ಬಿಡುಗಡೆಗೆ ಸಜ್ಜಾದ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್

ಪಿಯಾಜಿಯೊ ಕಂಪನಿಯು ತನ್ನ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಬಹುನಿರೀಕ್ಷಿತ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ.

ಬಿಡುಗಡೆಗೆ ಸಜ್ಜಾದ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್

ಎಪ್ರಿಲಿಯಾ ತನ್ನ ಈ ಹೊಸ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್ ಖರೀದಿಗೆ ಪ್ರಿ-ಬುಕ್ಕಿಂಗ್ ಅನ್ನು ಇತ್ತೀಚೆಗೆ ಆರಂಭಿಸಿದೆ. ಈ ಹೊಸ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್ ಖರೀದಿಸಲು ಬಯಸುವ ಗ್ರಾಹಕರು ಆನ್‌ಲೈನ್ ಅಥವಾ ದೇಶಾದ್ಯಂತದ ಇರುವ ಕಂಪನಿಯ ಡೀಲರ್ ಬಳಿ ತೆರಳಿ ಟೋಕನ್ ಮೊತ್ತ ರೂ.5,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಕೆಲವು ವರದಿಗಳ ಪ್ರಕಾರ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್ ಬೆಲೆಯು ರೂ.1.15 ಲಕ್ಷಗಳಾಗಿರಬಹುದು. ಆದರೆ ಪಿಯಾಜಿಯೊ ಕಂಪನಿಯು ತನ್ನ ಏಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರ್ ಬೆಲೆಯನ್ನು ಅಧಿಕೃತವಾಗಿ ಬಹಿರಂಗಪಡಿಸಿದೆ.

ಬಿಡುಗಡೆಗೆ ಸಜ್ಜಾದ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್

ಈ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್ ಭಾರತದಲ್ಲಿ ಈಗಗಾಲೇ ಬಿಡುಗಡೆಯಾಗಬೇಕಿತ್ತು. ಆದರೆ ಕರೋನಾ ಸೋಂಕಿನಿಂದ ಈ ಸ್ಕೂಟರ್ ಬಿಡುಗಡೆ ಮಾಡುವುದನ್ನು ಎಪ್ರಿಲಿಯಾ ತಡಮಾಡಿದೆ. ಇನ್ನು ಪ್ರಿ-ಬುಕ್ಕಿಂಗ್ ಪ್ರಾರಂಭವಾಗೊರುವುದರಿಂದ ಈ ಸ್ಕೂಟರ್ ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷಿಯಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಬಿಡುಗಡೆಗೆ ಸಜ್ಜಾದ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್

ಹೊಸ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್ ವಿನ್ಯಾಸವು ಅದರ ಹಿರಿಯ ಸಹೋದರ ಎಸ್‌ಎಕ್ಸ್‌ಆರ್ 160 ನಂತಯೇ ಇದೆ. ಅಲ್ಲದೇ ಫೀಚರ್ ಗಳನ್ನು ಈ ಎರಡು ಸ್ಖೂಟರ್ ಗಳು ಪರಸ್ಪರ ಹಂಚಿಕೊಂಡಿದೆ.

ಬಿಡುಗಡೆಗೆ ಸಜ್ಜಾದ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್

ಇನ್ನು ಈ ಹೊಸ ಏಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್ ಮುಂಭಾಗದಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ಗಳೊಂದಿಗೆ ಟ್ರಿಪಲ್ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ. ಇದರೊಂದಿಗೆ ಮುಂಭಾಗದ ಏಪ್ರನ್, ಬಣ್ಣದ ವಿಸರ್, ಎಲ್ಇಡಿ ಟೈಲ್ ಲೈಟ್ಸ್ ಮತ್ತು ಅಲಾಯ್ ವ್ಹೀಲ್ ಅನ್ನು ಹೊಂದಿದೆ. ಇನ್ನು ಈ ಮ್ಯಾಕ್ಸಿ-ಸ್ಕೂಟರ್ ಮಸ್ಕಲರ್ ಲುಕ್ ಅನ್ನು ಒಳಗೊಂಡಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಬಿಡುಗಡೆಗೆ ಸಜ್ಜಾದ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್

ಈ ಸ್ಕೂಟರ್‌ನಲ್ಲಿ ಸಂಪೂರ್ಣವಾದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ರೈಡರ್ ಮತ್ತು ಪಿಲಿಯನ್‌ಗಾಗಿ ವಿಶಾಲ ಸೀಟುಗಳು, ಮುಂಭಾಗದ ಏಪ್ರನ್‌ನ ಎರಡೂ ಬದಿಯಲ್ಲಿ ಗ್ಲೋವ್‌ಬಾಕ್ಸ್, ಒಂದು ಬದಿಯಲ್ಲಿ ಯುಎಸ್‌ಬಿ ಚಾರ್ಜರ್, ಪ್ರಕಾಶದೊಂದಿಗೆ ದೊಡ್ಡ ಅಂಡರ್-ಸೀಟ್ ಸ್ಟೋರೆಂಜ್ ಸ್ಪೆಸ್ ಅನ್ನು ಹೊಂದಿದೆ. ಈ ಸ್ಕೂಟರ್‌ನಲ್ಲಿ ಬ್ಲೂಟೂತ್ ಕನೆಕ್ಟಿವಿಟಿಯನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾದ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್

ಹೊಸ ಮ್ಯಾಕ್ಸಿ-ಸ್ಕೂಟರ್‌ನಲ್ಲಿ 125 ಸಿಸಿ ಸಿಂಗಲ್-ಸಿಲಿಂಡರ್ ಫ್ಯೂಯಲ್-ಇಂಜೆಕ್ಟ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ,600 ಆರ್‌ಪಿಎಂನಲ್ಲಿ 9.3 ಬಿಹೆಚ್‌ಪಿ ಮತ್ತು 6250 ಆರ್‌ಪಿಎಂನಲ್ಲಿ ಟಾರ್ಕ್ 9.2 ಎನ್ಎಂ ಉತ್ಪಾದಿಸುತ್ತದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಬಿಡುಗಡೆಗೆ ಸಜ್ಜಾದ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಟ್ವಿನ್-ಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾದ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್

ಈ ಹೊಸ ಮ್ಯಾಕ್ಸಿ-ಸ್ಕೂಟರ್ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 140 ಎಂಎಂ ಡ್ರಮ್ ಬ್ರೇಕ್ ಮೂಲಕ ಹೆಚ್ಚುವರಿ ಸುರಕ್ಷತೆಗಾಗಿ ಸಂಯೋಜಿತ ಬ್ರೇಕಿಂಗ್ ಸಿಸ್ಟಂ ಅನ್ನು ಒಳಗೊಂಡಿದೆ.

ಬಿಡುಗಡೆಗೆ ಸಜ್ಜಾದ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್

ಈ ಮ್ಯಾಕ್ಸಿ-ಸ್ಕೂಟರ್ ಟ್ಯೂಬ್‌ಲೆಸ್ ಟೈರ್‌ಗಳೊಂದಿಗೆ 12 ಇಂಚಿನ ಅಲಾಯ್ ವ್ಹೀಲ್ ಶಾಡ್ ಅನ್ನು ಹೊಂದಿರುತ್ತದೆ. ಈ ಸ್ಕೂಟರ್ 7 ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಹೊಂದಿರುತ್ತದೆ,

ಬಿಡುಗಡೆಗೆ ಸಜ್ಜಾದ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ-ಸ್ಕೂಟರ್

ಇನ್ನು ಈ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರ್ ಮ್ಯಾಟ್ ಬ್ಲ್ಯಾಕ್, ಗ್ಲೋಸಿ ವೈಟ್, ಮ್ಯಾಟ್ ಬ್ಲೂ ಮತ್ತು ಗ್ಲೋಸಿ ರೆಡ್ ಎಂಬ ನಾಲ್ಕು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರುತ್ತದೆ. ಈ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮಾದರಿ ಬಿಡುಗಡೆಯಾದ ಬಳಿಕ ಸುಜುಕಿ ಬರ್ಗ್‌ಮನ್ 125 ಸ್ಕೂಟರ್‌ಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
New Aprilia SXR 125 India launch. Read In kananda.
Story first published: Thursday, April 8, 2021, 19:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X