ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಭಾರತದಲ್ಲಿ ಕರೋನಾ ವೈರಸ್ ಆರ್ಭಟ ಇಳಿಮುಖವಾದ ಬಳಿಕ ವಾಹನಗಳ ಮಾರಾಟದಲ್ಲಿ ಚೇತರಿಕೆಯನ್ನು ಕಂಡಿದೆ. ಹಲವು ತಿಂಗಳುಗಳ ಬಳಿಕ ಆಟೋಮೊಬೈಲ್ ಕ್ಷೇತ್ರ ಬೆಳವಣಿಗೆಯ ಕಡೆ ಸಾಗುತ್ತಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ ಜನಪ್ರಿಯ ಸ್ಕೂಟರ್‌ಗಳಿವು

ಕರೋನಾ ಭಯದಿಂದ ಹೆಚ್ಚಿನ ಜನರು ಸಾರ್ವಜನಿಕ ವಾಹನಗಳಲ್ಲಿ ಓಡಾಡಲು ಹಿಂದೇಟು ಹಾಕುತ್ತಿದ್ದಾರೆ. ಬಹುಸಂಖ್ಯೆಯ ಜನರು ಸ್ವಂತ ವಾಹನಗಳಲ್ಲಿ ಓಡಾಡಲು ಬಯಸುತ್ತಾರೆ. ಇದರಿಂದಾಗಿ ಹೆಚ್ಚಿನ ಜನರು ವಾಹನಗಳನ್ನು ಖರೀದಿಸುತ್ತಿದ್ದಾರೆ. ಇತ್ತೀಚೆಗೆ ಜನರು ದ್ವಿಚಕ್ರ ಖರೀದಿಸುವಾಗ ಸ್ಕೂಟರ್ ಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಸ್ಕೂಟರ್ ಆದರೆ ಕುಟಂಬ ಸದಸ್ಯರೆಲ್ಲರೂ ಚಲಾಯಿಸಬಹುದು. ಮಹಿಳೆಯರೂ ಕೂಡ ಸ್ಕೂಟರ್ ಅನ್ನು ಸುಲಭವಾಗಿ ಚಲಾಯಿಸಬಹುದು. ನೀವು ಕೂಡ ಸ್ಕೂಟರ್ ಅನ್ನು ಖರೀದಿಸಲು ಬಯಸಿದ್ದರೆ ನಿಮಗಾಗಿ ಕಡಿಮೆ ಬೆಲೆಯ ಸ್ಕೂಟರ್ ಗಳ ಮಾಹಿತಿ ಇಲ್ಲಿವೆ. ಗಮನಿಸಿ ಇಲ್ಲಿ ನೀಡುವ ಬೆಲೆಯು ಎಕ್ಸ್ ಶೋರೂಂ ಪ್ರಕಾರವಾಗಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ ಜನಪ್ರಿಯ ಸ್ಕೂಟರ್‌ಗಳಿವು

ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್

ಟಿವಿಎಸ್ ಕಂಪನಿಯು ತನ್ನ ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಅನ್ನು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಗ್ಲೋಸಿ ರೂಪಾಂತರ ಬೆಲೆಯು ರೂ.54,374 ಗಳಾದರೆ, ಮ್ಯಾಟ್ ಎಡಿಷನ್ ಬೆಲೆಯು ರೂ.56,224 ಗಳಾಗಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ ಜನಪ್ರಿಯ ಸ್ಕೂಟರ್‌ಗಳಿವು

ಈ ಸ್ಕೂಟರ್ ನಲ್ಲಿರುವ ಎಂಜಿನ್ ಸಿಸ್ಟಂನಲ್ಲಿ ಕಾರ್ಬ್ಯುರೇಟರ್‌ಗೆ ಫ್ಯೂಯಲ್ -ಇಂಜೆಕ್ಷನ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 6,500 ಆರ್‌ಪಿಎಂನಲ್ಲಿ 5 ಬಿಹೆಚ್‌ಪಿ ಪವರ್ ಹಾಗೂ 4,000 ಆರ್‌ಪಿಎಂನಲ್ಲಿ 5.8 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ದೇಶಿಯ ಮಾರುಕಟ್ಟೆಯಲ್ಲಿ 90 ಸಿಸಿ ಎಂಜಿನ್ ಹೊಂದಿರುವ ಏಕೈಕ ಸ್ಕೂಟರ್ ಆಗಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ ಜನಪ್ರಿಯ ಸ್ಕೂಟರ್‌ಗಳಿವು

ಹೀರೋ ಪ್ಲೆಷರ್ ಪ್ಲಸ್

2019ರಲ್ಲಿ ಹೀರೋ ಪ್ಲೆಷರ್ ಪ್ಲಸ್ ಅನ್ನು ಹೊಸ ವಿನ್ಯಾಸ ಮತ್ತು ಕೆಲವು ಹೊಸ ಮೆಕ್ಯಾನಿಕಲ್‌ಗಳೊಂದಿಗೆ ನವೀಕರಿಸಲಾಗಿದೆ. ಹೀರೋ ಪ್ಲೆಷರ್ ಪ್ಲಸ್ ಸ್ಕೂಟರ್ ಎಲ್ಎಕ್ಸ್, ವಿಎಕ್ಸ್ ಮತ್ತು ಪ್ಲ್ಯಾಟಿನಮ್ ಝಡ್ಎಕ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಇವುಗಳ ಬೆಲೆಯು ಕ್ರಮವಾಗಿ ರೂ.57,300, ರೂ.59,950 ಮತ್ತು ರೂ.61,950 ಗಳಾಗಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ ಜನಪ್ರಿಯ ಸ್ಕೂಟರ್‌ಗಳಿವು

ಹೀರೋ ಪ್ಲೆಷರ್ ಪ್ಲಸ್ ಸ್ಕೂಟರ್ ನಲ್ಲಿ 110.9 ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 8.15 ಬಿಹೆಚ್‍ಪಿ ಪವರ್ ಮತ್ತು 8.7 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ ಜನಪ್ರಿಯ ಸ್ಕೂಟರ್‌ಗಳಿವು

ಟಿವಿಎಸ್ ಜೆಸ್ಟ್ 110

ಟಿವಿಎಸ್ ಮೋಟಾರ್ ಕಂಪನಿಯು ತನ್ನ ಬಿಎಸ್-6 ಜೆಸ್ಟ್ 110 ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಬಿಡುಗಡೆಗೊಳಿಸಿತ್ತು, ಈ ಟಿವಿಎಸ್ ಜೆಸ್ಟ್ 110 ಸ್ಕೂಟರ್ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.61,345 ಗಳಾಗಿದೆ.

MOST READ: ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ ಜನಪ್ರಿಯ ಸ್ಕೂಟರ್‌ಗಳಿವು

ಟಿವಿಎಸ್ ಜೆಸ್ಟ್ ಸ್ಕೂಟರ್‌ನಲ್ಲಿ 110 ಸಿಸಿ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 7.8 ಬಿಹೆಚ್‍ಪಿ ಪವರ್ ಮತ್ತು 8.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಟಿವಿಎಸ್ ಜೆಸ್ಟ್ ಸ್ಕೂಟರ್ ಮ್ಯಾಟ್ ಬ್ಲ್ಯಾಕ್, ಮ್ಯಾಟ್ ಬ್ಲೂ, ಮ್ಯಾಟ್ ರೆಡ್, ಮ್ಯಾಟ್ ಯೆಲ್ಲೋ ಬಣ್ಣಗಳಲಿ ಲಭ್ಯವಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ ಜನಪ್ರಿಯ ಸ್ಕೂಟರ್‌ಗಳಿವು

ಹೀರೋ ಮೆಸ್ಟ್ರೋ ಎಡ್ಜ್ 110

ಹೀರೋ ಮೆಸ್ಟ್ರೋ ಎಡ್ಜ್ 110 ಸ್ಕೂಟರ್ ಅನ್ನು ಡ್ರಮ್ ಬ್ರೇಕ್ ಅಲಾಯ್ ವ್ಹೀಲ್ ವಿಎಕ್ಸ್ ಮತ್ತು ಅಲಾಯ್ ವ್ಹೀಲ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಹೀರೋ ಮೆಸ್ಟ್ರೋ ಎಡ್ಜ್ 110 ಆರಂಭಿಕ ಬೆಲೆಯು ನವದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.61,950 ಗಳಾಗಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ ಜನಪ್ರಿಯ ಸ್ಕೂಟರ್‌ಗಳಿವು

ಹೋಂಡಾ ಡಿಯೋ

ಹೋಂಡಾ ಡಿಯೋ ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಸ್ಟ್ಯಾಂಡರ್ಡ್, ಡಿಲಕ್ಸ್ ಮತ್ತು ರೆಪ್ಸೋಲ್ ಎಡಿಷನ್ ಎಂಬ ಮೂರು ರೂಪಾಂತರಗಳಲ್ಲಿ ಮರಾಟವಾಗುತ್ತಿವೆ. ಈ ಹೊಂಡಾ ಡಿಯೋ ಸ್ಕೂಟರ್ ಆರಂಭೀಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.65,627 ಗಳಾಗಿದೆ.

Most Read Articles

Kannada
English summary
5 Most Affordable Scooters In The Indian Market. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X