Just In
Don't Miss!
- News
ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Movies
ರೈತರ ಪ್ರತಿಭಟನೆ: ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ್ದು ಸಿನಿಮಾ ನಟ ದೀಪ್ ಸಿಧು?
- Lifestyle
ಹೊಟ್ಟೆಯ ಬಲಭಾಗದಲ್ಲಿ ನೋವು, ಈ ತೊಂದರೆಗಳಿರಬಹುದು
- Sports
ವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆ
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಐಷಾರಾಮಿ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಖರೀದಿಸಿದ ಮಲಯಾಳಂ ಚಿತ್ರರಂಗದ ಖ್ಯಾತ ನಟ
ಮಲಯಾಳಂ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಜೊಜು ಜಾರ್ಜ್ ಅವರು ಐಷಾರಾಮಿ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಖರೀದಿಸಿದ್ದಾರೆ. ಇತರ ಸಿನಿ ಸೆಲಬ್ರಿಟಿಗಳಂತೆ ಇವರು ಕೂಡ ಐಷಾರಾಮಿ ಕಾರು ಮತ್ತು ಬೈಕ್ ಕ್ರೇಜ್ ಅನ್ನು ಹೆಚ್ಚು ಹೊಂದಿದ್ದಾರೆ.

ಜನಪ್ರಿಯ ನಟ ಜೊಜು ಜಾರ್ಜ್ ಅವರ ಬಳಿ ಹಲವಾರು ದುಬಾರಿ ಮತ್ತು ಐಷಾರಾಮಿ ವಾಹನಗಳ ಕಲೆಕ್ಷನ್ ಅನ್ನು ಹೊಂದಿದ್ದಾರೆ. ಇದೀಗ ಇವರ ಐಷಾರಾಮಿ ವಾಹನಗಳ ಗ್ಯಾರೇಜ್‌ಗೆ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಕೂಡ ಸೇರಿದೆ. ಸದ್ಯ ಜೊಜು ಜಾರ್ಜ್ 'ಪೀಸ್' ಎಂಬ ಮಲಯಾಳಂ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇನ್ನು ನಟ ಜೊಜು ಜಾರ್ಜ್ ಅವರು ಖರೀದಿಸಿದ ಐಷಾರಾಮಿ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.8.84 ಲಕ್ಷಗಳಾಗಿದೆ. ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಸಫಿಯರ್ ಬ್ಲ್ಯಾಕ್ ಮತ್ತು ಮ್ಯಾಟ್ ಸಿಲ್ವರ್ ಐಸ್ ಎಂಬ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನಲ್ಲಿ 765 ಸಿಸಿ, 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 12,000 ಆರ್‌ಪಿಎಂನಲ್ಲಿ 116 ಬಿಹೆಚ್‌ಪಿ ಪವರ್ ಮತ್ತು 9,400 ಆರ್‌ಪಿಎಂನಲ್ಲಿ 77 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ನೊಂದಿಗೆ ಸ್ಲಿಪ್-ಅಸಿಸ್ಟ್ ಕ್ಲಚ್ ಮೂಲಕ 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಈ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನಲ್ಲಿ ಮೂರು ರೈಡಿಂಗ್ ಮೋಡ್‌ಗಳನ್ನು ಸಹ ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಈ ಮಿಡಲ್ ವೇಟ್ ನೇಕೆಡ್ ಬೈಕ್ ಆರ್‍ಎಸ್ ಆವೃತ್ತಿಗಿಂತ ಕೆಳಗಿನ ಸ್ಥಾನದಲ್ಲಿರುತ್ತದೆ. ಮುಂಬರುವ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಅನಲಾಗ್ ಟ್ಯಾಜೋಮೀಟರ್ ನೊಂದಿಗೆ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಮುಂಭಾಗದಲ್ಲಿ 41 ಎಂಎಂ ಶೋವಾ ಅಪ್‍ಸೈಡ್ ಸಸ್ಪೆಂಷನ್ ಮತ್ತು ಹಿಂಭಾಗದಲ್ಲಿ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಅನ್ನು ಅಳವಡಿಸಲಾಗಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಇನ್ನು ಈ ಹೊಸ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುದಾದರೆ ಮುಂಭಾಗದಲ್ಲಿ ಟ್ವಿನ್ 310 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಕೂಡ ಜೋಡಿಸಲಾಗಿದೆ.

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ರಗಡ್ ಲುಕ್ ಅನ್ನು ಹೊಂದಿದೆ. 2020ರ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್, ಇಂಟಿಗ್ರೇಟೆಡ್ ಟ್ವಿನ್ ಎಲ್‍ಇಡಿ ಹೆಡ್‍ಲ್ಯಾಂಪ್ ಹಾಗೂ ಇಂಟಿಗ್ರೇಟೆಡ್ ಡಿಆರ್‍ಎಲ್‍ಗಳನ್ನು ಹೊಂದಿವೆ.

ಭಾರತೀಯ ಮಾರುಕಟ್ಟೆಯಲ್ಲಿ ಮಿಡಲ್ ವೇಟ್ ಸೆಗ್‍ಮೆಂಟ್ ನ ಬೈಕುಗಳಿಗೆ ಬೇಡಿಕೆ ಇರುವುದರಿಂದ ಕಳೆದ ವರ್ಷದ ಟ್ರಯಂಫ್ ಹೊಸ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಬಿಡುಗಡೆಗೊಳಿಸಲಾಗಿತ್ತು. ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕು ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ 790 ಡ್ಯೂಕ್, ಬಿಎಂಡಬ್ಲ್ಯು ಎಫ್ 900 ಆರ್, ಮತ್ತು ಕವಾಸಕಿ ಝಡ್900 ಬೈಕಿಗೆ ಪೈಪೋಟಿ ನೀಡುತ್ತದೆ.