ಶೀಘ್ರದಲ್ಲೇ ಹೊಸ ಕ್ರೂಸರ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡಲಿದೆ Komaki Electric
ಹೆಚ್ಚುತ್ತಿರುವ ಇಂಧನ ಬೆಲೆಗಳಿಂದಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಈಗಾಗಲೇ ಫೇಮ್ 2 ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ.

ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಜೊತಗೆ ರಾಜ್ಯ ಸರ್ಕಾರಗಳು ಸಹ ಇವಿ ವಾಹನ ಬಳಕೆ ಹೆಚ್ಚಳಕ್ಕೆ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿವೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿದಾರರನ್ನು ಉತ್ತೇಜಿಸಲು ಗರಿಷ್ಠ ಸಬ್ಸಡಿ ಮತ್ತು ನೋಂದಣಿ ಶುಲ್ಕ ಮನ್ನಾದಂತಹ ಯೋಜನೆಗಳನ್ನು ಪ್ರಕಟಿಸಿ ಇವಿ ವಾಹನ ಬಳಕೆಯನ್ನು ಉತ್ತೇಜಿಸಲಾಗುತ್ತಿದ್ದು, ಹೊಸ ಯೋಜನೆಗಳಿಗೆ ಪೂರಕವಾಗಿ ವಿವಿಧ ಸ್ಟಾರ್ಟ್ಅಪ್ ಕಂಪನಿಗಳು ಹೊಸ ಮಾದರಿಯ ಇವಿ ವಾಹನಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ.

ದೆಹಲಿ ಮೂಲದ ಕೊಮಾಕಿ ಎಲೆಕ್ಟ್ರಿಕ್ ಕಂಪನಿಯು ಕೂಡಾ ತನ್ನ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ ಮಾಡಿದೆ.

ಕೊಮಾಕಿ ಕಂಪನಿಯು ಶೀಘ್ರದಲ್ಲೇ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಮುಂದಿನ ಹೊಸ ಇವಿ ವಾಹನ ಮಾದರಿಯಾಗಿ ಕ್ರೂಸರ್ ಬೈಕ್ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಎಲೆಕ್ಟ್ರಿಕ್ ಕ್ರೂಸರ್ ಬೈಕ್ ಮಾದರಿಯ ನ್ಯೂ ಜನರೇಷನ್ ಗ್ರಾಹಕರ ಬೇಡಿಕೆಯೆಂತೆ ಹೊಸ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪ್ರೇರಣೆಯೊಂದಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಬೈಕ್ ಮಾದರಿಯ ಮೊದಲ ಟೀಸರ್ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

ಕೊಮಾಕಿ ಕಂಪನಿಯು ಸದ್ಯ ಲೋ ಸ್ಪೀಡ್ ಮತ್ತು ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದ್ದು, ಲೋ-ಸ್ಪೀಡ್ ಮಾದರಿಗಳಲ್ಲಿ ಎಕ್ಸ್‌ಜಿಟಿ ಸರಣಿಗಳನ್ನು ಮತ್ತು ಹೈ ಸ್ಪೀಡ್ ಮಾದರಿಗಳಲ್ಲಿ ಟಿಎನ್ 95, ಎಂ-5, ಎಸ್ಇ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ.

ಲೋ ಸ್ಪೀಡ್ ಸ್ಕೂಟರ್‌ಗಳಲ್ಲಿ ಎಕ್ಸ್‌ಜಿಟಿ ಸರಣಿಯ ಎಕ್ಸ್ ಒನ್ ಮಾದರಿಯು ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಲೀಡ್ ಆ್ಯಸಿಡ್ ಮತ್ತು ಲೀಥಿಯಂ ಅಯಾಲ್ ಬ್ಯಾಟರಿ ಆಯ್ಕೆ ಹೊಂದಿರುವ ಈ ಸ್ಕೂಟರ್ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕೊಮಾಕಿ ಕಂಪನಿಯು ವಿವಿಧ ಮಾದರಿಯೊಂದಿಗೆ ಮೂರು ಹೊಸ ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಜೊತೆಗೆ ಒಂದು ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಮಾರುಕಟ್ಟೆಗೆ ಪರಿಚಯಿಸಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಟಿಎನ್95 ಸ್ಕೂಟರ್, ಕೊಮಾಕಿ ಎಂ5 ಬೈಕ್ ಮತ್ತು ಕೊಮಾಕಿ ಎಸ್ಇ ಸ್ಕೂಟರ್ ಮಾದರಿಗಳನ್ನು ಮಾರಾಟದಲ್ಲೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಹಾಗೆಯೇ ಕೊಮಾಕಿ ಎಸ್ಇ ಸ್ಕೂಟರ್ ಮಾದರಿಯು ಕೂಡಾ ಅತ್ಯುತ್ತಮ ತಾಂತ್ರಿಕ ಅಂಶಗಳೊಂದಿಗೆ ಭಾರೀ ಬೇಡಿಕೆಯ ನೀರಿಕ್ಷೆಯಲ್ಲಿದ್ದು, ಸದ್ಯ ಕೆಲವೇ ನಗರಗಳಲ್ಲಿ ಮಾತ್ರ ಮಾರಾಟ ಹೊಂದಿರುವ ಕಂಪನಿಯು ಶೀಘ್ರದಲ್ಲೇ ಹೊಸ ಉತ್ಪನ್ನದೊಂದಿಗೆ ಪ್ರಮುಖ ನಗರಗಳಲ್ಲಿ ವಾಹನ ಮಾರಾಟ ಆರಂಭಕ್ಕೆ ಸಿದ್ದವಾಗುತ್ತಿದೆ.

ಕೊಮಾಕಿ ಟಿಎನ್95 ಸ್ಕೂಟರ್ ಮಾದರಿಯು ಸದ್ಯ ಕಂಪನಿಯು ಹೈ ಎಂಡ್ ಪ್ರೀಮಿಯಂ ಮಾದರಿಯಾಗಿದ್ದು, ಕಂಪನಿಯು ಇತ್ತೀಚೆಗೆ ಎಂಎಕ್ಸ್3 ಎನ್ನುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಬಿಡುಗಡೆ ಮಾಡಿತ್ತು.

ಸಾಮಾನ್ಯ ಮಾದರಿಯ 125 ಸಿಸಿ ಬೈಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿರುವ ಎಂಎಕ್ಸ್3 ಇವಿ ಬೈಕ್ ಮಾದರಿಯು ಪ್ರತಿ ಚಾರ್ಜ್‌ಗೆ ವಿವಿಧ ರೈಡಿಂಗ್ ಮೋಡ್‌ಗಳಿಗೆ ಅನುಗುಣವಾಗಿ 85 ಕಿ.ಮೀ ನಿಂದ 100 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಹೊಸ ಇವಿ ಬೈಕ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 95 ಸಾವಿರಕ್ಕೆ ನಿಗದಿಪಡಿಸಲಾಗಿದೆ.

ಹೊಸ ಬೈಕ್ ಮಾದರಿಯು ಒಂದು ಬಾರಿ ಪೂರ್ಣ 3 ರಿಂದ ನಾಲ್ಕು ಗಂಟೆಗಳ ಸಮಯಾವಕಾಶ ತೆಗೆದುಕೊಳ್ಳಲಿದ್ದು, ಪೂರ್ಣ ಪ್ರಮಾಣದಲ್ಲಿ ಒಂದು ಬಾರಿ ಚಾರ್ಜಿಂಗ್ ಮಾಡಲು 1.5 ಯುನಿಟ್ ವಿದ್ಯುತ್ ಬಳಕೆ ಮಾಡುತ್ತದೆ.

ಒಂದು ಬಾರಿ ಚಾರ್ಜ್ ಮಾಡಲು ಗರಿಷ್ಠ ರೂ.20 ವೆಚ್ಚದೊಂದಿಗೆ 100 ಕಿ.ಮೀ ಮೈಲೇಜ್ ಹಿಂಪಡೆದುಕೊಳ್ಳಬಹುದಾಗಿದ್ದು, ಪೆಟ್ರೋಲ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಉಳಿತಾಯವಾಗಲಿದೆ.


Click it and Unblock the Notifications








