ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಇಟಲಿಯ ಮಿಲನ್‌ನಲ್ಲಿ ನಡೆಯುತ್ತಿರುವ EICMA ಮೋಟಾರ್‌ಸೈಕಲ್ ಶೋನಲ್ಲಿ ಬೆನೆಲ್ಲಿ ಕಂಪನಿಯು ತನ್ನ 2022ರ ಲಿಯಾನ್‍‍ಸಿನೊ 125 ಬೈಕ್ ಅನ್ನು ಪ್ರದರ್ಶಿಸಿದೆ. ಈ ಹೊಸ ಬೆನೆಲ್ಲಿ ಲಿಯಾನ್‍‍ಸಿನೊ 125( Benelli Leoncino 125) ಬೈಕ್ ಮುಂದಿನ ಯುರೋಪಿಯನ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಬೆನೆಲ್ಲಿ ಲಿಯಾನ್‍‍ಸಿನೊ 125 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವುದರ ಬಗ್ಗೆ ಯಾವುದೇ ಮಾಹಿತಿಗಳು ಬಹಿರಂಗವಾಗಿಲ್ಲ. ಈ ಬೈಕ್ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳು ಕಡಿಮೆಯಾಗಿದೆ. ಚೈನೀಸ್ ಒಡೆತನದ ಇಟಾಲಿಯನ್ ದ್ವಿಚಕ್ರ ವಾಹನ ತಯಾರಕರ ಈ ಬೈಕ್ ಗ್ರೇ ಮತ್ತು ಗ್ರೀನ್ ಎಂಬ ಎರಡು ಎರಡು ಬಣ್ಣಗಳ ಆಯ್ಕೆಗಳಲ್ಲಿ ನೀಡುತ್ತದೆ. ಈ ಬೆನೆಲ್ಲಿ ಲಿಯಾನ್‍‍ಸಿನೊ 125 ಬೈಕ್ ಹಿರಿಯ ಸಹೋದರ ಮಾದರಿಗಳಾದ ಲಿಯಾನ್‍‍ಸಿನೊ 250 ಮತ್ತು ಲಿಯಾನ್‍‍ಸಿನೊ 500 ನಿಂದ ಸ್ಟೈಲಿಂಗ್ ಅಂಶಗಳನ್ನು ಒಳಗೊಂಡಿದೆ.

ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಹೀಗಾಗಿ, ಸ್ಟೈಲಿಂಗ್ ಅಂಶಗಳು ರೆಟ್ರೊ-ಪ್ರೇರಿತ ವಿನ್ಯಾಸವನ್ನು ಒಳಗೊಂಡಿರುತ್ತವೆ. ಲಿಯಾನ್‍‍ಸಿನೊ 125 ಹೆಚ್ಚಿನ ಸ್ಥಳಾಂತರದ ಮಾದರಿಗಳಂತೆಯೇ, ಮುಂಭಾಗದ ಫೆಂಡರ್‌ನಲ್ಲಿ ಲಯನ್ ಆಫ್ ಪೆಸಾರೊ ಮೋಟಿಫ್ ಅನ್ನು ಸಹ ಹೊಂದಿದೆ. ಈ ಬೈಕಿನಲ್ಲಿರುವ ಇತರ ಸ್ಟೈಲಿಂಗ್ ಅಂಶಗಳು ಸ್ಪ್ಲಿಟ್-ಸ್ಟೈಲ್ ಅಲಾಯ್ ವೀಲ್‌ಗಳು, ಸಿಂಗಲ್-ಪೀಸ್ ಸೀಟ್, ಸೈಡ್-ಸ್ಲಂಗ್ ಎಕ್ಸಾಸ್ಟ್ ಮತ್ತು ರಿಯರ್-ಫೆಂಡರ್ ಮೌಂಟೆಡ್ ನಂಬರ್‌ಪ್ಲೇಟ್ ಅನ್ನು ಒಳಗೊಂಡಿರುತ್ತವೆ.

ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಬೆನೆಲ್ಲಿ ಲಿಯಾನ್‍‍ಸಿನೊ 125 ಬೈಕ್ ಯಾಂತ್ರಿಕ ವಿಶೇಷಣಗಳು, ಇದರಲ್ಲಿ 125 ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್ ಅನ್ನು ಒಳಗೊಂಡಿವೆ, ಈ ಎಂಜಿನ್ 12.8 ಬಿಹೆಚ್‍ಪಿ ಪವರ್ ಮತ್ತು 10 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೂಂದಿದೆ.

ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಈ ಹೊಸ ಲಿಯಾನ್‍‍ಸಿನೊ 125 ಬೈಕ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಅಪ್ ಸೈಡ್ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದ ಮೊನೊ-ಶಾಕ್ ಸೆಟಪ್ ಅನ್ನು ಒಳಗೊಂಡಿದೆ. ಈ ಬೈಕಿನಲ್ಲಿ 17-ಇಂಚಿನ ವ್ಹೀಲ್ ಗಳನ್ನು ನೀಡಲಾಗಿದೆ.

ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಇನ್ನು ಪ್ರಮುಖವಾಗಿ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಪೆಟಲ್-ಟೈಪ್ ಡಿಸ್ಕ್‌ಗಳನ್ನು ಒಳಗೊಂಡಿವೆ. ಇದರೊಂದಿಗೆ ಕಾಂಭೈಡ್ ಬ್ರೇಕಿಂಗ್ ಸಿಸ್ಟಂ ಅನ್ನು ಹೊಂದಿದೆ.

ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಬೆನೆಲ್ಲಿ ಲಿಯಾನ್‍‍ಸಿನೊ 125 ಬೈಕಿನ ಹಿರಿಯ ಸಹೋದರ ಮಾದರಿ ಲಿಯಾನ್‍‍ಸಿನೊ 500 ಮಾರಾಟವಾಗುತ್ತಿದೆ. ಈ ಮಿಡಲ್ ವೇಟ್ ಸ್ಟ್ರೀಟ್ ಸ್ಕ್ರ್ಯಾಂಬ್ಲರ್ ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ 2021ರ ಬೆನೆಲ್ಲಿ ಲಿಯಾನ್‍‍ಸಿನೊ 500 ಬೈಕಿನಲ್ಲಿ ಆಕರ್ಷಕ ಫೀಚರ್ ಗಳನ್ನು ಹೊಂಡಿದೆ. ಇನ್ನು ಈ ಬೈಕಿನಲ್ಲಿ 17 ಇಂಚಿನ ಅಲಾಯ್ ವ್ಹೀಲ್ ಗಳನ್ನು ಅಳವಡಿಸಲಾಗಿದೆ.

ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಬಿಎಸ್-6 ಬೆನೆಲ್ಲಿ ಲಿಯಾನ್‍‍ಸಿನೊ 500 ಬೈಕಿನ ಸ್ಟೈಲಿಂಗ್ ಬಗ್ಗೆ ಹೇಳುವುದಾದರೆ, ರೌಂಡ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌, ಲೋ ಸೆಟ್ ಹ್ಯಾಂಡಲ್‌ಬಾರ್‌, ಹಿಂಭಾಗದಲ್ಲಿ ಮಿನಿಮಲ್ ಪ್ಯಾನೆಲ್ ಮತ್ತು ಮುಂಭಾಗದ ಫೆಂಡರ್‌ನಲ್ಲಿ ಮೆಟಾಲಿಕ್ ಆರ್ನಾಮೆಂಟ್‍‍ಗಳಿವೆ. ಇದರಂದಿಗೆ ಎಲ್ಇಡಿ ಡಿಆರ್‍ಎಲ್ ಹಾಗೂ ಎಲ್ಇಡಿ ಟರ್ನ್ ಇಂಡಿಕೇಟರ್‍‍‍ಗಳನ್ನು ಹೊಂದಿದೆ.

ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಇದರೊಂದಿಗೆ ಈ ಬೈಕಿನಲ್ಲಿ ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕ್ಲಸ್ಟರ್ ಓಡೋ ಮೀಟರ್, ಫ್ಯೂಯಲ್ ಗೇಜ್, ಸ್ಪೀಡ್ ಮತ್ತು ಇತರ ಮಾಹಿತಿಗಳನ್ನು ಪ್ರದರ್ಶಿಸುತ್ತದೆ. ಈ ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಅಪ್‌ಸೈಡ್ ಡೌನ್ 50 ಎಂಎಂ ಯುಎಸ್‌ಡಿ ಫೋರ್ಕ್ಸ್ ಹಾಗೂ ಹಿಂಭಾಗದಲ್ಲಿ ಮೊನೊ ಶಾಕ್ ಸೆಟಪ್ ಅನ್ನು ಹೊಂದಿದೆ. ಇವುಗಳು ಪ್ರಿ ಲೋಡ್ ಅಡ್ಜಸ್ಟ್ ಮೆಂಟ್ ಒಳಗೊಂಡಿದೆ.

ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಬೆನೆಲ್ಲಿ ತನ್ನ ಹೊಸ 502ಸಿ ಕ್ರೂಸರ್ ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬ್ರ್ಯಾಂಡ್‌ನ 500 ಸಿಸಿ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಈ ಪ್ಲಾಟ್‌ಫಾರ್ಮ್ ಲಿಯಾನ್‍‍ಸಿನೊ ಮತ್ತು ಟಿಆರ್‌ಕೆ 502 ಮಾದರಿಗಳಿಗೂ ಆಧಾರವಾಗಿದೆ. ಹೊಸ ಬೆನೆಲ್ಲಿ 502ಸಿ ಬೈಕ್ ಮ್ಯಾಟ್ ಕಾಗ್ನ್ಯಾಕ್ ರೆಡ್ ಮತ್ತು ಮ್ಯಾಟ್ ಬ್ಲ್ಯಾಕ್ ಬಣ್ಣಗಳಲ್ಲಿ ಆಯ್ಕೆಗಳನ್ನು ಲಭ್ಯವಿದೆ.

ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಇನ್ನು ಹೊಸ ಬೈಕಿನ ಅರ್ಬನ್ ಕ್ರೂಸರ್ ವಿನ್ಯಾಸವು ಹೆಚ್ಚು ಜನಪ್ರಿಯವಾದ ಡುಕಾಟಿ ಡಯಾವೆಲ್ 1260 ನಿಂದ ಸ್ಫೂರ್ತಿ ಪಡೆದಿದೆ. ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕಿನಲ್ಲಿ ದೊಡ್ಡ ಫ್ಯೂಯಲ್ ಟ್ಯಾಂಕ್, ಸಿಂಗಲ್ ಪೀಸ್ ಸೀಟ್, ಬಲ್-ಬ್ಯಾರೆಲ್ ಎಕ್ಸಾಸ್ಟ್ ಮತ್ತು ಲಂಬವಾಗಿ ಜೋಡಿಸಲಾದ ಸ್ಪ್ಲಿಟ್ ಟೈಲ್-ಲ್ಯಾಂಪ್‌ಗಳು ಹೊಂದಿದೆ. ಇನ್ನು ಈ ಬೈಕಿನಲ್ಲಿ ಸಂಪೂರ್ಣವಾದ ಡಿಜಿಟಲ್ ಟಿಎಫ್ ಡಿಸ್ ಪ್ಲೇಯನ್ನು ಹೊಂದಿದೆ.

ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕಿನಲ್ಲಿ 500 ಸಿಸಿ ಲಿಕ್ವಿಡ್ ಕೂಲ್ಡ್ ಟ್ವಿನ್ ಎಂಜಿನ್ ಅನ್ನು ಹೊಂದಿದೆ, ಇದೇ ಎಂಜಿನ್ ಅನ್ನು ಬೆನೆಲ್ಲಿ ಲಿಯಾನ್‍‍ಸಿನೊ ಮತ್ತು ಟಿಆರ್‌ಕೆ 502 ಬೈಕ್ ಗಳಿಗೆ ನೀಡಲಾಗಿದೆ. ಈ 500ಸಿಸಿ ಎಂಜಿನ್ ಎಂಜಿನ್ 8,500 ಆರ್‌ಪಿಎಂನಲ್ಲಿ 46 ಬಿಹೆಚ್‍ಪಿ ಪವರ್ ಮತ್ತು 6,000 ಆರ್‌ಪಿಎಂನಲ್ಲಿ 45 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಆಕರ್ಷಕ ವಿನ್ಯಾಸದಲ್ಲಿ ಅನಾವರಣಗೊಂಡ Benelli Leoncino 125 ಬೈಕ್

ಸ್ಟೀಲ್ ಟ್ರೆಲ್ಲಿಸ್ ಫ್ರೇಮ್ ಅನ್ನು ಆಧರಿಸಿರುವ ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರಲ್ಲಿ ಯುಎಸ್ಡಿ ಫ್ರಂಟ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಪ್ರಿಲೋಡ್-ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 4-ಪಿಸ್ಟನ್ ಕ್ಯಾಲಿಪರ್‌ಗಳೊಂದಿಗೆ ಟ್ವಿನ್ 280 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ ಡ್ಯುಯಲ್ ಪಿಸ್ಟನ್ ಕ್ಯಾಲಿಪರ್‌ನೊಂದಿಗೆ 240 ಎಂಎಂ ಡಿಸ್ಕ್ ಬ್ರೇಕ್ ಹೊಂದಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

Most Read Articles

Kannada
English summary
New benelli leoncino 125 unveiled at eicma details
Story first published: Friday, November 26, 2021, 12:36 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X