220ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಕೊಮಾಕಿ
ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹಲವು ಸ್ಟಾರ್ಟ್ ಅಪ್ ಕಂಪನಿಗಳು ವಿವಿಧ ಮಾದರಿಯ ಹೊಸ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ಕೊಮಾಕಿ ಕಂಪನಿಯು ಸಹ ವಿವಿಧ ಎಲೆಕ್ಟ್ರಿಕ್ ವಾಹನಗಳೊಂದಿಗೆ ಆಟೋ ಉದ್ಯಮದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಜಾಗತಿಕವಾಗಿ ಇಂಧನ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿರುವುದು ಇವಿ ವಾಹನ ಮಾರುಕಟ್ಟೆಯಲ್ಲಿ ಹೊಸ ಬದಲಾವಣೆಗೆ ಕಾರಣವಾಗಿದೆ.

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸ್ಟಾರ್ಟ್ ಅಪ್ ಕಂಪನಿಗಳು ಸಾಕಷ್ಟು ಸದ್ದು ಮಾಡುತ್ತಿದ್ದು, ದೆಹಲಿ ಮೂಲದ ಕೊಮಾಕಿ ಕಂಪನಿಯು ಕೂಡಾ ವಿವಿಧ ಮಾದರಿಯ ಮೂರು ಹೊಸ ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಜೊತೆಗೆ ಒಂದು ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಈಗಾಗಲೇ ಮಾರುಕಟ್ಟೆಗೆ ಪರಿಚಯಿಸಿದೆ.

ದೆಹಲಿಯಲ್ಲಿ ಇತ್ತೀಚೆಗೆ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡುವ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಕೊಮೊಕಿ ಕಂಪನಿಯು ಇತ್ತೀಚೆಗೆ ಎಂಎಕ್ಸ್3 ಎನ್ನುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಇವಿ ಮಾದರಿಗಳನ್ನು ಬಿಡುಗಡೆಯ ಸಿದ್ದತೆಯಲ್ಲಿದೆ.

ಕೊಮಾಕಿ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇವಿ ದ್ವಿಚಕ್ರ ವಾಹನ ಮಾದರಿಗಳಲ್ಲಿ ಪ್ರತಿ ಚಾರ್ಜ್‌ಗೆ 80ಕಿ.ಮೀ ನಿಂದ 150 ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಬ್ಯಾಟರಿ ಪ್ಯಾಕ್ ಅಳವಡಿಸುತ್ತಿದ್ದು, ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಕೈಗೆಟುವ ಬೆಲೆಗಳಲ್ಲಿ ಅಧಿಕ ಮೈಲೇಜ್ ಪ್ರೇರಿತ ಇವಿ ವಾಹನಗಳನ್ನು ಅಭಿವೃದ್ದಿಪಡಿಸುತ್ತಿದೆ.

ಮಾಹಿತಿಗಳ ಪ್ರಕಾರ, ಕೊಮಾಕಿ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಲೀಥಿಯಂ ಬ್ಯಾಟರಿ ಸಂಪನ್ಮೂಲವನ್ನು ಅಭಿವೃದ್ದಿಪಡಿಸುತ್ತಿದ್ದು, ಹೊಸ ಬ್ಯಾಟರಿ ಸಂಪನ್ಮೂಲವು ಪ್ರತಿ ಚಾರ್ಜ್‌ಗೆ ವಿವಿಧ ರೈಡ್ ಮೋಡ್‌ಗಳಲ್ಲಿ 170 ಕಿ.ಮೀ ನಿಂದ 220 ಕಿ.ಮೀ ಗೂ ಅಧಿಕ ಮೈಲೇಜ್ ಹಿಂದಿರುಗಿಸುವ ಭರವಸೆ ನೀಡಿದೆ.

ಹೊಸ ಬ್ಯಾಟರಿ ಮಾದರಿಯನ್ನು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಸ್ಕೂಟರ್ ಮತ್ತು ಬೈಕ್ ಮಾದರಿಗಳಲ್ಲಿ ಜೋಡಣೆ ಮಾಡುವ ಸುಳಿವು ನೀಡಿದ್ದು, ಸಾಕಷ್ಟು ಹಗುರವಾಗಿರುವ ಹೊಸ ಬ್ಯಾಟರಿ ಮಾದರಿಯು ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಗ್ರಾಹಕರ ಗಮನಸೆಳೆಯಲಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಸದ್ಯಕ್ಕೆ ಹೊಸ ಬ್ಯಾಟರಿ ವೈಶಿಷ್ಟ್ಯತೆಗಳಲ್ಲಿ ಮೈಲೇಜ್ ಮಾಹಿತಿ ಹೊರತಾಗಿ ಮಾಹಿತಿ ಬಿಟ್ಟುಕೊಡದ ಕೊಮಾಕಿ ಕಂಪನಿಯು ಶೀಘ್ರದಲ್ಲೇ ಹೊಸ ಬ್ಯಾಟರಿ ಪ್ರೇರಿತ ಸ್ಕೂಟರ್ ಬಿಡುಗಡೆ ಮಾಡಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇವಿ ದ್ವಿಚಕ್ರ ವಾಹನಗಳನ್ನು ಸಹ ಉನ್ನತೀಕರಿಸುವ ಸಿದ್ದತೆಯಲ್ಲಿದೆ.

ಇನ್ನು ಇತ್ತೀಚೆಗೆ ಬಿಡುಗಡೆಯಾದ ಕೊಮಾಕಿ ನಿರ್ಮಾಣದ ಎಂಎಕ್ಸ್3 ಇವಿ ಬೈಕ್ ಮಾದರಿಯು ಸಾಮಾನ್ಯ ಮಾದರಿಯ 125 ಸಿಸಿ ಬೈಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿದ್ದು, ಪ್ರತಿ ಚಾರ್ಜ್‌ಗೆ ವಿವಿಧ ರೈಡಿಂಗ್ ಮೋಡ್‌ಗಳಿಗೆ ಅನುಗುಣವಾಗಿ 85 ಕಿ.ಮೀ ನಿಂದ 100 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತಿದೆ.

ಹೊಸ ಇವಿ ಬೈಕ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 95 ಸಾವಿರಕ್ಕೆ ನಿಗದಿಪಡಿಸಲಾಗಿದ್ದು, ಹೊಸ ಬೈಕ್ ಮಾದರಿಯು ಒಂದು ಬಾರಿ ಪೂರ್ಣ 3 ರಿಂದ ನಾಲ್ಕು ಗಂಟೆಗಳ ಸಮಯಾವಕಾಶ ತೆಗೆದುಕೊಳ್ಳಲಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಪೂರ್ಣ ಪ್ರಮಾಣದಲ್ಲಿ ಒಂದು ಬಾರಿ ಚಾರ್ಜಿಂಗ್ ಮಾಡಲು 1.5 ಯುನಿಟ್ ವಿದ್ಯುತ್ ಬಳಕೆ ಮಾಡಲಿದ್ದು, ಯುನಿಟ್ ದರಗಳಿಗೆ ಅನುಗುಣವಾಗಿ ಗರಿಷ್ಠ ರೂ.20 ವೆಚ್ಚ ಮಾಡಿದ್ದಲ್ಲಿ 100 ಕಿ.ಮೀ ಮೈಲೇಜ್ ಹಿಂಪಡೆದುಕೊಳ್ಳುವುದರ ಜೊತೆಗೆ ಪೆಟ್ರೋಲ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಉಳಿತಾಯವಾಗಲಿದೆ.

ಕೊಮಾಕಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕೊಮಾಕಿ ಟಿಎನ್95 ಸ್ಕೂಟರ್, ಕೊಮಾಕಿ ಎಂ5 ಬೈಕ್ ಮತ್ತು ಕೊಮಾಕಿ ಎಸ್ಇ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಕೊಮಾಕಿ ಟಿಎನ್95 ಸ್ಕೂಟರ್ ಮಾದರಿಯು ಕಂಪನಿಯು ಹೈ ಎಂಡ್ ಪ್ರೀಮಿಯಂ ಮಾದರಿಯಾಗಿದೆ.


Click it and Unblock the Notifications








