ಅತ್ಯಾಧುನಿಕ ಫೀಚರ್ಸ್‌ಗಳನ್ನು ಹೊಂದಿರುವ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕಿನ ವಿಶೇಷತೆಗಳು

ದೇಶದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ತನ್ನ ಹೊಸ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ. ಹೊಸ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕ್ ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಅತ್ಯಾಧುನಿಕ ಫೀಚರ್ಸ್‌ಗಳನ್ನು ಹೊಂದಿರುವ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕಿನ ವಿಶೇಷತೆಗಳು

ಈ ಹೊಸ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕ್ ಎರಡು ರೂಪಾಂತರಗಳನ್ನು ಹೊಂದಿದೆ. ಹೊಸ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕ್ ಡ್ರಮ್ ಮತ್ತು ಡಿಸ್ಕ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಈ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕ್ ಯುವಗ್ರಾಹಕರನ್ನು ಸೆಳೆಯುವಂತಹ ವಿನ್ಯಾಸ ಮತ್ತು ಉಪಯುಕ್ತವಾದ ಅತ್ಯಾಧುನಿಕ ತಂತ್ರಜ್ಙಾನಗಳನ್ನು ಹೊಂದಿವೆ. ಈ ಹೊಸ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕಿನ ವಿಶೇಷತೆಗಳು ಇಲ್ಲಿದೆ.

ಅತ್ಯಾಧುನಿಕ ಫೀಚರ್ಸ್‌ಗಳನ್ನು ಹೊಂದಿರುವ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕಿನ ವಿಶೇಷತೆಗಳು

ಎಂಜಿನ್

ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕ್ 125 ಸಿಸಿ ಬಿಎಸ್‌ವಿಐ ಎಂಜಿನ್‌ ಎಂಜಿನ್ ಅನ್ನು ಹೊಂದಿದೆ. ಇದರೊಂದಿಗೆ ಎಕ್ಸ್‌ಸೆನ್ಸ್ ಪ್ರೋಗ್ರಾಮ್ಡ್ ಇಂಧನ ಇಂಜೆಕ್ಷನ್ ಸಿಸ್ಟಂ ಅನ್ನು ಹೊಂದಿದ್ದು, ಇದು ಶೇ.7 ಹೆಚ್ಚು ಇಂಧನ ದಕ್ಷತೆಯನ್ನು ಹೊಂದಿದೆ.

ಅತ್ಯಾಧುನಿಕ ಫೀಚರ್ಸ್‌ಗಳನ್ನು ಹೊಂದಿರುವ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕಿನ ವಿಶೇಷತೆಗಳು

ಈ ಎಂಜಿನ್ 7,500 ಆರ್‌ಪಿಎಂನಲ್ಲಿ 10.7 ಬಿಹೆಚ್‌ಪಿ ಪವರ್ ಮತ್ತು 6,000 ಆರ್‌ಪಿಎಂನಲ್ಲಿ 10.6 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಈ ಬೈಕಿನಲ್ಲಿ ಐ3 ಸ್ (ಐಡಲ್ ಸ್ಟಾರ್ಟ್-ಸ್ಟಾಪ್ ಸಿಸ್ಟಂ) ಅನ್ನು ಒಳಗೊಂಡಿದೆ.

ಅತ್ಯಾಧುನಿಕ ಫೀಚರ್ಸ್‌ಗಳನ್ನು ಹೊಂದಿರುವ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕಿನ ವಿಶೇಷತೆಗಳು

ಫೀಚರ್ಸ್

ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್ ಬೈಕಿನಲ್ಲಿ ಬ್ಲೂಟೂತ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಇಂಟಿಗ್ರೇಟೆಡ್ ಯುಎಸ್‌ಬಿ ಚಾರ್ಜರ್ ಜೊತೆಗೆ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್ ಆಫ್, ಬ್ಯಾಂಕ್ ಆಂಗಲ್ ಸೆನ್ಸರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್ ಹೊಂದಿದೆ.

ಅತ್ಯಾಧುನಿಕ ಫೀಚರ್ಸ್‌ಗಳನ್ನು ಹೊಂದಿರುವ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕಿನ ವಿಶೇಷತೆಗಳು

ಈ ಬೈಕಿನಲ್ಲಿ ಕರೆ ಮತ್ತು ಎಸ್‌ಎಂಎಸ್‌ನೊಂದಿಗೆ ಬ್ಲೂಟೂತ್ ಕನೆಕ್ಟಿವಿಟಿ ನೀಡುತ್ತದೆ ಮ್ಯಾಪ್ ಜೊತೆ ಅಲರ್ಟ್ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒಳಗೊಂಡಿದೆ. ಇನ್ಸ್ ಟ್ರೂಮೆಂಟ್ ಕನ್ಸೋಲ್‌ನಲ್ಲಿ ಗೇರ್ ಪೊಸಿಷನ್ ಇಂಡಿಕೇಟರ್, ಇಕೋ ಮೋಡ್, ಟೆಕೋಮೀಟರ್ ಮತ್ತು ರಿಯಲ್ ಟೈಮ್ ಮೈಲೇಜ್ ಇಂಡಿಕೇಟರ್ (ಆರ್‌ಟಿಎಂಐ) ಮಾಹಿತಿಗಳನ್ನು ಕೂಡ ಪ್ರದರ್ಶಿಸುತ್ತದೆ.

ಅತ್ಯಾಧುನಿಕ ಫೀಚರ್ಸ್‌ಗಳನ್ನು ಹೊಂದಿರುವ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕಿನ ವಿಶೇಷತೆಗಳು

ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕ್ 3ಡಿ ಬ್ರ್ಯಾಂಡಿಂಗ್, ರಿಮ್ ಟೇಪ್‌ಗಳು ಮತ್ತು ಹೊಸ ಮ್ಯಾಟ್ ಬಣ್ಣಕ್ಕಾಗಿ ಬ್ಲೂ ಅಸ್ಸೆಂಟ್ ಗಳನ್ನು ಒಳಗೊಂಡಿದೆ. ಎಚ್-ಸಿಗ್ನೇಚರ್ ಪೊಸಿಷನ್ ಲ್ಯಾಂಪ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್ ವಿಭಾಗದ ಅತ್ಯುತ್ತಮ ಬೆಳಕನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ

ಅತ್ಯಾಧುನಿಕ ಫೀಚರ್ಸ್‌ಗಳನ್ನು ಹೊಂದಿರುವ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕಿನ ವಿಶೇಷತೆಗಳು

ಇದರೊಂದಿಗೆ ಕನ್ಸೋಲ್ ಸೈಡ್-ಸ್ಟ್ಯಾಂಡ್ ಸೂಚನೆಯನ್ನು ಸಹ ತೋರಿಸುತ್ತದೆ. ಇದರ ಹಿಂಭಾಗದಲ್ಲಿ 5-ಹಂತದ ಹೊಂದಾಣಿಕೆ ಹೈಡ್ರಾಲಿಕ್ ಶಾಕ್ ಅಬ್ಸಾರ್ಬರ್, 240 ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್, ವೈಡ್ ರಿಯರ್ ಟೈರ್ ಮತ್ತು 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ, ಇದು ಒಟ್ಟಾರೆ ಸವಾರಿ ಸೌಕರ್ಯವನ್ನು ಸುಧಾರಿಸುತ್ತದೆ.

ಅತ್ಯಾಧುನಿಕ ಫೀಚರ್ಸ್‌ಗಳನ್ನು ಹೊಂದಿರುವ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕಿನ ವಿಶೇಷತೆಗಳು

ಸಸ್ಪೆಂಕ್ಷನ್

ಈ ಹೊಸ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಪ್ರಿ-ಲೋಡ್-ಹೊಂದಾಣಿಕೆ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ.

ಅತ್ಯಾಧುನಿಕ ಫೀಚರ್ಸ್‌ಗಳನ್ನು ಹೊಂದಿರುವ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕಿನ ವಿಶೇಷತೆಗಳು

ಬೆಲೆ

ಈ ಹೊಸ ಹೀರೋ ಗ್ಲ್ಯಾಮರ್ ಎಕ್ಸ್‌ಟೆಕ್‌ ಬೈಕಿನ ಬೆಲೆಯ ಬಗ್ಗೆ ಹೇಳುವುದಾದರೆ, ಇದರ ಡ್ರಮ್ ರೂಪಾಂತರದಲ್ಲಿ ಬೆಲೆಯು ರೂ.78,900 ಗಳಾದರೆ, ಡಿಸ್ಕ್ ರೂಪಾಂತರದ ಬೆಲೆಯು ರೂ.83,500 ಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.

Most Read Articles

Kannada
English summary
Hero Glamour Xtec Top Highlights. Read In Kannada.
Story first published: Saturday, July 24, 2021, 20:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X