ಸ್ ನೀಡುವುದರ ಜೊತೆಗೆ ಮಾಲಿನ್ಯ ಹೊರಸೂವಿಕೆ ಪ್ರಮಾಣದಲ್ಲಿ ಸಾಕಷ್ಟು ಕಡಿತಗೊಂಡಿದೆ. ಇದು ಹೊಸ ಬೈಕಿನ ಪ್ರಮುಖ ಬದಲಾವಣೆಯಾಗಿದ್ದು, ಇನ್ನುಳಿದಂತೆ ಬಹುತೇಕ ತಾಂತ್ರಿಕ ಅಂಶಗಳು ಬಿಎಸ್-4 ಮಾದರಿಯಂತೆಯೇ ಮುಂದುವರಿಸಲಾಗಿದೆ.

Most Read Articles

Kannada
English summary
Jawa Motorcycles To Expand Its Dealerships To 500 Outlets In The Next 12 Months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X