ನೇಪಾಳದಲ್ಲಿ ಬಿಡುಗಡೆಗೊಂಡ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಪಿಯಾಜಿಯೊ ಕಂಪನಿಯು ತನ್ನ ಹೊಸ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ನೇಪಾಳದಲ್ಲಿ ಬಿಡುಗಡೆಗೊಳಿಸಿದೆ. ಈ ಎಸ್‌ಎಕ್ಸ್‌ಆರ್ 160 ನೇಪಾಳದ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಮೊದಲ ಎಪ್ರಿಲಿಯಾ ಸ್ಕೂಟರ್ ಆಗಿದೆ.

ನೇಪಾಳದಲ್ಲಿ ಬಿಡುಗಡೆಗೊಂಡ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍‍ಗಳು ಈ ಸ್ಕೂಟರ್‍ಗಳಿಗೆ ಸ್ಪೋರ್ಟಿ ಲುಕ್ ನೀಡುತ್ತವೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಮ್ಯಾಕ್ಸಿ-ಸ್ಕೂಟರ್ ಯುರೋಪಿಯನ್ ಮತ್ತು ಆಗ್ನೇಯ ಏಷ್ಯಾದ ಮಾರುಕಟ್ಟೆಗಳಲ್ಲಿ ಜನಪ್ರಿಯ ಮಾದರಿಯಾಗಿದೆ. ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಕ್ರಾಸ್ಒವರ್ ಸ್ಕೂಟರ್‌ ರೀತಿಯಲ್ಲಿ ಕಾಣುವಂತೆ ವಿನ್ಯಾಸಗೊಳಿಸಲಾಗಿದೆ.

ನೇಪಾಳದಲ್ಲಿ ಬಿಡುಗಡೆಗೊಂಡ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ನೇಪಾಳದಲ್ಲಿ ಬಿಡುಗಡೆಗೊಂಡ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ವಿನ್ಯಾಸದ ಬಗ್ಗೆ ಹೇಳುವುದಾದರೆ, ಈ ಸ್ಕೂಟರ್ ಇಂಡಿಯಾ-ಸ್ಪೆಕ್ ಮಾದರಿಯಂತೆಯೇ ಡ್ಯುಯಲ್ ಎಲ್‌ಇಡಿ ಹೆಡ್‌ಲೈಟ್, ಡ್ಯುಯಲ್ ಎಲ್‌ಇಡಿ ಟೇಲ್ ಲೈಟ್ ಕ್ಲಸ್ಟರ್‌ಗಳಿವೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ನೇಪಾಳದಲ್ಲಿ ಬಿಡುಗಡೆಗೊಂಡ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಇನ್ನು ಇದರಲ್ಲಿ ದೊಡ್ಡ ಗಾತ್ರದ ವಿಂಡ್‌ಸ್ಕ್ರೀನ್ ಸಿಸ್ಟಂ, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಸೀಟಿನ ಕೆಳಗಿರಿಸಲಾಗಿದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ತಂತ್ರಜ್ಙಾನವನ್ನು ಒಳಗೊಂಡಿದೆ.

ನೇಪಾಳದಲ್ಲಿ ಬಿಡುಗಡೆಗೊಂಡ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಸ್ಕೂಟರ್ ಸವಾರ ಹಾಗೂ ಹಿಂಬದಿಯ ಪ್ರಯಾಣಿಕರಿಗೆ ಆರಾಮದಾಯಕವಾಗಿರುವ ಸೀಟುಗಳನ್ನು ನೀಡಲಾಗಿದೆ. ಈ ಸ್ಕೂಟರಿನ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍‍ಗಳು ಸಹ ಈ ಮ್ಯಾಕ್ಸಿ ಸ್ಕೂಟರಿಗೆ ಸ್ಪೋರ್ಟಿ ಲುಕ್ ನೀಡುತ್ತವೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ನೇಪಾಳದಲ್ಲಿ ಬಿಡುಗಡೆಗೊಂಡ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಇನ್ನು ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ನಲ್ಲಿ ಓವರ್‌ಸೈಜ್ ಸ್ಯಾಡಲ್ ಮತ್ತು ಐದು-ಸ್ಪೋಕ್ ಅಲಾಯ್ ವ್ಹೀಲ್‌ಗಳಿವೆ. ಇನ್ನು ನೇಪಾಳದಲ್ಲಿ ಬಿಡುಗಡೆಗೊಂಡ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಎರಡು ಎಂಜಿನ್ ಆಯ್ಕೆಗಳಲ್ಲಿ ಬಿಡುಗಡೆಗೊಂಡಿದೆ.

ನೇಪಾಳದಲ್ಲಿ ಬಿಡುಗಡೆಗೊಂಡ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಇದರಲ್ಲಿ 160 ಸಿಸಿ ಮತ್ತು 125 ಸಿಸಿಗಳ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದರಲ್ಲಿ 160 ಸಿಸಿ, ಸಿಂಗಲ್-ಸಿಲಿಂಡರ್ ಮೋಟರ್ 7,600 ಆರ್‌ಪಿಎಂನಲ್ಲಿ 10.84 ಬಿಹೆಚ್‌ಪಿ ಪವರ್ ಮತ್ತು 6,000 ಆರ್‌ಪಿಎಂನಲ್ಲಿ 11.6 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ನೇಪಾಳದಲ್ಲಿ ಬಿಡುಗಡೆಗೊಂಡ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಇನ್ನು 125 ಸಿಸಿ ರೂಪಾಂತರವನ್ನು 9.4 ಬಿಹೆಚ್‌ಪಿ ಮತ್ತು 8.2 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವಂತೆ ಟ್ಯೂನ್ ಮಾಡಲಾಗಿದೆ. ಆದರ್ ಭಾರತದಲ್ಲಿ 160 ಸಿಸಿ ಎಂಜಿನ್ ಅನ್ನು ಮಾತ್ರ ನೀಡಲಾಗಿದೆ.

ನೇಪಾಳದಲ್ಲಿ ಬಿಡುಗಡೆಗೊಂಡ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಈ ಮ್ಯಾಕ್ಸಿ ಸ್ಕೂಟರ್ ನಲ್ಲಿ ಪೂರ್ಣ ಗಾತ್ರದ ಹೆಲ್ಮೆಟ್ ಮತ್ತು 7 ಲೀಟರ್ ಸಾಮರ್ಥ್ಯದ ಇಂಧನ ಟ್ಯಾಂಕ್‌ಗಾಗಿ ಅಂಡರ್-ಸೀಟ್ ಸ್ಟೋರೇಜ್ ಸ್ಪೇಸ್ ಅನ್ನು ನೀಡಿದೆ. ಇನ್ನು ಈ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಗ್ಲೋಸಿ ರೆಡ್, ಮ್ಯಾಟ್ ಬ್ಲೂ, ಗ್ಲೋಸಿ ವೈಟ್ ಮತ್ತು ಮ್ಯಾಟ್ ಬ್ಲ್ಯಾಕ್‌ ಎಂಬ ನಾಲ್ಕು ಬಣ್ಣಗಳಲ್ಲಿ ಲಭ್ಯವಿದೆ.

Most Read Articles

Kannada
English summary
Aprilia Sxr 160 Launched. raed In Kannada.
Story first published: Thursday, March 11, 2021, 19:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X