ಭಾರತದಲ್ಲಿ ಬಿಡುಗಡೆಯಾಗಲಿರುವ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ವಿಶೇಷತೆಗಳು

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬೆನೆಲ್ಲಿ ತನ್ನ ಹೊಸ 502ಸಿ ಕ್ರೂಸರ್ ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ವಿಶೇಷತೆಗಳು

ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ಖರೀದಿಗಾಗಿ ಈಗಗಾಲೇ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ. ಈ ಕ್ರೂಸರ್ ಬೈಕನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.10,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಈ ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬ್ರ್ಯಾಂಡ್‌ನ 500 ಸಿಸಿ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಈ ಪ್ಲಾಟ್‌ಫಾರ್ಮ್ ಲಿಯಾನ್‍‍ಸಿನೊ ಮತ್ತು ಟಿಆರ್‌ಕೆ 502 ಮಾದರಿಗಳಿಗೂ ಕೂಡ ಆಧಾರವಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ವಿಶೇಷತೆಗಳು

ಈ ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ಲಿಯಾನ್‍‍ಸಿನೊ ಮಾದರಿಗಿಂತ ಮೇಲಿನ ಸ್ಥಾನದಲ್ಲಿ ಇರಿಸಬಹುದು. ಈ ಹೊಸ ಕ್ರೂಸರ್ ಬೈಕಿನ ಬೆಲೆಯು ಸುಮಾರು ರೂ.5 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ವಿಶೇಷತೆಗಳು

ವಿನ್ಯಾಸ

ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ವಿನ್ಯಾಸವು ಹೆಚ್ಚು ಜನಪ್ರಿಯವಾದ ಡುಕಾಟಿ ಡಯಾವೆಲ್ 1260 ನಿಂದ ಸ್ಫೂರ್ತಿ ಪಡೆದಿದೆ. ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕಿನ ಹೆಡ್‌ಲೈಟ್ ಹೊರತುಪಡಿಸಿ, ದೊಡ್ಡ ಫ್ಯೂಯಲ್ ಟ್ಯಾಂಕ್, ಸೀಟ್ ವಿನ್ಯಾಸ ಮತ್ತು ಸ್ಪ್ಲಿಟ್ ಟೈಲ್-ಲ್ಯಾಂಪ್‌ಗಳು ಸೇರಿದಂತೆ ಉಳಿದ ವಿನ್ಯಾಸವು ಡಯಾವೆಲ್ 1260 ಮದರಿಯಿಂದ ಸ್ಫೂರ್ತಿ ಪಡೆದಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ವಿಶೇಷತೆಗಳು

ಎಂಜಿನ್

ಈ ಕ್ರೂಸರ್ ಬೈಕಿನಲ್ಲಿ 500 ಸಿಸಿ ಲಿಕ್ವಿಡ್ ಕೂಲ್ಡ್ ಟ್ವಿನ್ ಎಂಜಿನ್ ಅನ್ನು ಹೊಂದಿದೆ, ಇದೇ ಎಂಜಿನ್ ಅನ್ನು ಬೆನೆಲ್ಲಿ ಲಿಯಾನ್‍‍ಸಿನೊ ಮತ್ತು ಟಿಆರ್‌ಕೆ 502 ಬೈಕ್ ಗಳಲ್ಲಿ ನೀಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ವಿಶೇಷತೆಗಳು

ಈ 500 ಸಿಸಿ ಎಂಜಿನ್ ಎಂಜಿನ್ 8,500 ಆರ್‌ಪಿಎಂನಲ್ಲಿ 47.6 ಬಿಹೆಚ್‍ಪಿ ಪವರ್ ಮತ್ತು 6,000 ಆರ್‌ಪಿಎಂನಲ್ಲಿ 46 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ವಿಶೇಷತೆಗಳು

ಇನ್ನು ಈ ಬೆನೆಲ್ಲಿ 502ಸಿ ಕ್ರೂಸರ್ 2,280 ಎಂಎಂ ಉದ್ದ ಮತ್ತು 1,140 ಎಂಎಂ ಎತ್ತರವನ್ನು ಹೊಂದಿದೆ. ಇನ್ನು ಈ ಬೈಕ್ 1,600 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಇನ್ನು ಈ ಬೈಕ್ 750 ಎಂಎ ಎತ್ತರದ ಸೀಟ್ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ವಿಶೇಷತೆಗಳು

ಸಸ್ಪೆಂಕ್ಷನ್ ಸೆಟಪ್

ಸ್ಟೀಲ್ ಟ್ರೆಲ್ಲಿಸ್ ಫ್ರೇಮ್ ಅನ್ನು ಆಧರಿಸಿರುವ ಬೆನೆಲ್ಲಿ 502ಸಿ ಕ್ರೂಸರ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಯುಎಸ್ಡಿ ಫ್ರಂಟ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಪ್ರಿಲೋಡ್-ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಸೆಟಪ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ವಿಶೇಷತೆಗಳು

ಬ್ರೇಕಿಂಗ್ ಸಿಸ್ಟಂ

ಈ ಕ್ರೂಸರ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 4-ಪಿಸ್ಟನ್ ಕ್ಯಾಲಿಪರ್‌ಗಳೊಂದಿಗೆ ಟ್ವಿನ್ 280 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ ಡ್ಯುಯಲ್ ಪಿಸ್ಟನ್ ಕ್ಯಾಲಿಪರ್‌ನೊಂದಿಗೆ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ವಿಶೇಷತೆಗಳು

ಇನ್ನು ಈ ಬೆನೆಲ್ಲಿ 502ಸಿ ಕ್ರೂಸರ್ ಬೈಕಿನಲ್ಲಿ 21-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ. ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ಈ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ. ಈ ಕ್ರೂಸರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕವಾಸಕಿ ವಲ್ಕನ್ ಎಸ್ ಬೈಕಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Benelli 502C Top Highlights. Read In Kannada.
Story first published: Monday, July 19, 2021, 21:28 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X