ಪ್ರತಿ ಚಾರ್ಜ್ 150 ಕಿ.ಮೀ ಮೈಲೇಜ್ ನೀಡುವ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದೆ ಕೊಮಾಕಿ

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹಲವು ಸ್ಟಾರ್ಟ್ ಅಪ್ ಕಂಪನಿಗಳು ವಿವಿಧ ಮಾದರಿಯ ಹೊಸ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ದೆಹಲಿ ಮೂಲದ ಕೆಬಿಎಲ್ ಕೊಮಾಕಿ ಕಂಪನಿಯು ಸಹ ಮೊದಲ ಬಾರಿಗೆ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ಭಾರೀ ಪ್ರಮಾಣದ ಬಂಡವಾಳದೊಂದಿಗೆ ಹೊಸ ಯೋಜನೆಗೆ ಚಾಲನೆ ನೀಡಿದೆ.

ಪ್ರತಿ ಚಾರ್ಜ್ 150 ಕಿ.ಮೀ ಮೈಲೇಜ್ ನೀಡುವ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದೆ ಕೊಮಾಕಿ

ಇಂಧನ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿರುವುದು ಮಾರುಕಟ್ಟೆಯಲ್ಲಿ ಹೊಸ ಬದಲಾವಣೆಗೆ ಕಾರಣವಾಗಿದೆ. ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸ್ಟಾರ್ಟ್ ಅಪ್ ಕಂಪನಿಗಳು ಸಾಕಷ್ಟು ಸದ್ದು ಮಾಡುತ್ತಿದ್ದು, ಇದೀಗ ದೆಹಲಿಯ ಕೊಮಾಕಿ ಕಂಪನಿಯು ವಿವಿಧ ಮಾದರಿಯ ಮೂರು ಹೊಸ ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಪ್ರತಿ ಚಾರ್ಜ್ 150 ಕಿ.ಮೀ ಮೈಲೇಜ್ ನೀಡುವ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದೆ ಕೊಮಾಕಿ

ದೆಹಲಿಯಲ್ಲಿ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿರುವ ಕೊಮಾಕಿ ಕಂಪನಿಯು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದ್ದು, ಮಾಹಿತಿಗಳ ಪ್ರಕಾರ ಇದೇ ತಿಂಗಳಾಂತ್ಯಕ್ಕೆ ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳನ್ನು ಅನಾವರಣಗೊಳಿಸಲಿದೆ.

ಪ್ರತಿ ಚಾರ್ಜ್ 150 ಕಿ.ಮೀ ಮೈಲೇಜ್ ನೀಡುವ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದೆ ಕೊಮಾಕಿ

ಹೊಸ ಹೈ ಸ್ಪೀಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಕುರಿತಾಗಿ ಕೊಮಾಕಿ ಕಂಪನಿಯು ಕೆಲವು ಮಾಹಿತಿ ಹಂಚಿಕೊಂಡಿದ್ದು, ಹೊಸ ದ್ವಿಚಕ್ರ ವಾಹನಗಳ ಪ್ರಮುಖ ತಾಂತ್ರಿಕ ಅಂಶಗಳು ಎಲೆಕ್ಟ್ರಿಕ್ ವಾಹನ ಖರೀದಿದಾರರ ಪ್ರಮುಖ ಆಕರ್ಷಣೆಯಾಗಲಿವೆ.

ಪ್ರತಿ ಚಾರ್ಜ್ 150 ಕಿ.ಮೀ ಮೈಲೇಜ್ ನೀಡುವ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದೆ ಕೊಮಾಕಿ

ಕೊಮಾಕಿ ಕಂಪನಿಯು ಆರಂಭಿಕವಾಗಿ ಕೊಮಾಕಿ ಟಿಎನ್95, ಕೊಮಾಕಿ ಎಂ5 ಮತ್ತು ಕೊಮಾಕಿ ಎಸ್ಇ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಎಲೆಕ್ಟ್ರಿಕ್ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಕೊಮಾಕಿ ಟಿಎನ್95 ಸ್ಕೂಟರ್ ಮಾದರಿಯು ಕಂಪನಿಯು ಹೈ ಎಂಡ್ ಪ್ರೀಮಿಯಂ ಮಾದರಿಯಾಗಿದೆ. ಹಾಗೆಯೇ ಕೊಮಾಕಿ ಎಸ್ಇ ಸ್ಕೂಟರ್ ಮಾದರಿಯು ಕೂಡಾ ಅತ್ಯುತ್ತಮ ತಾಂತ್ರಿಕ ಅಂಶಗಳನ್ನು ಹೊಂದಿದ್ದು, ಕೊಮಾಕಿ ಎಂ5 ಆವೃತ್ತಿಯು ಎಲೆಕ್ಟ್ರಿಕ್ ಬೈಕ್ ಮಾದರಿಯಾಗಿದೆ.

ಪ್ರತಿ ಚಾರ್ಜ್ 150 ಕಿ.ಮೀ ಮೈಲೇಜ್ ನೀಡುವ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದೆ ಕೊಮಾಕಿ

ಟಿಎನ್95 ಮತ್ತು ಕೊಮಾಕಿ ಎಸ್ಇ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳು ವಿವಿಧ ರೈಡಿಂಗ್ ಮೋಡ್‌ಗಳೊಂದಿಗೆ ಪ್ರತಿ ಚಾರ್ಜ್‌ಗೆ ಕನಿಷ್ಠ 100 ಕಿ.ಮೀ ನಿಂದ ಗರಿಷ್ಠ 150 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ತೆಗೆದುಹಾಕಬಹುದಾದ ಲೀ ಅಯಾನ್ ಬ್ಯಾಟರಿ ಸೌಲಭ್ಯ ಹೊಂದಿವೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಪ್ರತಿ ಚಾರ್ಜ್ 150 ಕಿ.ಮೀ ಮೈಲೇಜ್ ನೀಡುವ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದೆ ಕೊಮಾಕಿ

ಇನ್ನು ಕೊಮಾಕಿ ಎಂ5 ಎಲೆಕ್ಟ್ರಿಕ್ ಬೈಕ್ ಮಾದರಿಯು ಅತ್ಯುತ್ತಮ ಫೀಚರ್ಸ್ ಮೂಲಕ ಆಕರ್ಷಕ ವಿನ್ಯಾಸ ಹೊಂದಿದ್ದು, ಈ ಇವಿ ಬೈಕ್ ಮಾದರಿಯು ಪ್ರತಿ ಚಾರ್ಜ್‌ಗೆ 100ರಿಂದ 120 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಪ್ರತಿ ಚಾರ್ಜ್ 150 ಕಿ.ಮೀ ಮೈಲೇಜ್ ನೀಡುವ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದೆ ಕೊಮಾಕಿ

ಪ್ರತಿ ಎಲೆಕ್ಟ್ರಿಕ್ ವಾಹನ ಮಾದರಿಯಲ್ಲೂ ಕನೆಕ್ಟೆಡ್ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿರುವ ಕೊಮಾಕಿ ಕಂಪನಿಯು ಹೊಸ ವಾಹನಗಳಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸುತ್ತಿದ್ದು, ದೆಹಲಿಯಲ್ಲಿ ಮಾತ್ರವಲ್ಲದೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹೊಸ ವಾಹನ ಮಾರಾಟ ಪ್ರಕ್ರಿಯೆ ಚಾಲನೆ ನೀಡಲಾಗುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಪ್ರತಿ ಚಾರ್ಜ್ 150 ಕಿ.ಮೀ ಮೈಲೇಜ್ ನೀಡುವ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದೆ ಕೊಮಾಕಿ

ಕೊಮಾಕಿ ಕಂಪನಿಯು ಭಾರತದ ಖ್ಯಾತ ಹೂಡಿಕೆ ಕಂಪನಿಗಳಲ್ಲಿ ಒಂದಾಗಿದ್ದು, ಕಳೆದ 34 ವರ್ಷಗಳಿಂದ ಭಾರತದಲ್ಲಿ ಹಲವಾರು ಯೋಜನೆಗಳಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದೆ. ಇದೀಗ ಮೊದಲ ಬಾರಿಗೆ ಆಟೋ ಉತ್ಪಾದನೆಯಲ್ಲೂ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಶೀಘ್ರದಲ್ಲೇ ದೇಶಾದ್ಯಂತ ತನ್ನ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಲು ಸಿದ್ದತೆ ನಡೆಸಿದೆ.

Article Published On: Thursday, January 21, 2021, 8:45 [IST]
English summary
Komaki Introduced New 3 High Speed Electric Scooters In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+