Just In
Don't Miss!
- News
ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ: ಹೊಸ ದಾಖಲೆ ಸೃಷ್ಟಿ
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅನಾವರಣವಾಯ್ತು ಬಹುನಿರೀಕ್ಷಿತ ಎಪ್ರಿಲಿಯಾ ಟುವೊನೊ 660 ಬೈಕ್
ಎಪ್ರಿಲಿಯಾ ಕಂಪನಿಯು ತನ್ನ ಹೊಸ ಟುವೊನೊ 660 ಮಿಡಲ್-ವೈಟ್ ನೇಕೆಡ್ ಬೈಕನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಈ ಹೊಸ ಟುವೊನೊ 660 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿಯು ಬಿಡುಗಡೆಯಾಗಲಿದೆ.

ಎಪ್ರಿಲಿಯಾ ಟುವೊನೊ 660 ಮಿಡಲ್-ವೈಟ್ ನೇಕೆಡ್ ಬೈಕ್ ಆರ್‍ಎಸ್ 660 ಮಾದರಿಯನ್ನು ಆಧರಿಸಿದೆ. ಆದರೆ ವಿನ್ಯಾಸವನ್ನು ಟುವೊನೊ ವಿ4 ಮಾದರಿಯಿಂದ ವಿನ್ಯಾಸ ಸ್ಫೂರ್ತಿಯನ್ನು ಪಡೆದಿದೆ. ಈ ಹೊಸ ಎಪ್ರಿಲಿಯಾ ಟುವೊನೊ 660 ಬೈಕ್ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹೊಸ ಎಪ್ರಿಲಿಯಾ ಸೂಪರ್ ಬೈಕ್ ವಿಶಿಷ್ಟವಾದ ಮೂರು-ಪಾಡ್ ಹೆಡ್ ಲ್ಯಾಂಪ್ ಸೆಟಪ್ ಅನ್ನು ಹೊಂದಿದೆ,

ಹೊಸ ಎಪ್ರಿಲಿಯಾ ಟುವೊನೊ 660 ಮಿಡಲ್-ವೈಟ್ ನೇಕೆಡ್ ಬೈಕ್ ಸಿಂಗಲ್-ಪೀಸ್ ಹ್ಯಾಂಡಲ್‌ಬಾರ್, ಇಂಟಿಗ್ರೇಟೆಡ್ ಡಿಆರ್‌ಎಲ್‌ಗಳನ್ನು ಹೊಂದಿರುವ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು, ಸ್ಪ್ಲಿಟ್-ಸೀಟ್, ಬೆಲ್ಲಿ ಅಂಡರ್ ಎಕ್ಸಾಸ್ಟ್ ಮತ್ತು ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಈ ಹೊಸ ಎಪ್ರಿಲಿಯಾ ಸೂಪರ್ ಬೈಕಿನಲ್ಲಿ ಪ್ಯಾರೆಲೆಲ್-ಟ್ವಿನ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 94 ಬಿಹೆಚ್‍ಪಿ ಪವರ್ ಉತ್ಪಾದಿಸುತ್ತದೆ. ಎಪ್ರಿಲಿಯಾ ಆರ್‍ಎಸ್ 660 ಬೈಕಿನಲ್ಲಿ ಇದೇ ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ಬೈಕಿನಲ್ಲಿ ವ್ಹೀಲ್ ಕಂಟ್ರೋಲ್, ಕಾರ್ನರಿಂಗ್ ಎಬಿಎಸ್, ಕ್ರೂಸ್ ಕಂಟ್ರೋಲ್, ಐದು ವಿಭಿನ್ನ ರೈಡ್ ಮೋಡ್‌ಗಳು ಮತ್ತು ಎರಡು-ಹಂತದ ಕ್ವಿಕ್-ಶಿಫ್ಟರ್ ಒಳಗೊಂಡಿವೆ. ಈ ಬೈಕಿನಲ್ಲಿ 5 ಇಂಚಿನ ಟಿಎಫ್‌ಟಿ ಸ್ಪ್ಲಿಟ್-ಸ್ಕ್ರೀನ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಎಪ್ರಿಲಿಯಾ ಟುವೊನೊ 660 ಬೈಕಿನಲ್ಲಿ 41 ಎಂಎಂ ಸಸ್ಪೆಂಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಯುಎಸ್ಡಿ ಫೋರ್ಕ್ಸ್ ಕಯಾಬಾ ಯುನಿಟ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ.

ಇನ್ನು ಬೈಕಿನಲ್ಲಿ ಸುರಕ್ಷತೆ ವಿಭಾಗದಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುದಾದರೆ, ಈ ಎಪ್ರಿಲಿಯಾ ಸೂಪರ್ ಬೈಕಿನ ಮುಂಭಾಗದಲ್ಲಿ ಡ್ಯುಯಲ್-ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡಿಸ್ಕ್-ಬ್ರೇಕ್ ಅನ್ನು ನೀಡಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಎಪ್ರಿಲಿಯಾ ಆರ್‍ಎಸ್ ಟುವೊನೊ ಬೈಕನ್ನು ಭಾರತದಕ್ಕೆ ಸಿಬಿಯು ಮಾರ್ಗದ ಮೂಲಕ ಆಮದು ಮಾಡಿಕೊಳ್ಳಬಹುದು. ಎಪ್ರಿಲಿಯಾ ಆರ್‍ಎಸ್660 ಬೈಕ್ ಎರಡು ರೀತಿಯ ಬಣ್ಣಗಳ ಆಯ್ಕೆಯನ್ನು ಹೊಂದಿರಲಿದೆ.

ಎಪ್ರಿಲಿಯಾ ಟುವೊನೊ 660 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಇದೇ ವರ್ಷ ಬಿಡುಗಡೆಯಾಗಲಿದೆ. ಈ ಎಪ್ರಿಯಾ ಟುವೊನೊ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಬಿಆರ್ 650 ಆರ್, ಕವಾಸಕಿ ನಿಂಜಾ 650 ಮತ್ತು ಝಡ್‍ಡ್ಎಕ್ಸ್-6 ಆರ್ ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.