ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ

ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿರುವುದು ಮಾರುಕಟ್ಟೆಯಲ್ಲಿ ಭಾರೀ ಬದಲಾವಣೆಗೆ ಕಾರಣವಾಗುತ್ತಿದೆ.

ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸಾಂಪ್ರಾದಾಯಿಕ ವಾಹನ ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳ ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳೇ ಸದ್ಯ ಮಾರುಕಟ್ಟೆಯಲ್ಲಿ ಹೆಚ್ಚು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿವೆ. ಗೋವಾ ಮೂಲದ ಕಬೀರಾ ಮೊಬಿಲಿಟಿ ಕಂಪನಿಯು ಕೂಡಾ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಆರು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಉತ್ಪಾದನೆ ಕೈಗೊಳ್ಳುತ್ತಿದ್ದು, ಇದೀಗ ಹೊಸದಾಗಿ ಹೆರ್ಮೆಸ್ 75 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ.

ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ

ಹೆರ್ಮೆಸ್ 75 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ವಿಶೇಷವಾಗಿ ವಾಣಿಜ್ಯ ಬಳಕೆಯ ಉದ್ದೇಶಕ್ಕಾಗಿ ನಿರ್ಮಾಣ ಮಾಡಲಾಗಿದ್ದು, ಹೊಸ ಸ್ಕೂಟರ್ ‌ಬೆಲೆಯನ್ನು ಗೋವಾ ಎಕ್ಸ್‌ಶೋರೂಂ ಪ್ರಕಾರ ರೂ. 89,600 ಕ್ಕೆ ನಿಗದಿಪಡಿಸಲಾಗಿದೆ.

ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ

ಗ್ರಾಹಕರ ಬೇಡಿಕೆಯ ಆಧಾರ ಮೇಲೆ ಬ್ಯುಸಿನೆಸ್ ಟು ಬ್ಯುಸಿನೆಸ್(ಬಿಟುಬಿ) ಉದ್ದೇಶಕ್ಕಾಗಿ ಹೆರ್ಮೆಸ್ 75 ಎಲೆಕ್ಟ್ರಿಕ್ ಸ್ಕೂಟರ್ ಹೊರತಂದಿರುವ ಕಬೀರಾ ಮೊಬಿಲಿಟಿ ಕಂಪನಿಯು ಡೆಲಿವರಿ ಉದ್ದೇಶಗಳ ಆಧಾರದ ಮೇಲೆ ಲಗೇಜ್ ರಾಕ್ ಸೌಲಭ್ಯವನ್ನು ಕಸ್ಟಮೈಜ್ಡ್ ಮಾಡಲಿದೆ.

ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ

ಹೆರ್ಮೆಸ್ 75 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲಿ ಕಬೀರಾ ಕಂಪನಿಯು 60 ವೊಲ್ಟ್ 40ಎಹೆಚ್ ಲೀ-ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಕೇವಲ 4 ಗಂಟೆಗಳಲ್ಲಿ ಪೂರ್ಣಪ್ರಮಾಣದ ಚಾರ್ಜಿಂಗ್ ಪಡೆದುಕೊಳ್ಳಲಿದೆ. ಜೊತೆಗೆ ಹೊಸ ಸ್ಕೂಟರ್ ಮಾದರಿಯು ವಾಣಿಜ್ಯ ಬಳಕೆಯ ಇವಿ ಸ್ಕೂಟರ್‌ಗಳಲ್ಲೇ ಹೆಚ್ಚಿನ ಮಟ್ಟದ ವೇಗಹೊಂದಿದ್ದು, ಕೆಲವೇ ಸೆಕೆಂಡುಗಳಲ್ಲಿ ಸೊನ್ನೆಯಿಂದ 50 ಕಿ.ಮೀ ವೇಗ ಪಡೆದುಕೊಳ್ಳುತ್ತದೆ.

ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ

ಹೊಸ ಸ್ಕೂಟರ್ ಟಾಪ್ ಸ್ಪೀಡ್ ಅನ್ನು ಪ್ರತಿ ಗಂಟೆಗೆ 80 ಕಿ.ಮೀ ಗೆ ನಿಗದಿಪಡಿಸಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 120 ಕಿ.ಮೀ ಮೈಲೇಜ್ ಖಾತ್ರಿಪಡಿಸುವ ಹೊಸ ಸ್ಕೂಟರ್ ಸಾಮಾನ್ಯ ಸ್ಕೂಟರ್ ಮಾದರಿಯ ನಿರ್ವಹಣಾ ವೆಚ್ಚಕ್ಕಿಂತ ಶೇ.70ಕ್ಕಿಂತಲೂ ಕಡಿಮೆ ಹೊಂದಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ

ಹೆರ್ಮೆಸ್ 75 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗೆ ಕೇಂದ್ರ ಸರ್ಕಾರದಿಂದ ಫೇಮ್ 2 ಯೋಜನೆ ಅಡಿ ಸಬ್ಸಡಿ ಕೂಡಾ ಅನ್ವಯವಾಗಲಿದ್ದು, ಸದ್ಯ ಗೋವಾ ಮತ್ತು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪನಿಯು 2022ರ ವೇಳೆಗೆ ದೇಶಾದ್ಯಂತ ಮಾರಾಟ ಮಳಿಗೆಗಳನ್ನು ತೆರೆಯುವ ಸಿದ್ದತೆಯಲ್ಲಿದೆ.

ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ

ಕಬೀರಾ ಮೊಬಿಲಿಟಿ ಕಂಪನಿಯು 2018ರಿಂದಲೇ ಎಲೆಕ್ಟ್ರಿಕ್ ಬೈಕುಗಳನ್ನು ಉತ್ಪಾದಿಸುತ್ತಿದೆ. ಕಂಪನಿಯು ಈ ವರ್ಷ ಅನೇಕ ಹೊಸ ಬೈಕ್‌ ಮತ್ತು ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಲು ಮುಂದಾಗಿದೆ. ಈ ಮೂಲಕ ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಜನಪ್ರಿಯವಾಗಲು ಬಯಸಿದ್ದು, ಕಂಪನಿಯು ಇ-ಕಾಮರ್ಸ್ ಹಾಗೂ ಡೀಲರ್'ಶಿಪ್'ಗಳನ್ನು ಅವಲಂಬಿಸಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ

ಗೋವಾದಲ್ಲಿ ಮುಖ್ಯ ಕಚೇರಿ ಹೊಂದಿರುವ ಕಂಪನಿಯು ಗೋವಾ ಹಾಗೂ ಕರ್ನಾಟಕದ ಧಾರವಾಡದಲ್ಲಿ ವಾಹನಗಳನ್ನು ಉತ್ಪಾದಿಸುತ್ತಿದ್ದು, ಶೀಘ್ರದಲ್ಲೇ ಹೊಸ ಮಾದರಿಯ ಮತ್ತಷ್ಟು ಎಲೆಕ್ಟ್ರಿಕ್ ಬೈಕ್ ಮತ್ತು ಸ್ಕೂಟರ್‌ಗಳು ರಸ್ತೆಗಿಳಿಯಲಿವೆ.

Most Read Articles

Kannada
English summary
Kabira Mobility Hermes 75 High-Speed Commercial Delivery Electric Scooter Launched In India
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X