ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್
ಜನಪ್ರಿಯ ದ್ವಿಚಕ್ರ ವಾಹನ ಕಂಪನಿಯಾದ ಕವಾಸಕಿಯು ತನ್ನ 2021ರ ನಿಂಜಾ ಝಡ್ಎಕ್ಸ್-10ಆರ್ ಬೈಕನ್ನು ಇಂಡೋನೇಷ್ಯಾದ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ವಿಶ್ವದಾದ್ಯಂತ ಅತ್ಯಂತ ಜನಪ್ರಿಯ ಲೀಟರ್-ಕ್ಲಾಸ್ ಬೈಕ್‌ಗಳಲ್ಲಿ ಒಂದಾಗಿದೆ.

2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ಹೊಸ ಪ್ರೀಮಿಯಂ ಸೂಪರ್‌ಸ್ಪೋರ್ಟ್ ಬೈಕನ್ನು ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಸಾರವಾಗಿ ನವೀಕರಿಸಲಾಗಿದೆ. ಇನ್ನು ಇತರ ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಯುರೊ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಇದರೊಂದಿಗೆ ಕೆಲವು ಹೊಸ ಫೀಚರ್ ಗಳನ್ನು ಪಡೆದುಕೊಂಡಿದೆ.

ಇನ್ನು 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಹೆಚ್ಚು ಅಗ್ರೇಸಿವ್ ಮತ್ತು ಸ್ಪೋರ್ಟಿ ವಿನ್ಯಾಸವನ್ನು ಹೊಂದಿದೆ. ಸೂಪರ್‌ಸ್ಪೋರ್ಟ್ ಬೈಕ್ ಏರೋಡೈನಾಮಿಕ್ ಮೇಲ್ಭಾಗದ ಕೌಲ್, ಹೊಸ ಟೈಲ್ ಕೌಲ್, ಪರಿಷ್ಕೃತ ಹ್ಯಾಂಡಲ್‌ಬಾರ್, ಫುಟ್‌ಪೆಗ್ ಮತ್ತು ಎಲ್‌ಇಡಿ ಲೈಟಿಂಗ್ ಅನ್ನು ಹೊಂದಿದೆ.

2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬ್ಲೂಟೂತ್ ಕನೆಕ್ಟಿವಿಟಿಯನ್ನು ಒಳಗೊಂಡ ಬಣ್ಣದ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಸಹ ಹೊಂದಿದೆ. ಇದು ಬ್ರ್ಯಾಂಡ್‌ನ 'ರೈಡಾಲಜಿ ದಿ ಆ್ಯಪ್' ನೊಂದಿಗೆ ಕಾರ್ಯನಿರ್ವಹಿಸುತ್ತದೆ.

ಲೀಟರ್-ಕ್ಲಾಸ್ ಸೂಪರ್‌ಸ್ಪೋರ್ಟ್ ಬೈಕ್ ಆಗಿರುವುದರಿಂದ, ಇದರಲ್ಲಿ ಎಲೆಕ್ಟ್ರಾನಿಕ್ ರೈಡರ್ ಏಡ್‌ಗಳನ್ನು ಹೊಂದಿದೆ. ಇದರಲ್ಲಿ ಕ್ರೂಸ್ ಕಂಟ್ರೋಲ್, ಟ್ರ್ಯಾಕ್ಷನ್ ಕಂಟ್ರೋಲ್ ಮತ್ತು ಲಾಂಚ್ ಕಂಟ್ರೋಲ್ ಅನ್ನು ಹೊಂದಿದೆ. ಇದರೊಂದಿಗೆ ರೈಡಿಂಗ್ ಮೋಡ್ ಗಳು, ಎಂಜಿನ್ ಬ್ರೇಕ್ ಮತ್ತು ಇನು ಹಲವಾರು ತಂತ್ರಜ್ಙಾನಗಳನ್ನು ಒಳಗೊಂಡಿದೆ.

ಹೊಸ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ 998 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 13,200 ಆರ್‌ಪಿಎಂನಲ್ಲಿ 200 ಬಿಹೆಚ್‌ಪಿ ಪವರ್ ಮತ್ತು 11,400 ಆರ್‌ಪಿಎಂನಲ್ಲಿ 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಎಂಜಿನ್ ಅನ್ನು ಸ್ಟ್ಯಾಂಡರ್ಡ್ ಸಿಕ್ಸ್-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ, ಬೈಡೈರೆಕ್ಷನಲ್ ಕ್ವಿಕ್-ಶಿಫ್ಟರ್ ಸ್ಟ್ಯಾಂಡರ್ಡ್ ಆಗಿ ನೀಡಿದೆ. ಈ ಹೊಸ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಲೈಮ್ ಗ್ರೀನ್ ಮತ್ತು ಫ್ಲಾಟ್ ಎಬೊನಿ ಟೈಪ್2 ಎಂಬ ಎರಡು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಈ ಲೀಟರ್-ಕ್ಲಾಸ್ ಸೂಪರ್‌ಸ್ಪೋರ್ಟ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 43 ಎಂಎಂ ಇನ್ವರ್ಡಡ್ ಶೋವಾ ಬಿಎಫ್‌ಎಫ್ (ಬ್ಯಾಲೆನ್ಸ್ ಫ್ರೀ ಫೋರ್ಕ್ಸ್) ಮತ್ತು ಹಿಂಭಾಗದಲ್ಲಿ ಬಿಆರ್‌ಎಫ್‌ಸಿ ಲೈಟ್ (ಬ್ಯಾಲೆನ್ಸ್ ಫ್ರೀ ರಿಯರ್ ಕುಶನ್) ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ.

ಇನ್ನು ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಡ್ಯುಯಲ್ 330 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಸಿಂಗಲ್ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ. ಇನ್ನು ಇದರೊಂದಿಗೆ ಡ್ಯುಯಲ್-ಚಾನೆಲ್ ಮತ್ತು ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ. 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಮಾದರಿಯು ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಎಸ್ 1000 ಆರ್ಆರ್ ಮತ್ತು ಡುಕಾಟಿ ಪಾನಿಗಲೆ ವಿ2 ಬೈಕುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications








