Just In
- 1 hr ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 2 hrs ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 2 hrs ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 4 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಬೆನೆಲ್ಲಿ 502ಸಿ ಬೈಕ್
ಇಟಲಿ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬೆನೆಲ್ಲಿ ತನ್ನ ಹೊಸ 502ಸಿ ಕ್ರೂಸರ್ ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಬೆನೆಲ್ಲಿ ಕಂಪನಿಯು ಈ ಹೊಸ 502ಸಿ ಕ್ರೂಸರ್ ಬೈಕಿನ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ.
ಈ ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ನಾಳೆ (ಜುಲೈ 29) ಭಾರತದಲ್ಲಿ ಬಿಡುಗಡೆಯಾಗಲಿದೆ. ಇನ್ನುಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ಈ ಕ್ರೂಸರ್ ಬೈಕನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ,10,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಈ ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬ್ರ್ಯಾಂಡ್ನ 500 ಸಿಸಿ ಪ್ಲಾಟ್ಫಾರ್ಮ್ ಅನ್ನು ಆಧರಿಸಿದೆ. ಈ ಪ್ಲಾಟ್ಫಾರ್ಮ್ ಲಿಯಾನ್ಸಿನೊ ಮತ್ತು ಟಿಆರ್ಕೆ 502 ಮಾದರಿಗಳಿಗೂ ಆಧಾರವಾಗಿದೆ.
ಈ ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ ಲಿಯಾನ್ಸಿನೊ ಮಾದರಿಗಿಂತ ಮೇಲಿನ ಸ್ಥಾನದಲ್ಲಿ ಇರಿಸಬಹುದು. ಈ ಹೊಸ ಕ್ರೂಸರ್ ಬೈಕಿನ ಬೆಲೆಯು ಸುಮಾರು ರೂ.5 ಲಕ್ಷವಿರಬಹುದು ಎಂದು ನಿರೀಕ್ಷಿಸುತ್ತೇವೆ. ಇನ್ನು ಹೊಸ ಬೈಕಿನ ಅರ್ಬನ್ ಕ್ರೂಸರ್ ವಿನ್ಯಾಸವು ಹೆಚ್ಚು ಜನಪ್ರಿಯವಾದ ಡುಕಾಟಿ ಡಯಾವೆಲ್ 1260 ನಿಂದ ಸ್ಫೂರ್ತಿ ಪಡೆದಿದೆ.
ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕಿನ ಹೆಡ್ಲೈಟ್ ಹೊರತುಪಡಿಸಿ, ದೊಡ್ಡ ಫ್ಯೂಯಲ್ ಟ್ಯಾಂಕ್, ಸೀಟ್ ವಿನ್ಯಾಸ ಮತ್ತು ಸ್ಪ್ಲಿಟ್ ಟೈಲ್-ಲ್ಯಾಂಪ್ಗಳು ಸೇರಿದಂತೆ ಉಳಿದ ವಿನ್ಯಾಸವು ಡಯಾವೆಲ್ 1260 ಬೈಕಿನಿಂದ ಸ್ಫೂರ್ತಿ ಪಡೆದಿದೆ.
ಬೆನೆಲ್ಲಿ 502ಸಿ ಕ್ರೂಸರ್ ಬೈಕಿನಲ್ಲಿ 500 ಸಿಸಿ ಲಿಕ್ವಿಡ್ ಕೂಲ್ಡ್ ಟ್ವಿನ್ ಎಂಜಿನ್ ಅನ್ನು ಹೊಂದಿದೆ, ಇದೇ ಎಂಜಿನ್ ಅನ್ನು ಬೆನೆಲ್ಲಿ ಲಿಯಾನ್ಸಿನೊ ಮತ್ತು ಟಿಆರ್ಕೆ 502 ಬೈಕ್ ಗಳಿಗೆ ನೀಡಲಾಗಿದೆ.
ಈ 500 ಸಿಸಿ ಎಂಜಿನ್ ಎಂಜಿನ್ 8,500 ಆರ್ಪಿಎಂನಲ್ಲಿ 47.6 ಬಿಹೆಚ್ಪಿ ಪವರ್ ಮತ್ತು 6,000 ಆರ್ಪಿಎಂನಲ್ಲಿ 46 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ಬಾಕ್ಸ್ಗೆ ಜೋಡಿಸಲಾಗಿದೆ.
ಸ್ಟೀಲ್ ಟ್ರೆಲ್ಲಿಸ್ ಫ್ರೇಮ್ ಅನ್ನು ಆಧರಿಸಿರುವ ಬೆನೆಲ್ಲಿ 502ಸಿ ಕ್ರೂಸರ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಯುಎಸ್ಡಿ ಫ್ರಂಟ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಪ್ರಿಲೋಡ್-ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಸೆಟಪ್ ಅನ್ನು ಒಳಗೊಂಡಿದೆ.
ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 4-ಪಿಸ್ಟನ್ ಕ್ಯಾಲಿಪರ್ಗಳೊಂದಿಗೆ ಟ್ವಿನ್ 280 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ ಡ್ಯುಯಲ್ ಪಿಸ್ಟನ್ ಕ್ಯಾಲಿಪರ್ನೊಂದಿಗೆ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಕೂಡ ಹೊಂದಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
ಈ ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕ್ 2,280 ಎಂಎಂ ಉದ್ದ ಮತ್ತು 1,140 ಎಂಎಂ ಎತ್ತರವನ್ನು ಹೊಂದಿದೆ. ಇನ್ನು ಈ ಬೈಕ್ 1,600 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಇನ್ನು ಈ ಬೈಕ್ 750 ಎಂಎ ಎತ್ತರದ ಸೀಟ್ ಅನ್ನು ಹೊಂದಿದೆ.
ಇನ್ನು ಬೆನೆಲ್ಲಿ 502ಸಿ ಕ್ರೂಸರ್ ಬೈಕಿನಲ್ಲಿ 21-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ. ಈ ಕ್ರೂಸರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕವಾಸಕಿ ವಲ್ಕನ್ ಎಸ್ ಬೈಕಿಗೆ ಪೈಪೋಟಿ ನೀಡುತ್ತದೆ.