ಇವಿ ವಾಹನಗಳಿಗೆ ಹೆಚ್ಚಿದ ಬೇಡಿಕೆ- 25 ಸಾವಿರ ಯುನಿಟ್ ಇವಿ ಸ್ಕೂಟರ್ ಮಾರಾಟ ಮಾಡಿದ Komaki

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಈಗಾಗಲೇ ಫೇಮ್ 2 ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಜೊತಗೆ ರಾಜ್ಯ ಸರ್ಕಾರಗಳು ಸಹ ಇವಿ ವಾಹನ ಬಳಕೆ ಹೆಚ್ಚಳಕ್ಕೆ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿವೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ದೆಹಲಿ ಸರ್ಕಾರವು ಇತರೆ ರಾಜ್ಯಗಳಿಗಳಿಂತಲೂ ಹೊಸ ಇವಿ ನೀತಿ ಅಡಿಯಲ್ಲಿ ಪರಿಸರಕ್ಕೆ ಪೂರಕವಾದ ವಾಹನಗಳ ನೋಂದಣಿಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿದಾರರನ್ನು ಉತ್ತೇಜಿಸಲು ಗರಿಷ್ಠ ಸಬ್ಸಡಿ ಮತ್ತು ನೋಂದಣಿ ಶುಲ್ಕ ಮನ್ನಾದಂತಹ ಯೋಜನೆಗಳನ್ನು ಪ್ರಕಟಿಸಿ ಇವಿ ವಾಹನ ಬಳಕೆಯನ್ನು ಉತ್ತೇಜಿಸುತ್ತಿದೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ಹೊಸ ಸಬ್ಸಡಿ ಯೋಜನೆಯ ಪರಿಣಾಮ ದೆಹಲಿಯಲ್ಲಿ ಮಾತ್ರವಲ್ಲ ಇತರೆ ರಾಜ್ಯಗಳಲ್ಲೂ ಇವಿ ವಾಹನಗಳ ನೋಂದಣಿ ತಿಂಗಳಿನಿಂದ ತಿಂಗಳಿಗೆ ದ್ವಿಗುಣಗೊಳ್ಳುತ್ತಿದ್ದು, ಕಳೆದ ಒಂದೂವರೆ ವರ್ಷದಲ್ಲಿ ಎಲೆಕ್ಟ್ರಿಕ್ ವಾಹನ ಮಾರಾಟವು ಸಾಕಷ್ಟು ಏರಿಕೆಯಾಗಿದೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ವಿವಿಧ ರಾಜ್ಯಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ಸಬ್ಸಡಿ ಜೊತೆಗೆ ರಾಜ್ಯ ಮಟ್ಟದಲ್ಲೂ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ಇವಿ ವಾಹನಗಳ ನೋಂದಣಿ ಸಂಖ್ಯೆಯು ಹೆಚ್ಚಿದೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ದೆಹಲಿ ಮೂಲದ ಕೊಮಾಕಿ ಎಲೆಕ್ಟ್ರಿಕ್ ಕಂಪನಿಯು ಕೂಡಾ ತನ್ನ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ ಮಾಡಿದೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ಕೊಮಾಕಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಲೋ ಸ್ಪೀಡ್ ಮತ್ತು ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದ್ದು, ಲೋ-ಸ್ಪೀಡ್ ಮಾದರಿಗಳಲ್ಲಿ ಎಕ್ಸ್‌ಜಿಟಿ ಸರಣಿಗಳನ್ನು ಮತ್ತು ಹೈ ಸ್ಪೀಡ್ ಮಾದರಿಗಳಲ್ಲಿ ಟಿಎನ್ 95, ಎಂ-5, ಎಸ್ಇ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ಲೋ ಸ್ಪೀಡ್ ಸ್ಕೂಟರ್‌ಗಳಲ್ಲಿ ಎಕ್ಸ್‌ಜಿಟಿ ಸರಣಿಯ ಎಕ್ಸ್ ಒನ್ ಮಾದರಿಯು ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಲೀಡ್ ಆ್ಯಸಿಡ್ ಮತ್ತು ಲೀಥಿಯಂ ಅಯಾಲ್ ಬ್ಯಾಟರಿ ಆಯ್ಕೆ ಹೊಂದಿರುವ ಈ ಸ್ಕೂಟರ್ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ಕೊಮಾಕಿ ಕಂಪನಿಯು ವಿವಿಧ ಮಾದರಿಯೊಂದಿಗೆ ಮೂರು ಹೊಸ ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಜೊತೆಗೆ ಒಂದು ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಮಾರುಕಟ್ಟೆಗೆ ಪರಿಚಯಿಸಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಟಿಎನ್95 ಸ್ಕೂಟರ್, ಕೊಮಾಕಿ ಎಂ5 ಬೈಕ್ ಮತ್ತು ಕೊಮಾಕಿ ಎಸ್ಇ ಸ್ಕೂಟರ್ ಮಾದರಿಗಳನ್ನು ಮಾರಾಟದಲ್ಲೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ಹಾಗೆಯೇ ಕೊಮಾಕಿ ಎಸ್ಇ ಸ್ಕೂಟರ್ ಮಾದರಿಯು ಕೂಡಾ ಅತ್ಯುತ್ತಮ ತಾಂತ್ರಿಕ ಅಂಶಗಳೊಂದಿಗೆ ಭಾರೀ ಬೇಡಿಕೆಯ ನೀರಿಕ್ಷೆಯಲ್ಲಿದ್ದು, ಸದ್ಯ ಕೆಲವೇ ನಗರಗಳಲ್ಲಿ ಮಾತ್ರ ಮಾರಾಟ ಹೊಂದಿರುವ ಕಂಪನಿಯು ಶೀಘ್ರದಲ್ಲೇ ಪ್ರಮುಖ ನಗರಗಳಲ್ಲಿ ವಾಹನ ಮಾರಾಟಕ್ಕೆ ಸಿದ್ದವಾಗುತ್ತಿದೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ಕೊಮಾಕಿ ಟಿಎನ್95 ಸ್ಕೂಟರ್ ಮಾದರಿಯು ಸದ್ಯ ಕಂಪನಿಯು ಹೈ ಎಂಡ್ ಪ್ರೀಮಿಯಂ ಮಾದರಿಯಾಗಿದ್ದು, ಕಂಪನಿಯು ಇತ್ತೀಚೆಗೆ ಎಂಎಕ್ಸ್3 ಎನ್ನುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಬಿಡುಗಡೆ ಮಾಡಿತ್ತು.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ಸಾಮಾನ್ಯ ಮಾದರಿಯ 125 ಸಿಸಿ ಬೈಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿರುವ ಎಂಎಕ್ಸ್3 ಇವಿ ಬೈಕ್ ಮಾದರಿಯು ಪ್ರತಿ ಚಾರ್ಜ್‌ಗೆ ವಿವಿಧ ರೈಡಿಂಗ್ ಮೋಡ್‌ಗಳಿಗೆ ಅನುಗುಣವಾಗಿ 85 ಕಿ.ಮೀ ನಿಂದ 100 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಹೊಸ ಇವಿ ಬೈಕ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 95 ಸಾವಿರಕ್ಕೆ ನಿಗದಿಪಡಿಸಲಾಗಿದೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ಹೊಸ ಬೈಕ್ ಮಾದರಿಯು ಒಂದು ಬಾರಿ ಪೂರ್ಣ 3 ರಿಂದ ನಾಲ್ಕು ಗಂಟೆಗಳ ಸಮಯಾವಕಾಶ ತೆಗೆದುಕೊಳ್ಳಲಿದ್ದು, ಪೂರ್ಣ ಪ್ರಮಾಣದಲ್ಲಿ ಒಂದು ಬಾರಿ ಚಾರ್ಜಿಂಗ್ ಮಾಡಲು 1.5 ಯುನಿಟ್ ವಿದ್ಯುತ್ ಬಳಕೆ ಮಾಡುತ್ತದೆ.

ಇವಿ ವಾಹನ ಮಾರಾಟ ಆರಂಭಿಸಿದ ನಂತರ ಇದುವರೆಗೆ 25 ಸಾವಿರ ಯುನಿಟ್ ಮಾರಾಟ

ಹೀಗಾಗಿ ಒಂದು ಬಾರಿ ಚಾರ್ಜ್ ಮಾಡಲು ವಿವಿಧ ಪ್ರದೇಶಕ್ಕೆ ಮತ್ತು ಯುನಿಟ್ ದರಗಳಿಗೆ ಅನುಗುಣವಾಗಿ ಗರಿಷ್ಠ ರೂ.20 ವೆಚ್ಚ ಮಾಡಿದ್ದಲ್ಲಿ 100 ಕಿ.ಮೀ ಮೈಲೇಜ್ ಹಿಂಪಡೆದುಕೊಳ್ಳಬಹುದಾಗಿದ್ದು, ಪೆಟ್ರೋಲ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಉಳಿತಾಯವಾಗಲಿದೆ.

Most Read Articles

Kannada
English summary
Komaki xgt x1 ev scooter reached 25000 unit sales milestone
Story first published: Saturday, October 2, 2021, 0:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X