ಭಾರತದಲ್ಲಿ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬಿಡುಗಡೆ: ಬೆಲೆ ರೂ.14.99 ಲಕ್ಷ

ಜನಪ್ರಿಯ ದ್ವಿಚಕ್ರ ವಾಹನ ಕಂಪನಿಯಾದ ಕವಾಸಕಿಯು ತನ್ನ 2021ರ ನಿಂಜಾ ಝಡ್ಎಕ್ಸ್-10ಆರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ವಿಶ್ವದಾದ್ಯಂತ ಅತ್ಯಂತ ಜನಪ್ರಿಯ ಲೀಟರ್-ಕ್ಲಾಸ್ ಬೈಕ್‌ಗಳಲ್ಲಿ ಒಂದಾಗಿದೆ.

ಭಾರತದಲ್ಲಿ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬಿಡುಗಡೆ

ಬಿಡುಗಡೆಗೊಂಡ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.14.99 ಲಕ್ಷಗಳಾಗಿದೆ. ಈ ಹೊಸ ಪ್ರೀಮಿಯಂ ಸೂಪರ್‌ಸ್ಪೋರ್ಟ್ ಬೈಕನ್ನು ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಸಾರವಾಗಿ ನವೀಕರಿಸಲಾಗಿದೆ. ಇದರೊಂದಿಗೆ ಕೆಲವು ಹೊಸ ಫೀಚರ್ ಗಳನ್ನು ಪಡೆದುಕೊಂಡಿದೆ. ಇನ್ನು ಈ ಹೊಸ ನಿಂಜಾ ಝಡ್ಎಕ್ಸ್-10ಆರ್ ಬೈಕಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ.

ಭಾರತದಲ್ಲಿ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬಿಡುಗಡೆ

ಈ ಹೊಸ ಬೈಕನ್ನು ಖರೀದಿಸಲು ಬಯಸುವ ಗ್ರಾಹಕರು ಹತ್ತಿರ ಕವಾಸಕಿ ಡೀಲರ್ ಬಳಿ ತೆರಳಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಇನ್ನು ಈ ಪ್ರೀಮಿಯಂ ಸೂಪರ್‌ಸ್ಪೋರ್ಟ್ ಬೈಕಿನ ವಿತರಣೆಯನ್ನು ಶೀಘ್ರದಲ್ಲೇ ಪ್ರಾರಂಭಿಸಬಹುದು.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಭಾರತದಲ್ಲಿ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬಿಡುಗಡೆ

ಇನ್ನು 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಈ ಹೊಸ ಬೈಕ್ ಹೆಚ್ಚು ಅಗ್ರೇಸಿವ್ ಮತ್ತು ಸ್ಪೋರ್ಟಿ ವಿನ್ಯಾಸವನ್ನು ಹೊಂದಿದೆ. ಸೂಪರ್‌ಸ್ಪೋರ್ಟ್ ಬೈಕ್ ಏರೋಡೈನಾಮಿಕ್ ಮೇಲ್ಭಾಗದ ಕೌಲ್, ಹೊಸ ಟೈಲ್ ಕೌಲ್, ಪರಿಷ್ಕೃತ ಹ್ಯಾಂಡಲ್‌ಬಾರ್, ಫುಟ್‌ಪೆಗ್ ಮತ್ತು ಎಲ್‌ಇಡಿ ಲೈಟಿಂಗ್ ಅನ್ನು ಹೊಂದಿದೆ.

ಭಾರತದಲ್ಲಿ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬಿಡುಗಡೆ

2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬ್ಲೂಟೂತ್ ಕನೆಕ್ಟಿವಿಟಿಯನ್ನು ಒಳಗೊಂಡ ಬಣ್ಣದ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಸಹ ಹೊಂದಿದೆ. ಇದು ಬ್ರ್ಯಾಂಡ್‌ನ 'ರೈಡಾಲಜಿ ದಿ ಆ್ಯಪ್' ನೊಂದಿಗೆ ಕಾರ್ಯನಿರ್ವಹಿಸುತ್ತದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಭಾರತದಲ್ಲಿ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬಿಡುಗಡೆ

ಲೀಟರ್-ಕ್ಲಾಸ್ ಸೂಪರ್‌ಸ್ಪೋರ್ಟ್ ಬೈಕ್ ಆಗಿರುವುದರಿಂದ, 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಎಲೆಕ್ಟ್ರಾನಿಕ್ ರೈಡರ್ ಏಡ್‌ಗಳನ್ನು ಹೊಂದಿದೆ. ಇದರಲ್ಲಿ ಕ್ರೂಸ್ ಕಂಟ್ರೋಲ್, ಟ್ರ್ಯಾಕ್ಷನ್ ಕಂಟ್ರೋಲ್ ಮತ್ತು ಲಾಂಚ್ ಕಂಟ್ರೋಲ್ ಅನ್ನು ಹೊಂದಿದೆ.

ಭಾರತದಲ್ಲಿ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬಿಡುಗಡೆ

ಇದರೊಂದಿಗೆ ರೈಡಿಂಗ್ ಮೋಡ್ ಗಳು, ಎಂಜಿನ್ ಬ್ರೇಕ್ ಮತ್ತು ಇನು ಹಲವಾರು ತಂತ್ರಜ್ಙಾನಗಳನ್ನು ಒಳಗೊಂಡಿದೆ. 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕಿನ ಹಿಂದಿನ ಮಾದರಿಗೆ ಹೋಲಿಸಿದರೆ ಎಂಜಿನ್ ಅನ್ನು ಬದಲಾವಣೆಯನ್ನು ಮಾಡಲಾಗಿಲ್ಲ. ಆದರೆ ಎಂಜಿನ್ ಅನ್ನು ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಭಾರತದಲ್ಲಿ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬಿಡುಗಡೆ

2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ 998 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 13,200 ಆರ್‌ಪಿಎಂನಲ್ಲಿ 200 ಬಿಹೆಚ್‌ಪಿ ಪವರ್ ಮತ್ತು 11,400 ಆರ್‌ಪಿಎಂನಲ್ಲಿ 114 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ;

ಭಾರತದಲ್ಲಿ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬಿಡುಗಡೆ

ಎಂಜಿನ್ ಅನ್ನು ಸ್ಟ್ಯಾಂಡರ್ಡ್ ಸಿಕ್ಸ್-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ, ಬೈಡೈರೆಕ್ಷನಲ್ ಕ್ವಿಕ್-ಶಿಫ್ಟರ್ ಸ್ಟ್ಯಾಂಡರ್ಡ್‌ ಆಗಿ ನೀಡಿದೆ. ಹೊಸ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಲೈಮ್ ಗ್ರೀನ್ ಮತ್ತು ಫ್ಲಾಟ್ ಎಬೊನಿ ಟೈಪ್2 ಎಂಬ ಎರಡು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಭಾರತದಲ್ಲಿ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬಿಡುಗಡೆ

ಇನ್ನು ಈ ಲೀಟರ್-ಕ್ಲಾಸ್ ಸೂಪರ್‌ಸ್ಪೋರ್ಟ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 43 ಎಂಎಂ ಇನ್ವರ್ಡಡ್ ಶೋವಾ ಬಿಎಫ್‌ಎಫ್ (ಬ್ಯಾಲೆನ್ಸ್ ಫ್ರೀ ಫೋರ್ಕ್ಸ್) ಮತ್ತು ಹಿಂಭಾಗದಲ್ಲಿ ಬಿಆರ್‌ಎಫ್‌ಸಿ ಲೈಟ್ (ಬ್ಯಾಲೆನ್ಸ್ ಫ್ರೀ ರಿಯರ್ ಕುಶನ್) ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ.

ಭಾರತದಲ್ಲಿ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬಿಡುಗಡೆ

ಇನ್ನು ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಡ್ಯುಯಲ್ 330 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಸಿಂಗಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇನ್ನು ಇದರೊಂದಿಗೆ ಡ್ಯುಯಲ್-ಚಾನೆಲ್ ಮತ್ತು ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಭಾರತದಲ್ಲಿ 2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ ಬಿಡುಗಡೆ

2021ರ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಬೈಕ್ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯವಾದ ಲೀಟರ್-ಕ್ಲಾಸ್ ಸೂಪರ್‌ಸ್ಪೋರ್ಟ್ ಕೊಡುಗೆಗಳಲ್ಲಿ ಒಂದಾಗಿದೆ. ಈ ಹೊಸ ಬೈಕ್ ಲ್ ಭಾರತೀಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಎಸ್ 1000 ಆರ್ಆರ್ ಮತ್ತು ಡುಕಾಟಿ ಪಾನಿಗಲೆ ವಿ2 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
2021 Kawasaki Ninja ZX-10R Launched. Read In Kannada.
Story first published: Wednesday, March 17, 2021, 15:35 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X