Just In
- 55 min ago
ಭಾರತದಲ್ಲಿ ಸೆಲ್ಟೊಸ್ ಫೇಸ್ಲಿಫ್ಟ್ ಆವೃತ್ತಿಯ ಬಿಡುಗಡೆಗಾಗಿ ಸಿದ್ದವಾದ ಕಿಯಾ ಮೋಟಾರ್ಸ್
- 10 hrs ago
ಕೋವಿಡ್ ವ್ಯಾಕ್ಸಿನ್ ಸಾಗಾಣಿಕೆಗಾಗಿ ಹೊಸ ಮಾದರಿಯ ಟ್ರಕ್ ಸಿದ್ದಪಡಿಸಿದ ಭಾರತ್ ಬೆಂಝ್
- 11 hrs ago
ಮೊದಲ ವರ್ಷದ ಸಂಭ್ರಮ- ಟಾಟಾ ನೆಕ್ಸಾನ್ ಇವಿ ಖರೀದಿ ಮೇಲೆ ಹೊಸ ಆಫರ್
- 12 hrs ago
ಸ್ಥಗಿತವಾಯ್ತು ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳು
Don't Miss!
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- News
ರಿಲಯನ್ಸ್ 3ನೇ ತ್ರೈಮಾಸಿಕ: ಶೇ 41ಕ್ಕೂ ಅಧಿಕ ಲಾಭ ದಾಖಲು
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರೂ.24 ಲಕ್ಷ ಬೆಲೆಯ ಐಷಾರಾಮಿ ಡುಕಾಟಿ ಬೈಕ್ ಖರೀದಿಸಿದ ಜನಪ್ರಿಯ ನಟ
ಕಾರು ಮತ್ತು ಬೈಕುಗಳ ಕ್ರೇಜ್ ಅನ್ನುವುದು ಯಾರಿಗೆ ಇರಲ್ಲಿ ಹೇಳಿ. ಅದರಲ್ಲಿಯು ಸಿನಿಮಾ ನಟರು, ಕ್ರಿಕೆಟ್ ಆಟಗಾರರು ಸೇರಿದಂತೆ ಒಟ್ಟಾರೆ ಸೆಲೆಬ್ರಿಟಿಗಳಿಗೆ ಈ ಕ್ರೇಜ್ ತುಸು ಹೆಚ್ಚೆ ಇರುತ್ತದೆ. ಇದರಲ್ಲಿ ಕೆಲವರಿಗೆ ಐಷಾರಾಮಿ ಮತ್ತು ದುಬಾರಿ ಕಾರು, ಬೈಕುಗಳ ಸಂಗ್ರಹ ಮಾಡಿಕೊಳ್ಳುವ ಕ್ರೇಜ್ ಹೊಂದಿದ್ದಾರೆ.

ಇತ್ತೀಚೆಗೆ ಮಲಯಾಳಂ ಚಿತ್ರರಂಗದ ಖ್ಯಾತ ನಟ ಉನ್ನಿ ಮುಕುಂದನ್ ಐಷಾರಾಮಿ ಡುಕಾಟಿ ಪಾನಿಗಲೆ ವಿ2 ಬೈಕನ್ನು ಖರೀದಿಸಿದ್ದಾರೆ. ಈ ಜನಪ್ರಿಯ ನಟ ಉನ್ನಿ ಮುಕುಂದನ್ ಅವರಿಗೆ ಬೈಕುಗಳ ಮೇಲೆ ಹೆಚ್ಚು ಕ್ರೇಜ್ ಹೊಂದಿದ್ದಾರೆ. ಇವರ ಬಳಿ ಹಲವು ಬೈಕುಗಳ ಸಂಗ್ರಹವಿದೆ. ಇವರು ಪಲ್ಸರ್, ರಾಯಲ್ ಎನ್‌ಫೀಲ್ಡ್ ಕಾಂಟಿನೆಂಟಲ್ ಜಿಟಿ, ಕ್ಲಾಸಿಕ್ ಡಸರ್ಟ್ ಸ್ಟಾರ್ಮ್ ಮತ್ತು ಜಾವಾ ಪೆರಾಕ್ ಬೈಕುಗಳನ್ನು ಹೊಂದಿದ್ದಾರೆ.

ಇದರ ಜೊತೆಗೆ ಐಷಾರಾಮಿ ಡುಕಾಟಿ ಪಾನಿಗಲೆ ವಿ2 ಬೈಕ್ ಕೂಡ ಸೇರಿದೆ. ಇವರು ಇತ್ತೀಚೆಗೆ ತಮ್ಮ ಜಿಮ್ ಟ್ರೇನರ್‌ಗೆ ದುಬಾರಿ ಯಮಹಾ ಆರ್15 ವಿ3 ಬೈಕನ್ನು ಗಿಫ್ಟ್ ನೀಡುವ ಮೂಲಕ ಸುದ್ದಿಯಾಗಿದ್ದರು.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇನ್ನು ಜನಪ್ರಿಯ ನಟ ಉನ್ನಿ ಮುಕುಂದನ್ ಖರೀದಿಸಿದ ಡುಕಾಟಿ ಪಾನಿಗಲೆ ವಿ2 ಬೈಕಿನ ಕೇರಳದ ಆನ್-ರೋಡ್ ಬೆಲೆಯು ರೂ.24 ಲಕ್ಷಗಳಾಗಿದೆ. ಆದರೆ ಡುಕಾಟಿ ಪಾನಿಗಲೆ ವಿ2 ಬೈಕಿನ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.16.99 ಲಕ್ಷಗಳಾಗಿದೆ.

ಇನ್ನು ಈ ಡುಕಾಟಿ ಪಾನಿಗಲೆ ವಿ2 ಬೈಕಿನ ಬಗ್ಗೆ ಹೇಳುವುದಾದರೆ, ದೇಶದ ಮೊದಲ ಬಿಎಸ್-6 ಪ್ರೇರಿತ ಸೂಪರ್ ಬೈಕ್ ಇದಾಗಿದೆ. ಈ ಸೂಪರ್ ಬೈಕಿನಲ್ಲಿ 955 ಸಿಸಿ ಸೂಪರ್‌ಕ್ವಾಡ್ರೊ 90-ಡಿಗ್ರಿ ವಿ2 ಎಂಜಿನ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಈ ಎಂಜಿನ್ 10,750 ಆರ್‌ಪಿಎಂನಲ್ಲಿ 155 ಬಿಹೆಚ್‌ಪಿ ಮತ್ತು 9000 ಆರ್‌ಪಿಎಂನಲ್ಲಿ 104 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ 5 ಬಿಹೆಚ್‌ಪಿ ಪವರ್ ಮತ್ತು 2 ಎನ್ಎಂ ಟಾರ್ಕ್ ಹೆಚ್ಚು ಉತ್ಪಾದಿಸುತ್ತದೆ

ಈ ಹೊಸ ಪಾನಿಗಲೆ ವಿ2 ಬೈಕ್ ಫ್ರಂಟ್ ಫೇರಿಂಗ್, ಮತ್ತು ಸಿಂಗಲ್ ಸೈಡ್ ಸ್ವಿಂಗಾರ್ಮ್ ಅನ್ನು ಒಳಗೊಂಡಿದೆ. ಈ ಹೊಸ ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಪಾನಿಗಲೆ ವಿ4 ಬೈಕಿನಲ್ಲಿರುವಂತಹ ಕೆಲವು ಸ್ಟೈಲಿಂಗ್ ಅಂಶಗಳು ಹೊಸ ಪಾನಿಗಲೆ ವಿ2 ಬೈಕಿನಲ್ಲಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಈ ಡುಕಾಟಿ ಪಾನಿಗಲೆ ವಿ2 ಬೈಕ್ ಬ್ರ್ಯಾಂಡ್ ಸಿಗ್ನೇಚರ್ ಪ್ರೊಜೆಕ್ಟರ್ ಹೆಡ್ ಲ್ಯಾಂಪ್, ಏರ್ ಡ್ಯಾಮ್ ಮತ್ತು ವಿ-ಆಕಾರದ ಡಿಆರ್ಎಲ್ ಅನ್ನು ಹೊಂದಿದೆ. ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಕ್ಲಸ್ಟರ್‌ಗಾಗಿ 4.3-ಇಂಚಿನ ಟಿಎಫ್‌ಟಿ ಡಿಸ್ ಪ್ಲೇಯನ್ನು ಹೊಂದಿದೆ. ಈ ಹೊಸ ಬೈಕಿನಲ್ಲಿ ಸ್ಲಂಗ್ ಅಂಡರ್ ಎಕ್ಸಾಸ್ಟ್ ಅನ್ನು ಕೂಡ ಹೊಂದಿದೆ.

ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಬ್ರೆಂಬೊದಿಂದ 4-ಪಿಸ್ಟನ್ ಕ್ಯಾಲಿಪರ್‌ಗಳೊಂದಿಗೆ ಡ್ಯುಯಲ್ 320 ಎಂಎಂ ಫ್ಲೋಟಿಂಗ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಒಂದೇ 245 ಎಂಎಂ ಡಿಸ್ಕ್ ಅನ್ನು ಹೊಂದಿದೆ.

ಡುಕಾಟಿ ಪಾನಿಗಲೆ ವಿ2 ಬೈಕ್ ತನ್ನ ಸಂಪೂರ್ಣ ಎಲೆಕ್ಟ್ರಾನಿಕ್ಸ್ ಕಿಟ್ ಅನ್ನು 959 ಮಾದರಿಯಿಂದ ಎರವಲು ಪಡದಿದೆ. ಇನ್ನ್ ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ ಟ್ರಾಕ್ಷನ್ ಕಂಟ್ರೋಲ್ ಅನ್ನು ನೀಡಿದೆ. ಡುಕಾಟಿ ಪಾನಿಗಲೆ ವಿ2 ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಜನಪ್ರಿಯ ಸೂಪರ್ ಬೈಕುಗಳಲ್ಲಿ ಒಂದಾಗಿದೆ.
Image Courtesy: Unni Mukundan Fans Alappuzha District Conmitte