ಕಸ್ಟಮೈಜ್ಡ್ ಬಣ್ಣದ ಆಯ್ಕೆ ಮಿಂಚಿದ ಜಾವಾ ಪೆರಾಕ್ ಕ್ಲಾಸಿಕ್ ಬೈಕ್
ಜಾವಾ ಮೋಟಾರ್‌ಸೈಕಲ್ ಕಂಪನಿಯು ಪೆರಾಕ್ ಬೈಕ್ ಮಾದರಿಯನ್ನು ಕಳೆದ ವರ್ಷದ ಜನವರಿಯಲ್ಲಿ ಬಿಡುಗಡೆಯ ನಂತರ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಬೈಕ್ ಮಾದರಿಯು ಮಾಡಿಫೈ ಬೈಕ್ ತಯಾರಕರ ನೆಚ್ಚಿನ ಮಾದರಿಯಾಗಿ ಹೊರಹೊಮ್ಮಿದೆ.

ದೇಶಿಯ ಮಾರುಕಟ್ಟೆಯಲ್ಲಿ ಮಾರಾಟಗೊಂಡಿರುವ ಪೆರಾಕ್ ಮಾದರಿಯ ಶೇ.80 ರಷ್ಟು ಮಾದರಿಗಳು ಮಾಡಿಫೈ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಇತ್ತೀಚೆಗೆ ಗ್ರಾಹಕರೊಬ್ಬರು ಹೊಸ ಬೈಕಿಗೆ ಮ್ಯಟೆ ಗ್ರಿನ್ ಬಣ್ಣದ ನೀಡುವ ಮೂಲಕ ಪೆರಾಕ್ ಬೈಕಿಗೆ ಹೊಸ ಲುಕ್ ನೀಡಿದ್ದಾರೆ. ಮೂಲ ಮಾದರಿಗಿಂತಲೂ ಉತ್ತಮ ಹೊರ ನೋಟ ಹೊಂದಿರುವ ಮಾಡಿಫೈ ಆವೃತ್ತಿಯು ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿದೆ.

ಕಸ್ಟಮೈಜ್ಡ್ ಪೆರಾಕ್ ಮಾದರಿಗೆ ಹೊಸ ಬಣ್ಣದ ಆಯ್ಕೆ ನೀಡಲು ಸುಮಾರು ರೂ.10 ಸಾವಿರ ಖರ್ಚು ಮಾಡಲಾಗಿದ್ದು, ಕ್ಲಾಸಿಕ್ ಬೈಕ್ ಮಾದರಿಗೆ ಹೊಸ ಬಣ್ಣದ ಆಯ್ಕೆ ಹೊಸ ಲುಕ್ ನೀಡಿದೆ ಎನ್ನಬಹುದು.

ಗುಜರಾತಿನ ಸೂರತ್ ಮೂಲದ ಸೀಮಾ ಬೈಕ್ಸ್ ಕಸ್ಟಮೈಜ್ಡ್ ಕಂಪನಿಯು ಈ ಹೊಸ ಬಣ್ಣದ ಆಯ್ಕೆ ನೀಡಿದ್ದು, ಉತ್ತಮ ಗುಣ ಮಟ್ಟದ ಬಣ್ಣದ ಆಯ್ಕೆಯು ಕಂಪನಿಯಿಂದಲೇ ಹೊಸ ಬಣ್ಣದ ಪಡೆದುಕೊಂಡ ಮಾದರಿಯಂತೆ ಮಿಂಚುತ್ತಿದೆ.

ಇನ್ನು ಹೊಸ ಪೆರಾಕ್ ಬೈಕ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1,97,487 ಬೆಲೆ ಪಡೆದುಕೊಂಡಿದ್ದು, ಸಾಮಾನ್ಯ ಕ್ಲಾಸಿಕ್ ಬೈಕ್ ಮಾದರಿಗಳಾದ ಜಾವಾ ಮತ್ತು ಜಾವಾ 42 ಬೈಕ್‌ಗಳಿಂತಲೂ ವಿಶೇಷ ವಿನ್ಯಾಸ ಹೊಂದಿದೆ. 1940ರ ಅವಧಿಯಲ್ಲಿನ ಬಾಬರ್ ಸ್ಟೈಲ್ ಬೈಕ್ ವಿನ್ಯಾಸವನ್ನು ಹೊತ್ತುಬಂದಿರುವ ಪೆರಾಕ್ ಬೈಕ್ ಮಾದರಿಯು ವಿಶೇಷ ಬಾಡಿ ಶೈಲಿಯೊಂದಿಗೆ ಭಾರತದಲ್ಲಿರುವ ಇತರೆ ಎಲ್ಲಾ ಬೈಕ್ ಮಾದರಿಗಳಿಂತಲೂ ಉದ್ದವಾದ ವೀಲ್ಹ್ ಬೆಸ್ ಹೊಂದಿರುವ ಮೊದಲ ಬೈಕ್ ಇದಾಗಿದೆ.

ಪೆರಾಕ್ ಬೈಕ್ ಮಾದರಿಯು 2020ರ ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ನಿಯಮ ಅನುಸಾರ ಅಭಿವೃದ್ದಿ ಹೊಂದಿದ್ದು, 334-ಸಿಸಿ ಎಂಜಿನ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 30-ಬಿಎಚ್‌ಪಿ ಮತ್ತು 31-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಪೆರಾಕ್ ಬೈಕ್ ಮಾದರಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಮಾದರಿಗೆ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಮತ್ತೊಂದು ವಿಶೇಷ ಅಂದ್ರೆ, ಪೆರಾಕ್ ಮಾದರಿಯು ಕ್ಲಾಸಿಕ್ ಲೆಜೆಂಡ್ ಕಂಪನಿಯಿಂದಲೇ ಮಾಡಿಫೈಗೊಂಡ ಬೈಕ್ ಆವೃತ್ತಿಯಾಗಲಿದ್ದು, ಡ್ಯುಯಲ್ ಚಾನೆಲ್ ಎಬಿಎಸ್, ಎರಡು ಬದಿಯ ಚಕ್ರಗಳಲ್ಲೂ ಡಿಸ್ಕ್ ಬ್ರೇಕ್, ರೌಂಡ್ ಹೆಡ್‌ಲ್ಯಾಂಪ್, ಡ್ಯಯಲ್ ಎಕ್ಸಾಸ್ಟ್ ಫೀಚರ್ಸ್‌ಗಳು ಹೊಸ ಬೈಕಿನ ಪ್ರಮುಖ ಆಕರ್ಷಣೆಯಾಗಿವೆ.

ಈ ಮೂಲಕ ದುಬಾರಿ ಬೆಲೆಯ ಹಾರ್ಲೆ ಡೇವಿಡ್ಸನ್ ಬೈಕ್ ರೈಡಿಂಗ್ ಅನುಭವ ನೀಡುವ ಪೆರಾಕ್ ಬೈಕ್‌ಗಳು ಯುವ ಸಮುದಾಯದ ನೆಚ್ಚಿನ ಬೈಕ್ ಮಾದರಿಯಾಗುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಕ್ಲಾಸಿಕ್ 350 ಮಾತ್ರವಲ್ಲದೇ ಇತ್ತೀಚೆಗೆ ಬಿಡುಗಡೆಯಾಗಿರುವ ಬೆನೆಲ್ಲಿ ಇಂಪೀರಿಯಲ್ 400 ಬೈಕಿಗೂ ಇದು ಪೈಪೋಟಿ ನೀಡುತ್ತಿದೆ.


Click it and Unblock the Notifications








