Just In
- 1 hr ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 3 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- News
ಪಶ್ಚಿಮ ಬಂಗಾಳ ಕಾಶ್ಮೀರವಾದರೆ ತಪ್ಪೇನು ಹೇಳಿ; ಸುವೇಂದುಗೆ ಒಮರ್ ತಿರುಗೇಟು
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Sports
ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್ಸಿಬಿಗೆ ಮುಂಬೈ ಎದುರಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಥಳೀಯ ಬಿಡಿಭಾಗಗಳ ಬಳಕೆಗೆ ಆದ್ಯತೆ- ಬೆನೆಲ್ಲಿ ಇಂಪೀರಿಯಲ್ 400 ಬೆಲೆಯಲ್ಲಿ ಇಳಿಕೆ..!
ಬೆನೆಲ್ಲಿ ಇಂಡಿಯಾ ಕಂಪನಿಯು ಹೊಸ ಉತ್ಪನ್ನಗಳೊಂದಿಗೆ ಸ್ಥಳೀಯವಾಗಿ ಲಭ್ಯವಾಗುವ ಬಿಡಿಭಾಗಗಳ ಬಳಕೆಗೆ ಆದ್ಯತೆ ನೀಡುತ್ತಿದ್ದು, ಹೊಸ ಯೋಜನೆಯ ಪರಿಣಾಮ ಬೈಕ್ ಉತ್ಪಾದನಾ ವೆಚ್ಚದಲ್ಲಿ ಸಾಕಷ್ಟು ಇಳಿಕೆಯಾಗಿರುವುದನ್ನು ಒಪ್ಪಿಕೊಂಡಿದೆ.

ಆತ್ಮ ನಿರ್ಭರ ಭಾರತ ಯೋಜನೆ ಅಡಿ ಹಲವು ವಾಹನ ಉತ್ಪಾದನಾ ಕಂಪನಿಗಳು ಸ್ಥಳೀಯವಾಗಿ ಲಭ್ಯವಾಗುವ ಆಟೋ ಬಿಡಿಭಾಗಗಳಿಗೆ ಆದ್ಯತೆ ನೀಡುತ್ತಿರುವ ಪರಿಣಾಮ ಉತ್ಪಾದನಾ ವೆಚ್ಚದಲ್ಲಿ ಇಳಿಕೆ ಕಂಡುಬರುತ್ತಿದ್ದು, ಬೆನೆಲ್ಲಿ ಇಂಡಿಯಾ ಕಂಪನಿಯು ಸಹ ತನ್ನ ಇಂಪೀರಿಯಲ್ 400 ಕ್ಲಾಸಿಕ್ ಬೈಕಿನ ಬೆಲೆಯಲ್ಲಿ ರೂ.10 ಸಾವಿರ ಇಳಿಕೆ ಮಾಡುವ ಮೂಲಕ ಕೇಂದ್ರದ ಹೊಸ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಬೆನೆಲ್ಲಿ ಕಂಪನಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.99 ಲಕ್ಷ ಬೆಲೆ ಹೊಂದಿದ್ದ ಇಂಪೀರಿಯಲ್ 400 ಕ್ಲಾಸಿಕ್ ಬೈಕಿನ ಬೆಲೆಯನ್ನು ರೂ. 1.89 ಲಕ್ಷಕ್ಕೆ ಇಳಿಕೆ ಮಾಡಿದ್ದು, ಮುಂಬರುವ ದಿನಗಳಲ್ಲಿ ಭಾರತದಲ್ಲೇ ಪೂರ್ಣ ಪ್ರಮಾಣ ಉತ್ಪಾದನೆಯಾದ ವಿವಿಧ ಹೊಸ ಬೈಕ್‌ಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಮಾಹಾವೀರ್ ಗ್ರೂಪ್ ಜೊತೆಗೂಡಿ ಕಾರ್ಯನಿರ್ವಹಿಸುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯು ಮಧ್ಯಮ ಕ್ರಮಾಂಕದ ಸ್ಟ್ರೀಟ್ ಬೈಕ್ ಮಾದರಿಗಳೊಂದಿಗೆ ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟಕ್ಕೂ ಹೆಚ್ಚಿನ ಒತ್ತು ನೀಡುತ್ತಿದ್ದು, ಇಂಪೀರಿಯಲ್ 400 ನಂತರ ನಂತರ ಮತ್ತಷ್ಟು ಹೊಸ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎಪ್ರಿಲ್ 1ರಿಂದ ಜಾರಿಗೆ ಬಂದಿರುವ ಹೊಸ ಬಿಎಸ್-6 ಎಮಿಷನ್ ಪ್ರಕಾರ ತನ್ನ ಪ್ರಮುಖ ಬೈಕ್ ಮಾದರಿಗಳನ್ನು ಉನ್ನತೀಕರಿಸಿರುವ ಬೆನೆಲ್ಲಿ ಕಂಪನಿಯು ಇಂಪೀರಿಯರ್ 400 ಬೈಕ್ ಮಾದರಿಯ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ರಾಯಲ್ ಎನ್‌ಫೀಲ್ಡ್ 350 ಬೈಕ್‌ಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗಿರುವ ಹೊಸ ಬೈಕ್ ಮಾದರಿಯು ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿದ್ದು, ಇದೀಗ ಬೆಲೆ ಇಳಿಕೆ ಮಾಡಿರುವುದು ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ.

ಬಿಎಸ್-6 ವೈಶಿಷ್ಟ್ಯತೆ ಹೊಂದಿರುವ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಮಾದರಿಯು 374-ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‌ನೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 20-ಬಿಎಚ್‌ಪಿ, 29-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಕ್ಲಾಸಿಕ್ ಲುಕ್ ನೀಡುವುದಕ್ಕಾಗಿ ವಿಶೇಷ ವಿನ್ಯಾಸವುಳ್ಳ ಹೆಡ್‌ಲ್ಯಾಂಪ್, ಟ್ವಿನ್ ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್, ಹಿಂಭಾಗದಲ್ಲಿ ಡ್ಯುಯಲ್ ಶಾಕ್ ಅಬ್ಸಾರ್ಬರ್ ಅಳವಡಿಸಲಾಗಿದ್ದು, ಸುರಕ್ಷತೆಗಾಗಿ ಎಬಿಎಸ್, ಡ್ಯುಯಲ್ ಚಾನೆಲ್ ಡಿಸ್ಕ್ ಬ್ರೇಕ್‌ಗಳನ್ನು ನೀಡಲಾಗಿದೆ.

ಈ ಮೂಲಕ ಇಂಪೀರಿಯೆಲ್ 400 ಬೈಕ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜಾವಾ ಮತ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಮಾದರಿಗಳಿಗೆ ನೇರ ಪೈಪೋಟಿಯನ್ನು ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಬೈಕ್ ಮಾದರಿಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗಿವೆ.