Just In
- 9 min ago
ವಿನೂತನ ವೈಶಿಷ್ಟ್ಯತೆಯೊಂದಿಗೆ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾದ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350
- 46 min ago
ಹೊಸ ಜೀಪ್ ರ್ಯಾಂಗ್ಲರ್ ರೂಬಿಕಾನ್ 392 ಲಾಂಚ್ ಎಡಿಷನ್ ಬಿಡುಗಡೆ
- 1 hr ago
ಸ್ಪ್ಲೆಂಡರ್ ಬೈಕುಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ ಹೀರೋ ಮೋಟೊಕಾರ್ಪ್
- 2 hrs ago
2021ರ ಸ್ವಿಫ್ಟ್ ಕಾರಿನ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಾರುತಿ ಸುಜುಕಿ
Don't Miss!
- News
ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ
- Movies
ನಿರ್ದೇಶಕನಿಗೆ ಅವಮಾನ: ಸ್ಟಾರ್ ನಟ ಆಗಿದ್ರೆ ಸುಮ್ಮನೆ ಬಿಡುತ್ತಿದ್ರಾ? ಚಂದ್ರಶೇಖರ್ ಅಸಮಾಧಾನ
- Finance
ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿ ಚಾರ್ಜ್ 150 ಕಿ.ಮೀ ಮೈಲೇಜ್ ನೀಡುವ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದೆ ಕೊಮಾಕಿ
ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹಲವು ಸ್ಟಾರ್ಟ್ ಅಪ್ ಕಂಪನಿಗಳು ವಿವಿಧ ಮಾದರಿಯ ಹೊಸ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ದೆಹಲಿ ಮೂಲದ ಕೆಬಿಎಲ್ ಕೊಮಾಕಿ ಕಂಪನಿಯು ಸಹ ಮೊದಲ ಬಾರಿಗೆ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ಭಾರೀ ಪ್ರಮಾಣದ ಬಂಡವಾಳದೊಂದಿಗೆ ಹೊಸ ಯೋಜನೆಗೆ ಚಾಲನೆ ನೀಡಿದೆ.

ಇಂಧನ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿರುವುದು ಮಾರುಕಟ್ಟೆಯಲ್ಲಿ ಹೊಸ ಬದಲಾವಣೆಗೆ ಕಾರಣವಾಗಿದೆ. ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸ್ಟಾರ್ಟ್ ಅಪ್ ಕಂಪನಿಗಳು ಸಾಕಷ್ಟು ಸದ್ದು ಮಾಡುತ್ತಿದ್ದು, ಇದೀಗ ದೆಹಲಿಯ ಕೊಮಾಕಿ ಕಂಪನಿಯು ವಿವಿಧ ಮಾದರಿಯ ಮೂರು ಹೊಸ ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ದೆಹಲಿಯಲ್ಲಿ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿರುವ ಕೊಮಾಕಿ ಕಂಪನಿಯು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದ್ದು, ಮಾಹಿತಿಗಳ ಪ್ರಕಾರ ಇದೇ ತಿಂಗಳಾಂತ್ಯಕ್ಕೆ ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳನ್ನು ಅನಾವರಣಗೊಳಿಸಲಿದೆ.

ಹೊಸ ಹೈ ಸ್ಪೀಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಕುರಿತಾಗಿ ಕೊಮಾಕಿ ಕಂಪನಿಯು ಕೆಲವು ಮಾಹಿತಿ ಹಂಚಿಕೊಂಡಿದ್ದು, ಹೊಸ ದ್ವಿಚಕ್ರ ವಾಹನಗಳ ಪ್ರಮುಖ ತಾಂತ್ರಿಕ ಅಂಶಗಳು ಎಲೆಕ್ಟ್ರಿಕ್ ವಾಹನ ಖರೀದಿದಾರರ ಪ್ರಮುಖ ಆಕರ್ಷಣೆಯಾಗಲಿವೆ.

ಕೊಮಾಕಿ ಕಂಪನಿಯು ಆರಂಭಿಕವಾಗಿ ಕೊಮಾಕಿ ಟಿಎನ್95, ಕೊಮಾಕಿ ಎಂ5 ಮತ್ತು ಕೊಮಾಕಿ ಎಸ್ಇ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಎಲೆಕ್ಟ್ರಿಕ್ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಕೊಮಾಕಿ ಟಿಎನ್95 ಸ್ಕೂಟರ್ ಮಾದರಿಯು ಕಂಪನಿಯು ಹೈ ಎಂಡ್ ಪ್ರೀಮಿಯಂ ಮಾದರಿಯಾಗಿದೆ. ಹಾಗೆಯೇ ಕೊಮಾಕಿ ಎಸ್ಇ ಸ್ಕೂಟರ್ ಮಾದರಿಯು ಕೂಡಾ ಅತ್ಯುತ್ತಮ ತಾಂತ್ರಿಕ ಅಂಶಗಳನ್ನು ಹೊಂದಿದ್ದು, ಕೊಮಾಕಿ ಎಂ5 ಆವೃತ್ತಿಯು ಎಲೆಕ್ಟ್ರಿಕ್ ಬೈಕ್ ಮಾದರಿಯಾಗಿದೆ.

ಟಿಎನ್95 ಮತ್ತು ಕೊಮಾಕಿ ಎಸ್ಇ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳು ವಿವಿಧ ರೈಡಿಂಗ್ ಮೋಡ್ಗಳೊಂದಿಗೆ ಪ್ರತಿ ಚಾರ್ಜ್ಗೆ ಕನಿಷ್ಠ 100 ಕಿ.ಮೀ ನಿಂದ ಗರಿಷ್ಠ 150 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ತೆಗೆದುಹಾಕಬಹುದಾದ ಲೀ ಅಯಾನ್ ಬ್ಯಾಟರಿ ಸೌಲಭ್ಯ ಹೊಂದಿವೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಇನ್ನು ಕೊಮಾಕಿ ಎಂ5 ಎಲೆಕ್ಟ್ರಿಕ್ ಬೈಕ್ ಮಾದರಿಯು ಅತ್ಯುತ್ತಮ ಫೀಚರ್ಸ್ ಮೂಲಕ ಆಕರ್ಷಕ ವಿನ್ಯಾಸ ಹೊಂದಿದ್ದು, ಈ ಇವಿ ಬೈಕ್ ಮಾದರಿಯು ಪ್ರತಿ ಚಾರ್ಜ್ಗೆ 100ರಿಂದ 120 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಪ್ರತಿ ಎಲೆಕ್ಟ್ರಿಕ್ ವಾಹನ ಮಾದರಿಯಲ್ಲೂ ಕನೆಕ್ಟೆಡ್ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿರುವ ಕೊಮಾಕಿ ಕಂಪನಿಯು ಹೊಸ ವಾಹನಗಳಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸುತ್ತಿದ್ದು, ದೆಹಲಿಯಲ್ಲಿ ಮಾತ್ರವಲ್ಲದೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹೊಸ ವಾಹನ ಮಾರಾಟ ಪ್ರಕ್ರಿಯೆ ಚಾಲನೆ ನೀಡಲಾಗುತ್ತಿದೆ.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಕೊಮಾಕಿ ಕಂಪನಿಯು ಭಾರತದ ಖ್ಯಾತ ಹೂಡಿಕೆ ಕಂಪನಿಗಳಲ್ಲಿ ಒಂದಾಗಿದ್ದು, ಕಳೆದ 34 ವರ್ಷಗಳಿಂದ ಭಾರತದಲ್ಲಿ ಹಲವಾರು ಯೋಜನೆಗಳಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದೆ. ಇದೀಗ ಮೊದಲ ಬಾರಿಗೆ ಆಟೋ ಉತ್ಪಾದನೆಯಲ್ಲೂ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಶೀಘ್ರದಲ್ಲೇ ದೇಶಾದ್ಯಂತ ತನ್ನ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಲು ಸಿದ್ದತೆ ನಡೆಸಿದೆ.