Just In
- 1 min ago
ವಿನೂತನ ವೈಶಿಷ್ಟ್ಯತೆಯೊಂದಿಗೆ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾದ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350
- 38 min ago
ಹೊಸ ಜೀಪ್ ರ್ಯಾಂಗ್ಲರ್ ರೂಬಿಕಾನ್ 392 ಲಾಂಚ್ ಎಡಿಷನ್ ಬಿಡುಗಡೆ
- 1 hr ago
ಸ್ಪ್ಲೆಂಡರ್ ಬೈಕುಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ ಹೀರೋ ಮೋಟೊಕಾರ್ಪ್
- 2 hrs ago
2021ರ ಸ್ವಿಫ್ಟ್ ಕಾರಿನ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಾರುತಿ ಸುಜುಕಿ
Don't Miss!
- News
ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ
- Movies
ನಿರ್ದೇಶಕನಿಗೆ ಅವಮಾನ: ಸ್ಟಾರ್ ನಟ ಆಗಿದ್ರೆ ಸುಮ್ಮನೆ ಬಿಡುತ್ತಿದ್ರಾ? ಚಂದ್ರಶೇಖರ್ ಅಸಮಾಧಾನ
- Finance
ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಬೈಕುಗಳ ಟೀಸರ್ ಬಿಡುಗಡೆಗೊಳಿಸಿದ ಕವಾಸಕಿ
ಹಲವು ದಿನಗಳಿಂದ ಕವಾಸಕಿ ಕಂಪನಿಯ ಹೊಸ ಬೈಕುಗಳ ಬಗ್ಗೆ ಚರ್ಚಿಸಲಾಗುತ್ತಿತ್ತು. ಈ ಬೈಕುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗುವುದು. ಕಂಪನಿಯು ತನ್ನ ಎರಡು ಹೊಸ ಬೈಕುಗಳನ್ನು ಕೆಲವೇ ದಿನಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವುದಾಗಿ ದೃಢಪಡಿಸಿದೆ.

ಈ ಬಗ್ಗೆ ಕವಾಸಕಿ ಇಂಡಿಯಾ ಕಂಪನಿಯು ತನ್ನ ಸಾಮಾಜಿಕ ಜಾಲತಾಣದಲ್ಲಿ ಟೀಸರ್ ಬಿಡುಗಡೆಗೊಳಿಸಿದೆ. ಕಂಪನಿಯು ಬಿಡುಗಡೆಗೊಳಿಸಿರುವ ಟೀಸರ್ ಪ್ರಕಾರ, ಈ ಎರಡೂ ವಾಹನಗಳು ಬೈಕ್'ಗಳೆಂದು ತಿಳಿದು ಬಂದಿದೆ. ಇದರ ಹೊರತಾಗಿ ಈ ಬೈಕುಗಳ ಬಗ್ಗೆ ಹೆಚ್ಚು ಮಾಹಿತಿ ತಿಳಿದುಬಂದಿಲ್ಲ.

ಕೆಲವು ವರದಿಗಳ ಪ್ರಕಾರ ಈ ಎರಡು ಬೈಕುಗಳಲ್ಲಿ ಒಂದು ಕಂಪನಿಯ ಹೆಚ್ಚು ಮಾರಾಟವಾಗುವ ಕವಾಸಕಿ ನಿಂಜಾ 300 ಬೈಕ್ ಆಗಿರಬಹುದು ಎಂದು ತಿಳಿದು ಬಂದಿದೆ. ಮಾಹಿತಿಗಳ ಪ್ರಕಾರ ನವೀಕರಿಸಿದ ಮಾದರಿಯ ಬೆಲೆ ಹಳೆಯ ಮಾದರಿಗಿಂತ ಸ್ವಲ್ಪ ದುಬಾರಿಯಾಗುವ ಸಾಧ್ಯತೆಗಳಿವೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಕವಾಸಕಿ ನಿಂಜಾ 300 ಬಿಎಸ್ 4 ಬೈಕಿನ ಬೆಲೆ ದೆಹಲಿಯ ಎಕ್ಸ್ ಶೋರೂಂ ದರದಂತೆ ರೂ.2.98 ಲಕ್ಷಗಳಾಗಿದೆ. ಹೊಸ ಕವಾಸಕಿ ನಿಂಜಾ 300 ಬೈಕಿನಎಂಜಿನ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುವುದು.

ಈ ಬೈಕಿನ ಶೈಲಿ ಹಾಗೂ ಫೀಚರ್'ಗಳಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಬಿಎಸ್ 6 ಕವಾಸಕಿ ನಿಂಜಾ 300 ಬೈಕಿನಲ್ಲಿರುವ ಫೀಚರ್'ಗಳ ಬಗ್ಗೆ ಹೇಳುವುದಾದರೆ ಈ ಬೈಕಿನಲ್ಲಿ ಟ್ವಿನ್-ಪಾಡ್ ಹೆಡ್‌ಲೈಟ್ ಸೆಟಪ್ ಅನ್ನು ಮತ್ತೆ ಬಳಸುವ ಸಾಧ್ಯತೆಗಳಿವೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಇದರ ಜೊತೆಗೆ ಈ ಬೈಕಿನಲ್ಲಿ ಇಂಟಿಗ್ರೇಟೆಡ್ ಫ್ರಂಟ್ ಟರ್ನ್ ಇಂಡಿಕೇಟರ್, ಸೆಮಿ ಡಿಜಿಟಲ್ ಇನ್ಸ್'ಟ್ರೂಮೆಂಟ್ ಕ್ಲಸ್ಟರ್, ಮಸ್ಕ್ಯುಲರ್ ಫ್ಯೂಯಲ್ ಟ್ಯಾಂಕ್ ಹಾಗೂ ಸ್ಪ್ಲಿಟ್-ಸ್ಟೈಲ್ ಸೀಟುಗಳನ್ನು ನೀಡಬಹುದು.

ಮಾಹಿತಿಗಳ ಪ್ರಕಾರ, ಹೊಸ ಕವಾಸಕಿ ನಿಂಜಾ 300 ಬೈಕ್ 296 ಸಿಸಿ, ಲಿಕ್ವಿಡ್-ಕೂಲ್ಡ್, ಪ್ಯಾರೆಲಲ್-ಟ್ವಿನ್ ಬಿಎಸ್ 6 ಎಂಜಿನ್ ಹೊಂದಿರಲಿದೆ. ಆದರೆ ಈ ಎಂಜಿನ್ ಉತ್ಪಾದಿಸುವ ಪವರ್ ಹಾಗೂ ಟಾರ್ಕ್'ನಲ್ಲಿ ಕೆಲವು ಬದಲಾವಣೆಗಳಾಗಬಹುದು.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಕವಾಸಕಿ ನಿಂಜಾ 300 ಬೈಕಿನಲ್ಲಿರುವ ಬಿಎಸ್ 4 ಎಂಜಿನ್ 38.4 ಬಿಹೆಚ್‌ಪಿ ಪವರ್ ಹಾಗೂ 27 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಕವಾಸಕಿಯ ಮತ್ತೊಂದು ಬೈಕಿನ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಕಂಪನಿಯು ಕೆಲವೇ ದಿನಗಳಲ್ಲಿ ಈ ಎರಡೂ ಬೈಕುಗಳನ್ನು ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.

ಇತ್ತೀಚೆಗಷ್ಟೇ ಕವಾಸಕಿ ಕಂಪನಿಯು ತನ್ನ ರೆಟ್ರೊ-ಕ್ಲಾಸಿಕ್ ಕವಾಸಕಿ ಡಬ್ಲ್ಯು 175 ರೋಡ್ ಸ್ಟರ್ ಬೈಕ್ ಅನ್ನು ಹೊಸ ಮೆಟಾಲಿಕ್ ಓಷನ್ ಬ್ಲೂ ಬಣ್ಣದಲ್ಲಿಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಬೈಕ್ ಅನ್ನು ಭಾರತದಲ್ಲಿಯೂ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.