ಶೀಘ್ರದಲ್ಲೇ ಹೊಸ ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದೆ ಎಥರ್

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಎಥರ್ ಎನರ್ಜಿ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳೊಂದಿಗೆ ಗ್ರಾಹಕರನ್ನು ಸೆಳೆಯುವ ಯೋಜನೆಯಲ್ಲಿದ್ದು, ಹೊಸ ಉತ್ಪನ್ನಗಳಿಗಾಗಿ ಸಾರಿಗೆ ಇಲಾಖೆಯಲ್ಲಿ ಪೇಟೆಂಟ್ ದಾಖಲಿಸಿದೆ.

ಶೀಘ್ರದಲ್ಲೇ ಹೊಸ ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದೆ ಎಥರ್

ಎಥರ್ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ವೈಶಿಷ್ಟ್ಯತೆ ಹೊಂದಿರುವ ಮ್ಯಾಕ್ಸಿ ಸ್ಕೂಟರ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಕೇಂದ್ರ ಸಾರಿಗೆ ಇಲಾಖೆಯಲ್ಲಿ ದಾಖಲಿಸಲಾಗಿರುವ ಹಕ್ಕು ಪ್ರತಿಯಲ್ಲಿ ಎಥರ್ ಹೊಸ ಮ್ಯಾಕ್ಸಿ ಸ್ಕೂಟರ್ ಮೊದಲ ಚಿತ್ರವು ಬಹಿರಂಗವಾಗಿದೆ. ಹೊಸ ಸ್ಕೂಟರ್ ಮಾದರಿಯು ಶೀಘ್ರದಲ್ಲೇ ಉತ್ಪಾದನಾ ಮಾದರಿಯನ್ನು ಪಡೆದುಕೊಳ್ಳಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆ ಪೂರೈಕೆಗೆ ಹೊಸ ಸ್ಕೂಟರ್ ಉತ್ತಮ ಮಾದರಿಯಾಗಲಿದೆ.

ಶೀಘ್ರದಲ್ಲೇ ಹೊಸ ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದೆ ಎಥರ್

ಎಥರ್ ಹೊಸ ಸ್ಕೂಟರಿನ ರೇಖಾಚಿತ್ರವನ್ನು ಹೊರತುಪಡಿಸಿ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲವಾದರೂ ಹೊಸ ಸ್ಕೂಟರ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಮತ್ತು ಉತ್ತಮ ಬ್ಯಾಟರಿ ಪ್ಯಾಕ್ ಹೊಂದಿರಲಿದೆ.

ಶೀಘ್ರದಲ್ಲೇ ಹೊಸ ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದೆ ಎಥರ್

ಸದ್ಯ ಗ್ರಾಹಕರು ಎಲೆಕ್ಟ್ರಿಕ್ ವಾಹನಗಳಲ್ಲಿ ಅತಿ ಕಡಿಮೆ ಅವಧಿಯಲ್ಲಿ ಗರಿಷ್ಠ ಬ್ಯಾಟರಿ ಚಾರ್ಜ್‌ನೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ನೀರಿಕ್ಷಿಸುತ್ತಿದ್ದು, ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಥರ್ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಜೋಡಣೆ ಮಾಡುವ ಸಿದ್ದತೆಯಲ್ಲಿದೆ.

ಶೀಘ್ರದಲ್ಲೇ ಹೊಸ ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದೆ ಎಥರ್

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ. ಸ್ಟ್ಯಾಂಡರ್ಡ್ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, 450ಎಕ್ಸ್ ಸೀರಿಸ್ 1 ಸ್ಕೂಟರ್ ಮಾದರಿಯು ಸ್ಪೆಷಲ್ ಎಡಿಷನ್ ಆಗಿ ಮಾರಾಟಗೊಳ್ಳುತ್ತಿದೆ.

ಶೀಘ್ರದಲ್ಲೇ ಹೊಸ ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದೆ ಎಥರ್

450ಎಕ್ಸ್ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 1.60 ಲಕ್ಷ ಮತ್ತು 450 ಪ್ಲಸ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ.1.41 ಲಕ್ಷ ಬೆಲೆ ಹೊಂದಿದ್ದು, ಬಣ್ಣದ ಆಯ್ಕೆ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಾದ 450ಎಕ್ಸ್ ಮಾದರಿಯಲ್ಲೇ ಸ್ಪೆಷಲ್ ಎಡಿಷನ್ ಕೂಡಾ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಶೀಘ್ರದಲ್ಲೇ ಹೊಸ ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದೆ ಎಥರ್

ಸ್ಟ್ಯಾಂಡರ್ಡ್ 450 ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರೇ, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆ ಹೊಂದಿದೆ.

ಶೀಘ್ರದಲ್ಲೇ ಹೊಸ ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದೆ ಎಥರ್

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಶೀಘ್ರದಲ್ಲೇ ಹೊಸ ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದೆ ಎಥರ್

ಆದರೆ ಹೊಸದಾಗಿ ಬಿಡುಗಡೆಯಾಗಲಿರುವ ಎಥರ್ ಇವಿ ಸ್ಕೂಟರ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬ್ಯಾಟರಿ ರೇಂಜ್ ವೈಶಿಷ್ಟ್ಯತೆಯೊಂದಿಗೆ ಬೆಲೆಯಲ್ಲಿ ದುಬಾರಿಯಾಗಿರಲಿದ್ದು, ವಾಹನ ಮಾರಾಟ ವ್ಯಾಪ್ತಿ ಹೆಚ್ಚಿಸುತ್ತಿರುವುದರಿಂದ ಉತ್ಪನ್ನಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ.

ಶೀಘ್ರದಲ್ಲೇ ಹೊಸ ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದೆ ಎಥರ್

ಚಾರ್ಜಿಂಗ್ ಸೌಲಭ್ಯಗಳಿಗೆ ಅನುಗುಣವಾಗಿ ದೇಶದ ಪ್ರಮುಖ 11 ಮಾಹಾನಗರಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲವನ್ನು ವಿಸ್ತರಿಸಿರುವ ಎಥರ್ ಕಂಪನಿಯು ಇದೀಗ 2ನೇ ಹಂತದ ವಾಹನ ಮಾರಾಟ ಮಳಿಗೆಗಳ ವಿಸ್ತರಣೆ ಯೋಜನೆ ಅಡಿಯಲ್ಲಿ ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡುತ್ತಿದ್ದು, ಈ ವರ್ಷದ ಅಂತ್ಯಕ್ಕೆ ಒಟ್ಟು 15 ರಾಜ್ಯಗಳ 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವುದಾಗಿ ಭರವಸೆ ನೀಡಿದೆ.

Most Read Articles

Kannada
English summary
New Ather Electric Scooter Patented In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X