Just In
- 1 hr ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 3 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Movies
ವಿಶೇಷ ಭಾನುವಾರ: ಮನೋರಂಜನಾ ಲೋಕದಲ್ಲಿ 'ಮದ-ಗಜ'ಗಳ ಕಾದಾಟ
- News
ಎಬಿಪಿ ಸಮೀಕ್ಷೆ: ಬೆಂಗಾಳದಲ್ಲಿ ಬಿಜೆಪಿ ಏಳಿಗೆ ನಡುವೆ ಟಿಎಂಸಿಗೆ ಗೆಲುವು
- Sports
ಸ್ಪಿನ್ ಆಗಲು ಆರಂಭವಾದರೆ ಜಗತ್ತು ಅಳಲು ಆರಂಭಿಸುತ್ತದೆ: ಪಿಚ್ ಬಗ್ಗೆ ಟೀಕೆಗೆ ಆಸಿಸ್ ಸ್ಪಿನ್ನರ್ ತಿರುಗೇಟು
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿಸ್ಪರ್ಧಿ ಮಿಟಿಯೊರ್ 350 ಅಬ್ಬರದ ನಡುವೆಯೂ ಉತ್ತಮ ಬೇಡಿಕೆ ಪಡೆದುಕೊಂಡ ಹೈನೆಸ್ ಸಿಬಿ350
ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಹೊಚ್ಟ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವ ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕ್ಲಾಸಿಕ್ ಬೈಕ್ ಮಾರಾಟ ಆರಂಭಿಸಿದ ಕೆಲವೇ ತಿಂಗಳಿನಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡಿದೆ.

2020ರ ಅಕ್ಬೋಬರ್ ಮಧ್ಯಂತರದಲ್ಲಿ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಬಿಡುಗಡೆ ಮಾಡಿದ್ದ ಹೋಂಡಾ ಕಂಪನಿಯು ಇದುವರೆಗೆ 14 ಸಾವಿರ ಯುನಿಟ್ ಬೈಕ್ ವಿತರಣೆ ಮಾಡಿದ್ದು, ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿರುವ ಹೈನೆಸ್ ಸಿಬಿ350 ಬೈಕ್ ಮಾದರಿಯು ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಮಿಟಿಯೊರ್ 350, ಬೆನೆಲ್ಲಿ ಇಂಪೀರಿಯಲ್ 400 ಮತ್ತು ಜಾವಾ ಕ್ಲಾಸಿಕ್ ಬೈಕ್‌ಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಕಳೆದ ತಿಂಗಳು ಜನವರಿ ಅವಧಿಯಲ್ಲಿ ಹೋಂಡಾ ಕಂಪನಿಯು 3,543 ಯುನಿಟ್ ಹೈನೆಸ್ ಸಿಬಿ350 ಬೈಕ್‌ಗಳನ್ನು ಮಾರಾಟ ಮಾಡಿದ್ದು, 2020ರ ಡಿಸೆಂಬರ್ ಅವಧಿಯಲ್ಲಿ ಬೈಕ್ ಮಾರಾಟಕ್ಕೆ ಹೊಲೀಕೆ ಮಾಡಿದರೆ ಜನವರಿಯಲ್ಲಿ ಶೇ. 126 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಇದೇ ವೇಳೆ ಹೈನೆಸ್ ಸಿಬಿ350 ಬೈಕ್ ಮಾದರಿಗೆ ನೇರ ಪೈಪೋಟಿಯಾಗಿರುವ ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಜನವರಿ ಅವಧಿಯಲ್ಲಿ 5,073 ಯನಿಟ್ ಮಾರಾಟವಾಗಿದ್ದು, ಕಳೆದ ಡಿಸೆಂಬರ್ ಅವಧಿಯಲ್ಲಿನ ಮಾರಾಟ ಪ್ರಮಾಣಕ್ಕೆ ಹೋಲಿಕೆ ಮಾಡಿದರೆ ಶೇ. 40 ರಷ್ಟು ಕುಸಿತವಾಗಿದೆ.

2020ರ ಡಿಸೆಂಬರ್‌ನಲ್ಲಿ 8,569 ಯನಿಟ್ ಮಾರಾಟಗೊಂಡಿದ್ದ ಮಿಟಿಯೊರ್ 350 ಬೈಕ್ ಮಾದರಿಯು ಜನವರಿಯಲ್ಲಿ 5,073 ಯುನಿಟ್ ಮಾರಾಟಗೊಂಡಿದ್ದು, ಜನವರಿ ಅವಧಿಯಲ್ಲಿ ಹೋಂಡಾ ಹೈನೆಸ್ ಬೈಕ್ ಮಾದರಿ ಮಾತ್ರ ಕಡಿಮೆ ಪ್ರಮಾಣದಲ್ಲಿ ಮಾರಾಟಗೊಂಡಿದ್ದರೂ ಬೇಡಿಕೆ ಪ್ರಮಾಣದಲ್ಲಿ ಸಾಕಷ್ಟು ಹೆಚ್ಚಳವಾಗಿದೆ.

2020ರ ಸೆಪ್ಟೆಂಬರ್ ಅವಧಿಯಲ್ಲಿ ಒಂದೇ ತಿಂಗಳಿನಲ್ಲಿ ಬಿಡುಗಡೆಗೊಂಡಿರುವ ಮಿಟಿಯೊರ್ 350 ಮತ್ತು ಹೋಂಡಾ ಹೈನೆಸ್ ಸಿಬಿ350 ಬೈಕ್ ಮಾದರಿಗಳು ಕ್ಲಾಸಿಕ್ ಬೈಕ್ ಮಾದರಿಗಳಲ್ಲೇ ತಮ್ಮದೆ ಆದ ಜನಪ್ರಿಯತೆಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮಿಟಿಯೊರ್ 350 ಬೈಕ್ ಮಾದರಿಗೆ ಆರಂಭದಲ್ಲಿ ಇದ್ದ ಬೇಡಿಕೆ ಪ್ರಮಾಣವು ಇದೀಗ ತುಸು ಕಡಿಮೆಯಾಗುತ್ತಿದೆ.

ಆದರೆ ಬಿಡುಗಡೆಯ ಆರಂಭದಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ತುಸು ಹಿನ್ನಡೆ ಅನುಭವಿಸಿದ್ದ ಹೋಂಡಾ ಹೈನೆಸ್ ಸಿಬಿ350 ಬೈಕ್ ಮಾದರಿಯು ತಿಂಗಳಿನಿಂದ ತಿಂಗಳಿಗೆ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಬೈಕಿಗೆ ಮಾರಾಟ ಸೌಲಭ್ಯದ ಕೊರತೆಯು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳಲು ಹಿನ್ನಡೆಯಾಗುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಹೊಸ ಬೈಕ್ ಮಾದರಿಯನ್ನು ತನ್ನ ಪ್ರೀಮಿಯಂ ಬೈಕ್ ಮಾರಾಟ ಮಳಿಗೆಯಾದ ಬಿಗ್‌ವಿಂಗ್‌ನಲ್ಲಿ ಮಾತ್ರ ಮಾರಾಟಮಾಡುತ್ತಿದ್ದು, ಕೆಲವು ಕೆಲವು ನಗರಗಳಲ್ಲಿ ಮಾತ್ರ ಮಾರಾಟ ಸೌಲಭ್ಯ ಹೊಂದಿರುವ ಬಿಗ್‌ವಿಂಗ್‌ನಿಂದಾಗಿ ಗರಿಷ್ಠ ಮಟ್ಟದ ಗ್ರಾಹಕರನ್ನು ತಲುಪಲು ಸಾಧ್ಯವಾಗುತ್ತಿಲ್ಲ.

ಈ ಹಿನ್ನಲೆಯಲ್ಲಿ ಮುಂಬರುವ ದಿನಗಳಲ್ಲಿ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ತನ್ನ ಸಾಮಾನ್ಯ ಬೈಕ್ ಮಾರಾಟ ಮಳಿಗೆಗಳ ಮೂಲಕವೂ ಮಾರಾಟ ಆರಂಭಿಸುವ ಸಾಧ್ಯತೆಗಳಿದ್ದು, ಹೊಸ ಬೈಕ್ ಮಾದರಿಯು ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೈನೆಸ್ ಸಿಬಿ350 ಡಿಲಕ್ಸ್ ಮಾದರಿಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1,86,500 ಮತ್ತು ಡಿಲಕ್ಸ್ ಪ್ರೋ ಮಾದರಿಯು ರೂ. 1,92,500 ಬೆಲೆ ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 20.8-ಬಿಎಚ್‌ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.