ಬಿಡುಗಡೆಗೆ ಸಜ್ಜಾದ ಐಷಾರಾಮಿ BMW C 400 GT ಮ್ಯಾಕ್ಸಿ-ಸ್ಕೂಟರ್

ಐಷಾರಾಮಿ ದ್ವಿಚಕ್ರ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಮೋಟೊರಾಡ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇತ್ತೀಚೆಗೆ ಬಿಎಂಡಬ್ಲ್ಯು ಕಂಪನಿಯು ತನ್ನ ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ಗಾಗಿ ಹೊಸ ಆಕರ್ಷಕ ಟೀಸರ್ ಅನ್ನು ಬಿಡುಗಡೆಗೊಳಿಸಿತು.

ಬಿಡುಗಡೆಗೆ ಸಜ್ಜಾದ ಐಷಾರಾಮಿ BMW C 400 GT ಮ್ಯಾಕ್ಸಿ-ಸ್ಕೂಟರ್

ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ(BMW C 400 GT) ಐಷಾರಾಮಿ ಮ್ಯಾಕ್ಸಿ-ಸ್ಕೂಟರ್ ಆಗಿದೆ. ಬಹು ಟೀಸರ್‌ಗಳ ನಂತರ,ಬಿಎಂಡಬ್ಲ್ಯು ಮೋಟೊರಾಡ್ ಇಂಡಿಯಾ ಕೊನೆಗೂ ತನ್ನ ಮುಂಬರುವ ಸಿ 400 ಜಿಟಿ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ. ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಪ್ರೀಮಿಯಂ ಮ್ಯಾಕ್ಸಿ-ಸ್ಕೂಟರ್ ಇದೇ ತಿಂಗಳ 12 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ಕಂಪನಿ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಖಚಿತಪಡಿಸಿದೆ.

ಬಿಡುಗಡೆಗೆ ಸಜ್ಜಾದ ಐಷಾರಾಮಿ BMW C 400 GT ಮ್ಯಾಕ್ಸಿ-ಸ್ಕೂಟರ್

ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಭಾರತದಲ್ಲಿ ಬಿಎಂಡಬ್ಲ್ಯು ಮೊಟೊರಾಡ್‌ನ ಮೊದಲ ಮ್ಯಾಕ್ಸಿ-ಸ್ಕೂಟರ್ ಆಗಿದ್ದು, ಇದು 349 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್‌ನಿಂದ ನಡೆಸಲ್ಪಡುವ ಪ್ರೀಮಿಯಂ ಮ್ಯಾಕ್ಸಿ-ಸ್ಕೂಟರ್ ಆಗಿ ಸ್ಥಾನ ಪಡೆಯಲಿದೆ. ಈ ಮ್ಯಾಕ್ಸಿ-ಸ್ಕೂಟರ್ ಪ್ರೀಮಿಯಂ ಬೆಲೆಯನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸುತ್ತೇವೆ. ಪ್ರೀಮಿಯಂ ಸ್ಕೂಟರ್ ಗ್ರಾಹಕರನ್ನು ಇದು ಸೆಳೆಯುತ್ತದೆ.

ಬಿಡುಗಡೆಗೆ ಸಜ್ಜಾದ ಐಷಾರಾಮಿ BMW C 400 GT ಮ್ಯಾಕ್ಸಿ-ಸ್ಕೂಟರ್

ಈ ಹೊಸ ಐಷಾರಾಮಿ ಮ್ಯಾಕ್ಸಿ-ಸ್ಕೂಟರ್ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭವಾಗಿದೆ. ಈ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್ ಖರೀದಿಸಲು ಬಯಸುವ ಗ್ರಾಹಕರು ಟೋಕನ್ ರೂ.1 ಲಕ್ಷದ ಟೋಕನ್ ಮೊತ್ತವನ್ನು ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು.

ಬಿಡುಗಡೆಗೆ ಸಜ್ಜಾದ ಐಷಾರಾಮಿ BMW C 400 GT ಮ್ಯಾಕ್ಸಿ-ಸ್ಕೂಟರ್

ಜಾಗತಿಕ ಪೋರ್ಟ್ಫೋಲಿಯೊದಲ್ಲಿರುವ ಬಿಎಂಡಬ್ಲ್ಯು ಕಂಪನಿಯ ಸಿ 400 ಜಿಟಿ ಮಾದರಿಯಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ. ದೊಡ್ಡ ಬದಲಾವಣೆಗಳಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ. ಬಿಎಂಡಬ್ಲ್ಯು ಸಿ 400 ಜಿಟಿ ಮಿಡ್ ಸೈಜ್ ಸ್ಕೂಟರ್ ಆರಾಮದಾಯಕವಾದ ಮಾದರಿಯಾಗಿದೆ.

ಬಿಡುಗಡೆಗೆ ಸಜ್ಜಾದ ಐಷಾರಾಮಿ BMW C 400 GT ಮ್ಯಾಕ್ಸಿ-ಸ್ಕೂಟರ್

ಇನ್ನು ಜಾಗತಿಕವಾಗಿ ಮಾರಾಟವಾಗುವ ಬಿಎಂಡಬ್ಲ್ಯು ಸಿ 400 ಜಿಟಿ ಮ್ಯಾಕ್ಸಿ ಸ್ಕೂಟರ್ ನಲ್ಲಿ 350 ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್‌ ಅನ್ನು ಹೊಂದಿದೆ, ಈ ಎಂಜಿನ್ ಎಂಜಿನ್‌ನೊಂದಿಗೆ ಹೊಸ 'ಇ-ಗ್ಯಾಸ್' ತಂತ್ರಜ್ಞಾನದಿಂದ (ನವೀಕರಿಸಿದ ಥ್ರೊಟಲ್-ಬೈ-ವೈರ್ ಸಿಸ್ಟಂ) ಪ್ರಯೋಜನವನ್ನು ಕೂಡ ಒಳಗೊಂಡಿದೆ.

ಬಿಡುಗಡೆಗೆ ಸಜ್ಜಾದ ಐಷಾರಾಮಿ BMW C 400 GT ಮ್ಯಾಕ್ಸಿ-ಸ್ಕೂಟರ್

ಇನ್ನು ಈ ಹೊಸ ಪ್ರೀಮಿಯಂ ಸ್ಕೂಟರ್ ನಲ್ಲಿ ಆಕ್ಸಿಜನ್ ಸೆನ್ಸರ್ ಮತ್ತು ನವೀಕರಿಸಿದ ಎಕ್ಸಾಸ್ಟ್ ಸಿಸ್ಟಂ ಸಹ ಹೊಂದಿದೆ. ಈ ಎಲ್ಲಾ ನವೀಕರಣಗಳು ಯುರೋ5 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿದೆ. ಇನ್ನು ಈ ಎಂಜಿನ್ 7.55 ಆರ್‌ಪಿಎಂನಲ್ಲಿ 33.5 ಬಿಹೆಚ್‍ಪಿ ಪವರ್ ಮತ್ತು 5,750 ಆರ್‌ಪಿಎಂನಲ್ಲಿ 139 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಕೂಡ ಹೊಂದಿದೆ.

ಬಿಡುಗಡೆಗೆ ಸಜ್ಜಾದ ಐಷಾರಾಮಿ BMW C 400 GT ಮ್ಯಾಕ್ಸಿ-ಸ್ಕೂಟರ್

ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಪ್ರೀಮಿಯಂ ಸ್ಕೂಟರ್ 139 ಕಿಲೋಮೀಟರ್ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಹೊಸ ಬಿಎಂಡಬ್ಲ್ಯು ಮ್ಯಾಕ್ಸಿ ಸ್ಕೂಟರ್ ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ನೀಡಲಾಗಿದೆ. ಇದರೊಂದಿಗೆ ಹೊಸ ಕ್ಲಚ್ ಸ್ಪ್ರಿಂಗ್‌ಗಳೊಂದಿಗೆ ನವೀಕರಿಸಲಾಗಿದೆ. ಇನ್ನು ಈ ಮ್ಯಾಕ್ಸಿ-ಸ್ಕೂಟರ್ ಆಲ್ಪೈನ್ ವೈಟ್, ಮೂನ್ವಾಲ್ಕ್‌ಗ್ರೇ ಮೆಟಾಲಿಕ್ ಮತ್ತು ಬ್ಲಾಕ್‌ಸ್ಟಾರ್ಮ್ ಮೆಟಾಲಿಕ್ ಎಂಬ ಮೂರು ಬಣ್ಣಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿದೆ.

ಬಿಡುಗಡೆಗೆ ಸಜ್ಜಾದ ಐಷಾರಾಮಿ BMW C 400 GT ಮ್ಯಾಕ್ಸಿ-ಸ್ಕೂಟರ್

ಇನ್ನು ಈ ಬಿಎಂಡಬ್ಲ್ಯು ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ನಲ್ಲಿ ಎಲ್‌ಇಡಿ ಲೈಟಿಂಗ್ ಸಿಸ್ಟಂ, ಸ್ಪೋರ್ಟಿ ವಿ-ಆಕಾರದ ಟ್ರಿಮ್ ಪ್ಯಾನಲ್ ಯುನಿಟ್ ಗಳು, ದೊಡ್ಡ-ಸ್ವರೂಪದ ವಿಂಡ್‌ಸ್ಕ್ರೀನ್, ಏರೋಡೈನಾಮಿಕ್ ವಿನ್ಯಾಸಗೊಳಿಸಲಾದ ಸೀಟ್ ಮತ್ತು ಹೆಚ್ಚಿನವು ಇದರ ಕೆಲವು ಪ್ರಮುಖ ಅಂಶಗಳನ್ನು ಒಳಗೊಂಡಿದೆ.

ಬಿಡುಗಡೆಗೆ ಸಜ್ಜಾದ ಐಷಾರಾಮಿ BMW C 400 GT ಮ್ಯಾಕ್ಸಿ-ಸ್ಕೂಟರ್

ಇನ್ನು ಇತ್ತೀಚೆಗೆ ನವೀಕರಿಸಿದ ಈ ಹೊಸ ಮಾದರಿಯು ಹೊಸ ಬ್ರೇಕ್‌ಗಳು ಮತ್ತು ಪರಿಷ್ಕೃತ ಆಟೋಮ್ಯಾಟಿಕ್ ಸ್ಟಿಬಿಲಿಟಿ ಕಂಟ್ರೋಲ್ (ಎಎಸ್‌ಸಿ) ಯೊಂದಿಗೆ ಬರುತ್ತದೆ. ಎರಡನೆಯದು ಲೋಡ್ ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಕೂಡ ಒಳಗೊಂಡಿರುತ್ತದೆ.

ಬಿಡುಗಡೆಗೆ ಸಜ್ಜಾದ ಐಷಾರಾಮಿ BMW C 400 GT ಮ್ಯಾಕ್ಸಿ-ಸ್ಕೂಟರ್

ಇದರೊಂದಿಗೆ ಬಿಎಂಡಬ್ಲ್ಯು ಮೊಟೊರಾಡ್ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಬಿಎಂಡಬ್ಲ್ಯು ಜಿ 310 ಜಿಎಸ್ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ, ಇದೀಗ ಬಿಎಂಡಬ್ಲ್ಯು ಕಂಪನಿಯು ಭಾರತದಲ್ಲಿ ಈ ಹೊಸ ಜಿ 310 ಜಿಎಸ್ ಬೈಕಿನ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದೆ. ಈ 2022ರ ಜಿ 310 ಜಿಎಸ್ ಬೈಕ್ ಟ್ರಿಪಲ್ ಬ್ಲಾಕ್. ಎಂಬ ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ, ಇತ್ತೀಚೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡ 2022ರ ಜಿ 310 ಜಿಎಸ್ ಬೈಕ್ ಟ್ರಿಪಲ್ ಬ್ಲ್ಯಾಕ್ ಎಂಬ ಹೊಸ ಬಣ್ಣವನ್ನು ಪಡೆದಿದೆ.ಈ ಹೊಸ ಬೈಕಿನಲ್ಲಿ ಹೊಸ ಬಣ್ಣದ ಆಯ್ಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. .

ಬಿಡುಗಡೆಗೆ ಸಜ್ಜಾದ ಐಷಾರಾಮಿ BMW C 400 GT ಮ್ಯಾಕ್ಸಿ-ಸ್ಕೂಟರ್

ಭಾರತೀಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ,6 ಲಕ್ಷಕ್ಕೆ ಬಿಡುಗಡೆಗೊಳಿಸಬಹುದು ಎಂದು ಅಂದಾಜಿಸಲಾಗಿದೆ. ಈ ಹೊಸ ಬಿಎಂಡಬ್ಲ್ಯು ಐಷಾರಾಮಿ ಮ್ಯಾಕ್ಸಿ-ಸ್ಕೂಟರ್ ಇದೇ ತಿಂಗಳ 12 ರಂದು ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ. ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಪ್ರೀಮಿಯಂ ಸ್ಕೂಟರ್ ಗಳನ್ನು ಇಷ್ಟಪಡುವ ಗ್ರಾಹಕರನ್ನು ಸೆಳೆಯಬಹುದು.

More from DriveSpark

Article Published On: Saturday, October 9, 2021, 14:49 [IST]
English summary
New bmw c 400g t launch on 12th october price engine feature details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+